KEA PDO Notification 2024: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಲೋಕ ಸೇವಾ ಆಯೋಗವು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
Panchayat Development Officer ನೇಮಕಾತಿ ಅಧಿಸೂಚನೆ ಪ್ರಮುಖ ವಿವರ, ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಹುದ್ದೆಗಳು, ಆಯ್ಕೆ ವಿಧಾನ, ಪಾವತಿ ಶುಲ್ಕ, ಹಾಗೂ ಅರ್ಜಿ ಸಲ್ಲಿಸುವ ಮಾಹಿತಿ, ಪ್ರಮುಖ ದಿನಾಂಕ ಸೇರಿದಂತೆ ಪ್ರಮುಖ ಮಾಹಿತಿಯನ್ನು ಕೆಳಗಿನ ನೀಡಲಾಗಿದೆ.
KEA PDO Notification 2024:
ಸಂಸ್ಥೆ: ಕರ್ನಾಟಕ ಲೋಕಸೇವಾ ಆಯೋಗ (KPSC)
ಉದ್ಯೋಗ ಸಂಸ್ಥೆ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ (RDPR)
ಹುದ್ದೆ ಹೆಸರು: ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO)
ಉದ್ಯೋಗದ ಸ್ಥಳ: ಕರ್ನಾಟಕ
ಒಟ್ಟು ಹುದ್ದೆಗಳ ಸಂಖ್ಯೆ: 247
ವೇತನ ಶ್ರೇಣಿ: 37,900 ರಿಂದ 70,850 ರೂ.
ಅರ್ಜಿ ಸಲ್ಲಿಸುವ ವಿಧಾನ: Online
ಹುದ್ದೆಗಳ ವಿವರ:
ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (Non HK): 150
ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (HK) : 97
ಶೈಕ್ಷಣಿಕ ಅರ್ಹತೆ:
KEA PDO Notification 2024 ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು.
ಇದನ್ನು ಓದಿ: 10ನೇ ತರಗತಿ ಪಾಸಾದವರಿಗೆ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ
ವಯೋಮಿತಿ:
ಕರ್ನಾಟಕ ಲೋಕ ಸೇವಾ ಆಯೋಗ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯೋಮಿತಿ ಕನಿಷ್ಠ 18 ವರ್ಷ ಪೂರೈಸಿರಬೇಕು.
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ: 38 ವರ್ಷ
ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ :41ವರ್ಷ
ಎಸ್. ಸಿ, ಎಸ್ .ಟಿ, ಪ್ರವರ್ಗ-1 ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ : 43ವರ್ಷ
ವೇತನ ಶ್ರೇಣಿ:
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನೇಮಕಾತಿ ಅಧಿಸೂಚನೆ ಪ್ರಕಾರ ಆಯ್ಕೆಯಾಗುವ ಅಭ್ಯರ್ಥಿಗಳಿಗೆ 37,900 ರಿಂದ 70,850 ರೂ. ವೇತನ ನೀಡಲಾಗುತ್ತದೆ.
ಆಯ್ಕೆ ವಿಧಾನ : ಕರ್ನಾಟಕ ಲೋಕ ಸೇವಾ ಆಯೋಗ ನೇಮಕಾತಿ ಅಧಿಸೂಚನೆ ಪ್ರಕಾರ ಕನ್ನಡದ ಭಾಷಾ ಪರೀಕ್ಷೆ, ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಶುಲ್ಕ:
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 600 ರೂ.
ಹಿಂದುಳಿದ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ: 300 ರೂ.
ಮಾಜಿ ಸೈನಿಕ ಅಭ್ಯರ್ಥಿಗಳಿಗೆ: 50 ರೂ.
ಎಸ್. ಸಿ, ಎಸ್. ಟಿ, ಪ್ರವರ್ಗ-1 ಅಭ್ಯರ್ಥಿಗಳಿಗೆ: ಶುಲ್ಕ ವಿನಾಯಿತಿ ನೀಡಲಾಗಿದೆ.
ಶುಲ್ಕ ಪಾವತಿಸುವ ವಿಧಾನ: Online
ಪ್ರಮುಖ ದಿನಾಂಕಗಳು:
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 18/09/2024
ಅರ್ಜಿ ಸ್ವೀಕರಿಸಲು ಕೊನೆಯ ದಿನಾಂಕ : 03/10/2024
PDO Recruitment Important Links :
Non HK ಅಧಿಸೂಚನೆ ನೋಡಲು | ಇಲ್ಲಿ ಕ್ಲಿಕ್ ಮಾಡಿ |
Hk ಅಧಿಸೂಚನೆ ನೋಡಲು | ಇಲ್ಲಿ ಕ್ಲಿಕ್ ಮಾಡಿ |
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು | ಇಲ್ಲಿ ಕ್ಲಿಕ್ ಮಾಡಿ |
ವೆಬ್‌ಸೈಟ್ ವಿಳಾಸ | kpsc.kar.nic.in |