ಕರ್ನಾಟಕ ಹೈಕೋರ್ಟಿನಲ್ಲಿ 158 ಹುದ್ದೆಗಳ ನೇಮಕಾತಿ : Karnataka High Court Recruitment 2025

WhatsApp Group Join Now
Telegram Group Join Now

ಕಾನೂನು ಪದವಿ ಪಾಸಾದವರಿಗೆ ಗುಡ್ ನ್ಯೂಸ್ (Karnataka High Court Recruitment 2025) ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಖಾಲಿ ಇರುವ ಸಿವಿಲ್ ನ್ಯಾಯಾಧೀಶರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಯನ್ನು ಕರೆಯಲಾಗಿದೆ.

ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ (Karnataka High Court) ಸಿವಿಲ್ ನ್ಯಾಯಾಧೀಶರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.

Karnataka High Court Recruitment 2025

ಇಲಾಖೆ: ಕರ್ನಾಟಕ ಉಚ್ಚ ನ್ಯಾಯಾಲಯ

ಹುದ್ದೆ ಹೆಸರು : ಸಿವಿಲ್ ನ್ಯಾಯಾಧೀಶರು (Civil Judges)

ಉದ್ಯೋಗ ಸ್ಥಳ: ಕರ್ನಾಟಕ

ಒಟ್ಟು ಹುದ್ದೆಗಳ ಸಂಖ್ಯೆ : 158 ಹುದ್ದೆಗಳು

ವಿದ್ಯಾರ್ಹತೆ:
ಕರ್ನಾಟಕ ಉಚ್ಚ ನ್ಯಾಯಾಲಯ ನೇಮಕಾತಿ ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು, ಭಾರತದಲ್ಲಿನ ಕಾನೂನಿನ ಮೂಲಕ ಸ್ಥಾಪಿತವಾದ ಯಾವುದೇ ವಿಶ್ವವಿದ್ಯಾಲಯ ನೀಡುವ ಕಾನೂನು ಪದವಿಯನ್ನು ಪೂರ್ಣಗೊಳಿಸಿರಬೇಕು ಮತ್ತು ಕಡ್ಡಾಯವಾಗಿ ನೋಂದಾಯಿತ ವಕೀಲರು ಆಗಿರಬೇಕು.

ವಯೋಮಿತಿ:

  • ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ: 35 ವರ್ಷ
  • ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ: 38 ವರ್ಷ
  • ಎಸ್ಸಿ, ಎಸ್ಟಿ, ಪ್ರವರ್ಗ1ರ ಅಭ್ಯರ್ಥಿಗಳಿಗೆ ಗರಿಷ್ಠ: 40 ವರ್ಷ

ವಯೋಮಿತಿ ಸಡಿಲಿಕೆ:
ನಿವೃತ್ತ ಸೈನಿಕ ಅಭ್ಯರ್ಥಿಗಳಿಗಾಗಿ ಗರಿಷ್ಠ ವಯೋಮಿತಿಯಲ್ಲಿ ಮತ್ತೆ ಮೂರು ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ.

ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಪೂರ್ವಭಾವಿ ಪರೀಕ್ಷೆ, ಮುಖ್ಯ ಲಿಖಿತ ಪರೀಕ್ಷೆ, ಮೌಖಿಕ ಪರೀಕ್ಷೆ ಹಾಗೂ ಕಂಪ್ಯೂಟರ್ ಜ್ಞಾನದ ಪರೀಕ್ಷೆ ನಡೆಸುವ ಮೂ ಹುದ್ದೆಗಳನ್ನು ಆಯ್ಕ ಮಾಡಿಕೊಳ್ಳಲಾಗುತ್ತದೆ.

Karnataka High Court Recruitment 2025 ಪರೀಕ್ಷಾ ಶುಲ್ಕದ ವಿವರ :
ಪೂರ್ವಭಾವಿ ಪರೀಕ್ಷೆ ಶುಲ್ಕ:

  • ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು: ರೂ. 1000
  • ಪ.ಜಾತಿ/ಪ.ಪಂ/ಪ್ರವರ್ಗ-1ರ ಅಭ್ಯರ್ಥಿಗಳು: ರೂ. 500

ಮುಖ್ಯ ಪರೀಕ್ಷೆಗೆ ಅರ್ಹತೆಗೊಂಡಲಿ ಲಿಖಿತ ಪರೀಕ್ಷೆ ಶುಲ್ಕ:

  • ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು: ರೂ. 1500
  • ಪ.ಜಾತಿ/ಪ.ಪಂ/ಪ್ರವರ್ಗ-1 ಅಭ್ಯರ್ಥಿಗಳು: ರೂ. 750

ವೇತನ:
ಕರ್ನಾಟಕ ಉಚ್ಚ ನ್ಯಾಯಾಲಯ ಅಧಿಸೂಚನೆ ಪ್ರಕಾರ ಸಿವಿಲ್ ನ್ಯಾಯಾಧೀಶರು ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 77,840 ರಿಂದ 1,36,520 ರೂ. ವರೆಗೆ ವೇತನ ನೀಡಲಾಗುತ್ತದೆ.

ಈ ಸುದ್ದಿಯನ್ನೂ ಓದಿ: ಸ್ಥಳೀಯ ಬ್ಯಾಂಕ್ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

Karnataka High Court Recruitment 2025 ಪ್ರಮುಖ ದಿನಾಂಕಗಳು:
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: ಫೆಬ್ರುವರಿ 10, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮಾರ್ಚ್ 12, 2025
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಮಾರ್ಚ್ 12, 2025

ಪ್ರಮುಖ ದಿನಾಂಕಗಳು:
ಅಧಿಕೃತ ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್‌ ಲಿಂಕ್:  karnatakajudiciary.kar.nic.in

ಈ ಸುದ್ದಿಯನ್ನೂ ಓದಿ: ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನ

Leave a Comment