Karnataka Guest teachers appointment 2024: ರಾಜ್ಯ ಸರ್ಕಾರ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ 35,000 ಅತಿಥಿ ಶಿಕ್ಷಕರ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಖಾಯಂ ಶಿಕ್ಷಕರ ಹುದ್ದೆಗಳಿಗೆ ನೇಮಕವಾಗುವವರೆಗೆ ಶಿಕ್ಷಕರ ಕೊರತೆ ನೀಗಿಸಲು ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯಿಂದ ಅನುಮತಿ ನೀಡಿದೆ.
ಶೈಕ್ಷಣಿಕ ಉದ್ಯೋಗದ ಅವಧಿಯು ಖಾಯಂ ಶಿಕ್ಷಕರ ನೇಮಕವಾಗುವವರೆಗೆ ಅಥವಾ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ಯಾವುದು ಮೊದಲೋ ಅಲ್ಲಿಯವರೆಗೆ ಶಿಕ್ಷಕರ ಕೊರತೆಯನ್ನು ನೀಗಿಸಲು ಈ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರದಿಂದ ಅನುಮೋದನೆ ನೀಡಿದೆ.
Karnataka Guest teachers appointment 2024
ಪ್ರಸ್ತುತ ರಾಜ್ಯದ ವಿವಿಧ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ (ಪಿಎಸ್‌ಟಿ ಮತ್ತು ಜಿಪಿಟಿ) ಒಟ್ಟು -33,863 ಶಿಕ್ಷಕರ ಹುದ್ದೆಗಳಿಗೆ ಜಿಲ್ಲಾವಾರು, ತಾಲ್ಲೂಕುವಾರು ಅಥಿತಿ ಶಿಕ್ಷಕರ ಹುದ್ದೆಗಳ ನಿಗದಿಪಡಿಸಿ ಸುತ್ತೋಲೆ ಬಿಡುಗಡೆ ಮಾಡಲಾಗಿದೆ.
ಕರ್ನಾಟಕ ಸಾರ್ವಜನಿಕ ಶಾಲೆಗಳಲ್ಲಿ, ದ್ವಿಭಾಷಾ, ಆಂಗ್ಲ ಮಾಧ್ಯಮ ತರಗತಿಗಳಿರುವ ಶಾಲೆಗಳು ಮತ್ತು ಆದರ್ಶ ವಿದ್ಯಾಲಯಗಳಲ್ಲಿ 100% ಶಿಕ್ಷಕರನ್ನು ನೇಮಕ ಮಾಡಲು ಮೊದಲ ಆದ್ಯತೆ. ಗಣಿತ, ವಿಜ್ಞಾನ ಮತ್ತು ಇಂಗ್ಲಿಷ್ ವಿಷಯಗಳ ಶಿಕ್ಷಕರ ನೇಮಕಾತಿಗೆ ಪ್ರಮುಖ ಆದ್ಯತೆ ನೀಡಲಾಗುವುದು.
ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರ ಗೌರವ ಧನ: 10,000 ರೂ.
ಶೈಕ್ಷಣಿಕ ವಿದ್ಯಾರ್ಹತೆ:
ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರ ಹುದ್ದೆಗೆ ವಿದ್ಯಾರ್ಹತೆ ಪದವಿ ಜತೆಗೆ ಡಿ.ಇಡಿ ಶಿಕ್ಷಣ, ಬಿ.ಇಡಿ ಶಿಕ್ಷಣ ಪಡೆದಿರಬೇಕು. ಹಾಗೂ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ಪಾಸಾಗಿರಬೇಕು.
ಸೂಚನೆ:
- ಪ್ರಾಥಮಿಕ ಶಾಲೆಗಳಿಗೆ ಸಂಬಂಧಿಸಿದಂತೆ ಅತಿಥಿ ಶಿಕ್ಷಕರ ಆಯ್ಕೆ ಜವಾಬ್ದಾರಿಯನ್ನು ಸಂಬಂಧಪಟ್ಟ ಸರ್ಕಾರಿ ಶಾಲೆಗಳ ಮುಖ್ಯ ಶಿಕ್ಷಕರ ಮೂಲಕವೇ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
- ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರನ್ನು ಗ್ರಾಮೀಣ ಪ್ರದೇಶಗಳಲ್ಲಿನ ಖಾಲಿ ಹುದ್ದೆಗಳನ್ನು ಶಿಕ್ಷಕ ರಹಿತ ಶಾಲೆಗಳಿಗೆ, ಹೆಚ್ಚು ವಿದ್ಯಾರ್ಥಿಗಳಿರುವ ಶಾಲೆಗಳಿಗೆ ಮೊದಲ ಆದ್ಯತೆ.
- ಅತಿಥಿ ಶಿಕ್ಷಕರನ್ನು ವಿದ್ಯಾರ್ಹತೆ ಪರಿಗಣಿಸಿ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುವುದು.
- ಅಭ್ಯರ್ಥಿಗಳು ಆಯಾ ಶಾಲೆಗಳ ಮುಖ್ಯ ಶಿಕ್ಷಕರ ಎದುರು ಸಂದರ್ಶನಕ್ಕೆ ಅಗತ್ಯ ದಾಖಲೆಗಳೊಂದಿಗೆ ಹಾಜರಾಗಬೇಕು.
ಜಿಲ್ಲಾವಾರು, ತಾಲ್ಲೂಕುವಾರು ಅಥಿತಿ ಶಿಕ್ಷಕರ ಹುದ್ದೆಗಳು: ಇಲ್ಲಿ ಕ್ಲಿಕ್ ಮಾಡಿ
ಇತರೆ ಉದ್ಯೋಗ ಮಾಹಿತಿ:
- ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ನೇಮಕಾತಿ 2024
- ಧಾರವಾಡ ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ನೇಮಕಾತಿ 2024
- ಜಿಲ್ಲಾ ಪಂಚಾಯತ್ ನೇರ ನೇಮಕಾತಿ