ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದಲ್ಲಿ (Karnataka Legislative Assembly) ಖಾಲಿ ಇರುವ ಕಿರಿಯ ಸಹಾಯಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಡಿಸೆಂಬರ್ 4 ರಿಂದ ಅರ್ಜಿ ಸಲ್ಲಿಕೆ ಅರಂಭವಾಗಲಿದೆ.
ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ? ಯಾವೆಲ್ಲ ಹುದ್ದೆಗಳಿವೆ, ವೇತನ ಎಷ್ಟು, ವಯೋಮಿತಿ ಏನು, ವಿದ್ಯಾರ್ಹತೆ ಏನಿರಬೇಕು? ಆಯ್ಕೆ ಪ್ರಕ್ರಿಯೆ ಹೇಗಿರುತ್ತದೆ ಸೇರಿದಂತೆ ವಿವಿಧ ವಿವರವನ್ನು ಕೆಳಗೆ ನೀಡಲಾಗಿದೆ.
ಹುದ್ದೆಯ ಹೆಸರು: ಕಿರಿಯ ಸಹಾಯಕರು
ಹುದ್ದೆಗಳು ಸಂಖ್ಯೆ: 07
KLA Recruitment 2024 ಹುದ್ದೆಗಳ ಸಂಖ್ಯೆ:
ಉಳಿಕೆ ಮೂಲ ವೃಂದ: 06
ಕಲ್ಯಾಣ ಕರ್ನಾಟಕ: 01
ಸೂಚನೆ: ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದಲ್ಲಿ ಖಾಲಿ ಇರುವ ಕಿರಿಯ ಸಹಾಯಕರು ಹುದ್ದೆಗಳಿಗೆ ಕಳೆದ ಮಾರ್ಚ್ ತಿಂಗಳಲ್ಲಿ ನೇಮಕ ಪ್ರಕಟಣೆ ಹೊರಡಿಸಲಾಗಿತ್ತು. ಸದರಿ ಹುದ್ದೆಗಳಿಗೆ ಇದೀಗ ಸೆಪ್ಟೆಂಬರ್ 10 ರ ಸರ್ಕಾರದ ಆದೇಶದ ಪ್ರಕಾರ ಈ ಹುದ್ದೆಗಳಿಗೆ ಇದೀಗ ಒಂದು ಬಾರಿಗೆ 3 ವರ್ಷ ವಯೋಮಿತಿ ಹೆಚ್ಚಿಸಿ ಮತ್ತೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ವಿದ್ಯಾರ್ಹತೆ:
ಕಿರಿಯ ಸಹಾಯಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಪದವಿ ವಿದ್ಯಾರ್ಥಿಗಳಿಗೆ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರತಕ್ಕದ್ದು.
KLA Recruitment 2024 ವೇತನ:
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 34,100 ರಿಂದ 67,600 ರೂ. ರವರೆಗೆ ವೇತನವನ್ನು ನೀಡಲಾಗುತ್ತದೆ.
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಅರ್ಜಿ ಸ್ವೀಕರಿಸಲು ನಿಗದಿಪಡಿಸಿದ ಕೊನೆ ದಿನಾಂಕಕ್ಕೆ ಕನಿಷ್ಠ 18 ವರ್ಷ ಪೂರ್ಣಗೊಂಡಿರಬೇಕು.
ಗರಿಷ್ಠ ವಯೋಮಿತಿ:
ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ: 38 ವರ್ಷ.
ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ: 41 ವರ್ಷ.
ಎಸ್‌ಸಿ / ಎಸ್‌ಟಿ / ಪ್ರವರ್ಗ-1 ಅಭ್ಯರ್ಥಿಗಳಿಗೆ: 43 ವರ್ಷ.
ಪ್ರಮುಖ ದಿನಾಂಕಗಳು:
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 04.12.2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 03.01.2025.
ಶುಲ್ಕವನ್ನು ಪಾವತಿ ಮಾಡಲು ಕೊನೆಯ ದಿನಾಂಕ: 04.01.2025.
KLA Recruitment 2024 ಪ್ರಮುಖ ಲಿಂಕ್‌ಗಳು:
ಹಳೆ ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಹೊಸ ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: karnataka.gov.in
ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆಗಳ ನೇಮಕಾತಿ
ಶಾಲಾ-ಕಾಲೇಜು ಮತ್ತು ಬ್ಯಾಂಕ್ ಸೇರಿ ಡಿಸೆಂಬರ್ ನಲ್ಲಿ ಒಟ್ಟು 17 ದಿನ ರಜೆ ಇಲ್ಲಿದೆ ಸಂಪೂರ್ಣ ವಿವರ