ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಕ್ಲರ್ಕ್ ಹುದ್ದೆಗಳ ನೇಮಕಾತಿ | Karnataka Lokayukta Recruitment 2024

WhatsApp Group Join Now
Telegram Group Join Now

ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ (Lokayukta Recruitment) ಖಾಲಿ ಇರುವ ಗ್ರೂಪ್-ಸಿ ವೃಂದದ 30 ಕ್ಲರ್ಕ್-ಕಂ-ಟೈಪಿಸ್ಟ್ (Clerk cum Typist) ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತೆಗಳು, ಒಟ್ಟು ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.

Karnataka Lokayukta Recruitment 2024

ಒಟ್ಟು ಹುದ್ದೆಗಳ ಸಂಖ್ಯೆ: 30

ಹುದ್ದೆಗಳ ಹೆಸರು: ಕ್ಲರ್ಕ್-ಕಂ-ಟೈಪಿಸ್ಟ್ (Clerk cum Typist)

ಉದ್ಯೋಗದ ಸ್ಥಳ: ಕರ್ನಾಟಕ

ಹುದ್ದೆಗಳ ವಿವರ:
ಉಳಿಕೆ ಮೂಲ ವೃಂದದ: 16
ಕಲ್ಯಾಣ ಕರ್ನಾಟಕದ (ಹೈ.ಕ): 14

ಅರ್ಜಿ ಶುಲ್ಕ:
ಸಾಮಾನ್ಯ, ಒಬಿಸಿ 2ಎ, 2ಬಿ, 3ಎ, 3ಬಿ, ಮಾಜಿ ಸೈನಿಕರಿಗೆ ಅಭ್ಯರ್ಥಿಗಳು: 250 ರೂ.
ಎಸ್‌ಸಿ-ಎಸ್‌ಟಿ, ಪ್ರವರ್ಗ-1, ವಿಶೇಷ ಚೇತನರಿಗೆ ಅಭ್ಯರ್ಥಿಗಳು: ಶುಲ್ಕ ವಿನಾಯಿತಿ

ಶೈಕ್ಷಣಿಕ ವಿದ್ಯಾರ್ಹತೆ:
ಪದವಿ ಪೂರ್ವ ಶಿಕ್ಷಣ ಪರೀಕ್ಷೆ ಉತ್ತೀರ್ಣ ಅಥವಾ ತತ್ಸಮಾನ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಕನ್ನಡ ಮತ್ತು ಆಂಗ್ಲ ಕಿರಿಯ ದರ್ಜೆ ಬೆರಳಚ್ಚು ಪರೀಕ್ಷೆ ಉತ್ತೀರ್ಣ ಅಥವಾ ತತ್ಸಮಾನ ಅರ್ಹತೆ ಹೊಂದಿರಬೇಕು.

ವಯೋಮಿತಿ:
ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದೊಳಗೆ ಕನಿಷ್ಠ ವಯಸ್ಸು 18 ವರ್ಷ ಪೂರೈಸಿರಬೇಕು.

ವಯೋಮಿತಿ ಸಡಿಲಿಕೆ:
SC/ST /ಪ್ರವರ್ಗ-I ಅಭ್ಯರ್ಥಿಗಳಿಗೆ: 43 ವರ್ಷ
ಒಬಿಸಿ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ: 41 ವರ್ಷ
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 38 ವರ್ಷ

Karnataka Lokayukta Recruitment 2024 ವೇತನ ಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 34,100 ರಿಂದ 67,600 ರೂ. ವೇತನವನ್ನು ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:
ಕ್ಲರ್ಕ್-ಕಂ-ಟೈಪಿಸ್ಟ್ ಹುದ್ದೆಗೆ ನಿಗದಿಪಡಿಸಲಾದ ವಿದ್ಯಾರ್ಹತೆಯಲ್ಲಿ ಪಡೆದ ಅಂಕಗಳ ಮತ್ತು ಮೀಸಲಾತಿ ಆಧಾರದ ಮೇರೆಗೆ ಹಾಗೂ ಅರ್ಹತಾ ಪರೀಕ್ಷೆಯನ್ನು ಬೆರಳಚ್ಚು ಯಂತ್ರ / ಗಣಕಯಂತ್ರದ ಮೂಲಕ ಕೈಗೊಳ್ಳಲಾಗುವುದು.

ಪ್ರಮುಖ ದಿನಾಂಕಗಳು:
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: ಅಕ್ಟೋಬರ್ 30, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ನವೆಂಬರ್ 29, 2024

Karnataka Lokayukta Recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು (NHK): ಇಲ್ಲಿ ಕ್ಲಿಕ್ ಮಾಡಿ
ಅಧಿಸೂಚನೆ ನೋಡಲು (HK): ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್‌ ಅರ್ಜಿ ಸಲ್ಲಿಸಲು (NHK): ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್‌ ಅರ್ಜಿ ಸಲ್ಲಿಸಲು (HK): ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್‌ ವಿಳಾಸ: lokayukta.kar.nic.in

ಕರ್ನಾಟಕ ವಿಧಾನ ಸಭೆ ಸಚಿವಾಲಯದಲ್ಲಿ ಉದ್ಯೋಗ 1,12,900 ರೂ. ವೇತನ

DCC ಬ್ಯಾಂಕ್ ನೇಮಕ 2024

ಜಿಲ್ಲಾ ಆಯುಷ್ ಇಲಾಖೆ ನೇಮಕಾತಿ 2024

Leave a Comment

WhatsApp

Join Now Latest UpDates

Join Now Latest Job And Scheme UpDates News Belagavi

Powered by Webpresshub.net