ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿ 10ನೇ ಪಾಸಾದವರು ಅರ್ಜಿ ಸಲ್ಲಿಸಿ | ITBP Recruitment 2024

WhatsApp Group Join Now
Telegram Group Join Now

ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ ಫೋರ್ಸ್ (ITBP) ಖಾಲಿ ಇರುವ ಕಾನ್ಸ್‌ಟೇಬಲ್ (ಅಡಿಗೆ ಸೇವೆ) ಹುದ್ದೆಗಳನ್ನು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ ಪೋರ್ಸ್ ನಲ್ಲಿ ಕಾನ್ಸ್‌ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತೆಗಳು, ಒಟ್ಟು ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.

ITBP Recruitment 2024 ಹುದ್ದೆ ಅಧಿಸೂಚನೆ:

ಒಟ್ಟು ಹುದ್ದೆಗಳ ಸಂಖ್ಯೆ: 819

ಹುದ್ದೆಗಳ ಹೆಸರು: ಕಾನ್ಸ್‌ಟೇಬಲ್ (ಅಡಿಗೆ ಸೇವೆ)

ಹುದ್ದೆಗಳ ಮಾಹಿತಿ:
ಮಹಿಳಾ ಅಭ್ಯರ್ಥಿಗಳಿಗೆ: 122 ಹುದ್ದೆಗಳು
ಪುರುಷ ಅಭ್ಯರ್ಥಿಗಳಿಗೆ: 697 ಹುದ್ದೆಗಳು

ವೇತನ ಶ್ರೇಣಿ:
ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ ಫೋರ್ಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 21,700 ರಿಂದ 69,100 ರೂ. ವೇತನ ಪಡೆಯಬಹುದು.

ಶೈಕ್ಷಣಿಕ ಅರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ತಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯದಿಂದ 10 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.

ಇದನ್ನೂ ಓದಿ: ಪೋಸ್ಟ್ ಆಫೀಸ್ ನಲ್ಲಿ ಹೂಡಿಕೆ ಮಾಡಿದ್ರೆ ಸಾಕು 10 ಲಕ್ಷ ರೂ. ರಿಟರ್ನ್ ಸಿಗುತ್ತೆ! 

ITBP Recruitment 2024 ವಯೋಮಿತಿ:
ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ ಫೋರ್ಸ್ ಅಧಿಸೂಚನೆಯ ಅನ್ವಯ ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕನಿಷ್ಠ 18 ವರ್ಷ ಪೂರೈಸಿರಬೇಕು ಮತ್ತು ಗರಿಷ್ಠ 25 ವರ್ಷಗಳನ್ನು ಮೀರಿರಬಾರದು.

ಅರ್ಜಿ ಶುಲ್ಕ:
ಮಹಿಳೆಯರು, ಎಸ್‌ಸಿ, SC/ST, ಸೈನಿಕ ಅಭ್ಯರ್ಥಿಗಳು: ಯಾವುದೇ ಶುಲ್ಕ ಪಾವತಿಸುವಂತಿಲ್ಲ.
ಇತರ ಎಲ್ಲಾ ವರ್ಗದ ಅಭ್ಯರ್ಥಿಗಳು: 100 ರೂ.
ಶುಲ್ಕ ಪಾವತಿಸುವ ವಿಧಾನ: ಆನ್‌ಲೈನ್.

ಇದನ್ನೂ ಓದಿ: ಪೋಸ್ಟ್ ಆಫೀಸ್ ನಲ್ಲಿ ಹೂಡಿಕೆ ಮಾಡಿದ್ರೆ ಸಾಕು 10 ಲಕ್ಷ ರೂ. ರಿಟರ್ನ್ ಸಿಗುತ್ತೆ!

ಆಯ್ಕೆ ಪ್ರಕ್ರಿಯೆ:
ಮೊದಲು ದೈಹಿಕ ದಕ್ಷತೆ ಪರೀಕ್ಷೆ (ಪಿಇಟಿ)
ದೈಹಿಕ ಗುಣಮಟ್ಟದ ಪರೀಕ್ಷೆ (PST)
ಲಿಖಿತ ಪರೀಕ್ಷೆ
ವೈದ್ಯಕೀಯ ಪರೀಕ್ಷೆ
ಡಾಕ್ಯುಮೆಂಟ್ ಪರಿಶೀಲನೆ
ಸಂದರ್ಶನ

ಪ್ರಮುಖ ದಿನಾಂಕಗಳು:
ಆನ್‌ಲೈನ್‌ ಅರ್ಜಿ ಸ್ವೀಕರಿಸಲು ಪ್ರಾರಂಭ ದಿನಾಂಕ: 02/09/2024
ಆನ್‌ಲೈನ್‌ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 01-ಅಕ್ಟೋಬರ್, 2024

ITBP Recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್‌ ವಿಳಾಸ: itbpolice.nic.in

ಇದನ್ನೂ ಓದಿ: ಅಂಚೆ ಇಲಾಖೆಯಲ್ಲಿ ಗ್ರೂಪ್ ‘ಸಿ’ ನೇಮಕಾತಿ SSLC ಪಾಸಾದವರು ಅರ್ಜಿ ಸಲ್ಲಿಸಿ

WhatsApp Group Join Now
Telegram Group Join Now

Leave a Comment