ಕರ್ನಾಟಕ ಸರ್ಕಾರ ಮತ್ತು ಕರ್ನಾಟಕ ಶಾಲಾ ಪರೀಕ್ಷಾ ಹಾಗೂ ಮೌಲ್ಯಮಾಪನ ಮಂಡಳಿ ಇಂದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳೊಂದಿಗೆ ಪಾಸಾದ ವಿದ್ಯಾರ್ಥಿಗಳಿಗೆ ಮುಂದಿನ ವಿದ್ಯಾಭ್ಯಾಸಕ್ಕೆ ಅನುಕೂಲವಾಗಲೆಂದು ಉಚಿತ ಕಂಪ್ಯೂಟರ್ ಲ್ಯಾಪ್ ಟಾಪ್ (Karnataka Free Laptop Scheme) ಅನ್ನು ಅರ್ಹ ವಿದ್ಯಾರ್ಥಿಗಳಿಗೆ ನೀಡುತ್ತಿದೆ.
ರಾಜ್ಯದಲ್ಲಿ 2023 – 24 ನೇ ಸಾಲಿನ SSLC ಪರೀಕ್ಷೆಯಲ್ಲಿ ಉತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯಮಾಪನ ಮಂಡಳಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತವಾಗಿ ಲ್ಯಾಪ್ಟಾಪ್ (Student Free Laptop) ಅನ್ನು ವಿತರಿಸಲು ಅರ್ಜಿಯನ್ನು ಆಹ್ವಾನಿಸಲಾಗಿದೆ.
ಲ್ಯಾಪ್‌ಟಾಪ್ ಪಡೆಯಲು ಯಾರು ಅರ್ಹರು?
2023-24 ನೇ ಶೈಕ್ಷಣಿಕ ಸಾಲಿನಲ್ಲಿ ಎಸ್‌ಎಸ್‌ಎಲ್ಸಿ ಪರೀಕ್ಷೆಯಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದ 3 ವಿದ್ಯಾರ್ಥಿಗಳಿಗೆ ಹಾಗೂ ಸಮಾನ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹದಾಯಕವಾಗಿ ಲ್ಯಾಪ್ ಟಾಪ್ (karnataka free laptop application) ಗಳನ್ನು ವಿತರಿಸಲಾಗುವುದು.
ಅರ್ಜಿ ಸಲ್ಲಿಸುವ ವಿಧಾನ:
ಉಪನಿರ್ದೆಶಕರು ( ಆಡಳಿತ ) ರವರು ತಮ್ಮ ವ್ಯಾಪ್ತಿಯ ಎಲ್ಲಾ ಕ್ಷೇತ್ರಶಿಕ್ಷಣಾಧಿಕಾರಿಗಳಿಂದ ಮೇಲ್ಕಂಡಂತೆ ವರದಿ ಪಡೆದು, ಕ್ರೋಢಿಕರಿಸಿ ಮಂಡಲಿಗೆ ದಿನಾಂಕ; 24/10/2024 ರ ಒಳಗೆ ತನ್ನದೆ ಯಾವುದೇ ವಿಳಂಬಕ್ಕೆ ಅವಕಾಶ ನೀಡದೆ ತುರ್ತಾಗಿ SOFT ಪ್ರತಿಯನ್ನು ಮಂಡಲಿಯ b.sadpikseeb@gmail.com ಇ – ಮೇಲ್ ವಿಳಾಸಕ್ಕೆ ಹಾಗೂ ಭೌತಿಕ ಪ್ರತಿಯನ್ನು ಅಂಚೆ ಮೂಲಕ ಮಂಡಲಿಯ ಹಿರಿಯ ಸಹಾಯಕ ನಿರ್ದೇಶಕರು,’ ಬಿ ‘ಶಾಖೆ, ಇವರಿಗೆ ಕಳುಹಿಸಿ ಕೊಡಲು ಈ ಮೂಲಕ ಸೂಚಿಸಿದೆ.
ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ನೇಮಕಾತಿ ಪದವಿ ಪಾಸಾದವರು ಅರ್ಜಿ ಸಲ್ಲಿಸಿ
KPTCL ನಿಂದ ಕಿರಿಯ ಪವರ್‌ಮ್ಯಾನ್ ಹಾಗೂ ಕಿರಿಯ ಸ್ಟೇಷನ್ ಪರಿಚಾರಕ ನೇಮಕಾತಿ SSLC, PUC ವಿದ್ಯಾರ್ಹತೆ