ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (KKRTC) ಬೀದರ್ ವಿಭಾಗದ ವಿವಿಧ ಘಟಕಗಳಲ್ಲಿ ಖಾಲಿ ಇರುವ ಚಾಲಕರು & ತಾಂತ್ರಿಕ ಸಹಾಯಕರು ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (KKRTC Recruitment 2024) ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ? ಯಾವೆಲ್ಲ ಹುದ್ದೆಗಳಿವೆ, ವೇತನ ಎಷ್ಟು, ವಯೋಮಿತಿ ಏನು, ವಿದ್ಯಾರ್ಹತೆ ಏನಿರಬೇಕು? ಆಯ್ಕೆ ಪ್ರಕ್ರಿಯೆ ಹೇಗಿರುತ್ತದೆ ಸೇರಿದಂತೆ ವಿವಿಧ ವಿವರವನ್ನು ಕೆಳಗೆ ನೀಡಲಾಗಿದೆ.
ಹುದ್ದೆ ಹೆಸರು: ಬಸ್ ಚಾಲಕರು & ತಾಂತ್ರಿಕ ಸಹಾಯಕರು
ಒಟ್ಟು ಹುದ್ದೆಗಳು: 150
ಉದ್ಯೋಗದ ಸ್ಥಳ: ಬೀದರ್ (ಕರ್ನಾಟಕ)
KKRTC Recruitment 2024 ಹುದ್ದೆಗಳ ಸಂಖ್ಯೆ:
ಚಾಲಕರು: 100
ತಾಂತ್ರಿಕ ಸಹಾಯಕರು: 50
ಶೈಕ್ಷಣಿಕ ಅರ್ಹತೆ:
ಚಾಲಕರ ಹುದ್ದೆಗಳಿಗೆ ವಿದ್ಯಾರ್ಹತೆ: 10ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು.
ಚಾಲ್ತಿಯಲ್ಲಿರುವ ಭಾರಿ ಸರಕು ಸಾಗಾಣಿಕೆ ವಾಹನಾ ಚಾಲನಾ ಪರವಾನಗಿಯನ್ನು ಹೊಂದಿರಬೇಕು ಹಾಗೂ ಕರ್ನಾಟಕ ಪಿಎಸ್.ವಿ ಬ್ಯಾಡ್ಜ್ ಹೊಂದಿರಬೇಕು.
ತಾಂತ್ರಿಕ ಸಹಾಯಕರ ಹುದ್ದೆಗಳಿಗೆ ವಿದ್ಯಾರ್ಹತೆ: ಮೆಕ್ಯಾನಿಕ್ ನಲ್ಲಿ ಡಿಪ್ಲೊಮಾ ಅಥವಾ ಐಟಿಐ ಅನ್ನು ಪೂರ್ಣಗೊಳಿಸರಬೇಕು.
ವಯೋಮಿತಿ:
ಈ ಹುದ್ದೆಗಳಿಗೆ ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳ ವಯೋಮಿತಿ ದಿನಾಂಕ 7/12/ 2024 ರಂದು ಕನಿಷ್ಠ 18 ವರ್ಷ ಪೂರೈಸಿರಬೇಕು.
ಗರಿಷ್ಠ ವಯೋಮಿತಿ:
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 35 ವರ್ಷ
ಪ್ರವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ: 38 ವರ್ಷ
SC/ ST ಮತ್ತು ಪ್ರವರ್ಗ-I ಅಭ್ಯರ್ಥಿಗಳಿಗೆ: 40 ವರ್ಷ
ವೇತನ ಶ್ರೇಣಿ:
ಚಾಲಕ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ: 16,973 ರೂ.
ತಾಂತ್ರಿಕ ಸಹಾಯಕ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ: 16,550 ರೂ.
ಅರ್ಜಿ ಶುಲ್ಕ:
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಯಾವುದೇಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆವಿಧಾನ:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ನೇರ ಸಂದರ್ಶನಕ್ಕೆ ನಡೆಸಲಾಗುತ್ತದೆ.
ಅರ್ಜಿ ವಿಧಾನ:
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಪಡೆದಿರುವ ವಿದ್ಯಾರ್ಹತೆ ಆಧಾರ್ ಕಾರ್ಡ್, ವಿದ್ಯಾರ್ಹತೆಯ ಪ್ರಮಾಣಪತ್ರಗಳು & ಡ್ರೈವಿಂಗ್ ಲೈಸೆನ್ಸ್ ಸೇರಿದಂತೆ ಅಧಿಸೂಚನೆಯಲ್ಲಿ ಕೇಳಲಾದ ಅಗತ್ಯ ದಾಖಲೆಗಳೊಂದಿಗೆ ಕೆಳಗೆ ನೀಡಲಾದ ದಿನಾಂಕಗಳಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬೀದರ್ ಹಳೆ ಬಸ್ ನಿಲ್ದಾಣದ ಬೀದರ್ ವಿಭಾಗೀಯ ಕಛೇರಿಯ ವೇಳೆಯಲ್ಲಿ ನೇರ ಸಂದರ್ಶನಕ್ಕೆ ಹಾಜರಾಗಬೇಕು.
ಸಂದರ್ಶನದ ವಿಳಾಸ:
Divisional Office of Kalyana Karnataka Road Transport Corporation, Bidar, Karnataka
ಪ್ರಮುಖ ದಿನಾಂಕಗಳು:
ಅಧಿಸೂಚನೆ ಬಿಡುಗಡೆಯಾದ ದಿನಾಂಕ: 25-11-2024
ಚಾಲಕ ಹುದ್ದೆಗೆ ಸಂದರ್ಶನ: ಡಿಸೆಂಬರ್ 02 ರಿಂದ 04 ರವರೆಗೆ
ತಾಂತ್ರಿಕ ಸಹಾಯಕ ಹುದ್ದೆಗೆ ಸಂದರ್ಶನ:- ಡಿಸೆಂಬರ್ 06 ರಿಂದ 07 ರವರೆಗೆ ಸಂದರ್ಶನವನ್ನು ಆಯೋಜಿಸಲಾಗಿದೆ.
KKRTC Recruitment 2024 ಪ್ರಮುಖ ಲಿಂಕ್‌ಗಳ:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: kkrtc.karnataka.gov.in
ಜಿಲ್ಲಾ ಆಯುಷ್ ಇಲಾಖೆ ನೇಮಕಾತಿ 2024
ಆಗ್ನೇಯ ರೈಲ್ವೇ ಇಲಾಖೆಯಲ್ಲಿ 1785 ಹುದ್ದೆಗಳ ನೇಮಕಾತಿ 2024