ಕರ್ನಾಟಕ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹುಬ್ಬಳ್ಳಿ (KIMS) ಖಾಲಿ ಇರುವ ಪ್ರೊಫೆಸರ್(Professor) ಮತ್ತು ಅಸಿಸ್ಟೆಂಟ್ ಪ್ರೊಫೆಸರ್(Assistant Professor) ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹುಬ್ಬಳ್ಳಿ (Karnataka Institute of Medical Sciences Hubballi) ನೇಮಕಾತಿ ಅಧಿಸೂಚನೆ ಗೆ ಸಂಬಂಧಿಸಿದಂತೆ, ಶೈಕ್ಷಣಿಕ ಅರ್ಹತೆ, ವಯಸ್ಸಿನ ಮಿತಿ, ವೇತನ, ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ಶುಲ್ಕ ಪಾವತಿಸುವ ವಿಧಾನ, ದಿನಾಂಕ, ಅರ್ಜಿ ಸಲ್ಲಿಕೆಗೆ ಡೈರೆಕ್ಟ್ ಲಿಂಕ್, ಅಧಿಸೂಚನೆ ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗಿನಂತಿದೆ.
KIMS Hubballi Recruitment 2024:
ಒಟ್ಟು ಹುದ್ದೆಗಳ ಸಂಖ್ಯೆ: 05
ಹುದ್ದೆಗಳ ಹೆಸರು: ಪ್ರೊಫೆಸರ್ ಮತ್ತು ಅಸಿಸ್ಟೆಂಟ್ ಪ್ರೊಫೆಸರ್
ಉದ್ಯೋಗದ ಸ್ಥಳ: ಹುಬ್ಬಳ್ಳಿ ಕರ್ನಾಟಕ
ಹುದ್ದೆಗಳ ಮಾಹಿತಿ:
ಪ್ರೊಫೆಸರ್(Professor): 01
ಅಸಿಸ್ಟೆಂಟ್ ಪ್ರೊಫೆಸರ್(Assistant Professor): 04
ಶೈಕ್ಷಣಿಕ ಅರ್ಹತೆ:
ಕರ್ನಾಟಕ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹುಬ್ಬಳ್ಳಿ ಪ್ರೊಫೆಸರ್ ಮತ್ತು ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಎಂಬಿಬಿಎಸ್, ಎಂ.ಡಿ, ಎಂ.ಎಸ್, ಸ್ನಾತಕೋತ್ತರ ಪದವಿ ಹೊಂದಿರಬೇಕು.
ಗರಿಷ್ಠ ವಯೋಮಿತಿ:
ಪ್ರೊಫೆಸರ್: 55 ವರ್ಷ
ಅಸಿಸ್ಟೆಂಟ್ ಪ್ರೊಫೆಸರ್: 50 ವರ್ಷ
ವೇತನ:
ಪ್ರೊಫೆಸರ್ ಮತ್ತು ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಅನುಭವ ಮತ್ತು ಕಾರ್ಯಕ್ಷಮತೆಯ ಆಧಾರದ ಮೇಲೆ ವೇತನ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಎಲ್ಲಾ ಅಭ್ಯರ್ಥಿಗಳಿಗೆ: 1500 ರೂ.
ಅರ್ಜಿ ಶುಲ್ಕ ಪಾವತಿಸುವ ವಿಧಾನ: ಡಿಮ್ಯಾಂಡ್ ಡ್ರಾಫ್ಟ್ (D.D)
ಆಯ್ಕೆ ವಿಧಾನ:
ಕರ್ನಾಟಕ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹುಬ್ಬಳ್ಳಿ ನೇಮಕಾತಿ ಅಧಿಸೂಚನೆ ಪ್ರಕಾರ ಪ್ರೊಫೆಸರ್ ಮತ್ತು ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳನ್ನು ಅಭ್ಯರ್ಥಿಗಳ ಕಾರ್ಯ ಅನುಭವ, ಪೇಪರ್ ಪ್ರೆಸೆಂಟೇಶನ್ ಸಂದರ್ಶನದಲ್ಲಿ ಪರ್ಸನಾಲಿಟಿ/ ಪ್ರೆಸೆಂಟೇಶನ್ ಮೂಲಕ ಆಯ್ಕೆಮಾಡಿಕೊಳಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:
ಈ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತರು ಅಧಿಸೂಚನೆಯಲ್ಲಿ ಕೇಳಿರುವ ದಾಖಲೆಗಳನ್ನು ಭರ್ತಿ ಮಾಡಿದ ಅರ್ಜಿ ನಮೂನೆ ಮತ್ತು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಜುಲೈ 10, 2024 ಅಂದರೆ ನಾಳೆ ಪೋಸ್ಟ್ ಮೂಲಕ ಕಳುಹಿಸಬೇಕು.
ವಿಳಾಸ
ನಿರ್ದೇಶಕರು
ಕರ್ನಾಟಕ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ,
ಹುಬ್ಬಳ್ಳಿ ವಿದ್ಯಾನಗರ
ಹುಬ್ಬಳ್ಳಿ- 580021
ಪ್ರಮುಖ ದಿನಾಂಕಗಳು:
ಅರ್ಜಿ ಸ್ವೀಕರಿಸಲು ಪ್ರಾರಂಭ ದಿನಾಂಕ: 01/07/2024
ಅರ್ಜಿ ಸ್ವೀಕರಿಸಲು ಕೊನೆಯ ದಿನಾಂಕ: ಜುಲೈ 10, 2024
KIMS Hubballi Recruitment 2024 ಪ್ರಮುಖ ಲಿಂಕ್ಗಳು:
ಅಧಿಸೂಚನೆ ಮತ್ತು ಅರ್ಜಿ ನಮೂನೆಗಳನ್ನು ನೋಡಲು: ಇಲ್ಲಿ ಕ್ಲಿಕ್ ಮಾಡಿ
- ಬೆಂಗಳೂರು ಮೆಟ್ರೋ ಹೊಸ ನೇಮಕಾತಿ 2024
- ಪಿಎಂ ಕಿಸಾನ್ ಫಲಾನುಭವಿಗಳಿಗೆ ಸಂತಸದ ಸುದ್ದಿ
- ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ 2024