ಅರಿವು ಯೋಜನೆಯಡಿ ವಿದ್ಯಾರ್ಥಿಗಳಿಗೆ ಸಾಲ ಸೌಲಭ್ಯ ಅರ್ಜಿ ಆಹ್ವಾನ | KMCDC Arivu Education Loan

WhatsApp Group Join Now
Telegram Group Join Now

Kmcdc Arivu Education Loan And Higher Education Study Loans: 2024-25 ನೇ ಸಾಲಿನ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಅರಿವು ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಅರ್ಹ ಅಭ್ಯರ್ಥಿಗಳಿಂದ ಆಹ್ವಾನಿಸಿದೆ. ಅರ್ಜಿ ಸಲ್ಲಿಸುವುದು ಹೇಗೆ. ಈ ಯೋಜನೆಗೆ ಲಾಭ ಪಡೆಯಲು ಯಾರು ಅರ್ಹರು, ಅರ್ಜಿ ಸಲ್ಲಿಸುವ ಹೇಗೆ, ಯಾವೆಲ್ಲಾ ದಾಖಲೆಗಳು ಬೇಕು ಎಂಬುದರ ಕುರಿತು ಸಮಗ್ರ ಮಾಹಿತಿ ಇಲ್ಲಿದೆ.

ಅರ್ಜಿ ಸಲ್ಲಿಸಲು ಯಾರು ಅರ್ಹರು:
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಅರಿವು (ರಿನಿವಲ್) ವಿದ್ಯಾಭ್ಯಾಸ ಯೋಜನೆಯಲ್ಲಿ ಬೌದ್ಧ, ಕ್ರಿಶ್ಚಿಯನ್, ಜೈನ್ಸ್, ಮುಸ್ಲಿಂ, ಪಾರ್ಸಿ, ಸಿಖ್ ಜನಾಂಗದ ವಿದ್ಯಾರ್ಥಿಗಳಿಗೆ 2024-25ನೇ ಸಾಲಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿಇಟಿ/ಡಿ-ಸಿಇಟಿ/ಪಿಜಿ-ಸಿಇಟಿ/ನೀಟ್ ಮೂಲಕ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಅರಿವು (ರಿನ್ಯೂವಲ್) ಯೋಜನೆಯಡಿ ಸಾಲ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

KMCDC Arivu Education Loan:

ವೈದ್ಯಕೀಯ, ದಂತ ವೈದ್ಯಕೀಯ, ಇಂಜಿನಿಯರಿಂಗ್ ಆರ್ಕಿಟೆಕ್ಚರ್, ಆಯುಷ್, ಪಾರ್ಮಸಿ, ಕೃಷಿ ವಿಜ್ಞಾನ, ಎಂಬಿಎ, ಎಂಸಿಎ, ಎಲ್‌ಎಲ್‌ಬಿ ಕೋರ್ಸ್‌ಗಳಿಗೆ 50 ಸಾವಿರ ರಿಂದ 5, ಲಕ್ಷ ರೂ.ವರೆಗೆ ಸಾಲ ನೀಡಲಾಗುವುದು. ಸಾಲ ಪಡೆಯಲು ಉದ್ದೇಶಿರುವ ವಿದ್ಯಾರ್ಥಿಗಳು ನಿಗಮದ ವೆಬ್‌ಸೈಟ್ kmdconline.karnataka.gov.in ಮೂಲಕ ಅರ್ಜಿ ಸಲ್ಲಿಸಬೇಕು.

ಯಾವ ವಿದ್ಯಾಭ್ಯಾಸಕ್ಕೆ ಎಷ್ಟು ಸಾಲ ಸೌಲಭ್ಯ:

1) ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (CET/NEET) ಮುಖಾಂತರ ಎಂ.ಬಿ.ಬಿ.ಎಸ್, ಎಂ.ಡಿ, ಎಂ.ಎಸ್ ಕೋರ್ಸ್ ಗಳಿಗೆ, ಸರ್ಕಾರಿ ಕೋಟಾದಲ್ಲಿ ಸರ್ಕಾರಿ/ಖಾಸಗಿ ಕಾಲೇಜು ಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಗರಿಷ್ಠ 5,00,000 ರೂ. ಸಾಲ ನೀಡಲಾಗುತ್ತದೆ.

2) ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (ಸಿ.ಇ.ಟಿ./ನೀಟ್) ಮುಖಾಂತರ ಆಯ್ಕೆಯಾದ ಬಿ. ಡಿ. ಎಸ್, ಎಂ.ಡಿ.ಎಸ್ ಕೋರ್ಸುಗಳಿಗೆ ಸರ್ಕಾರಿ ಕೋಟಾದಲ್ಲಿ ಸರ್ಕಾರಿ/ಖಾಸಗಿ ಕಾಲೇಜು ಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಗರಿಷ್ಠ 1,00,000 ರೂ. ವರೆಗೆ ಮತ್ತು ಬಿ.ಆಯುಷ್ ಮತ್ತು ಎಂ.ಆಯುಷ್ ಕೋರ್ಸ್ ಗಳಿಗೆ, ಸರ್ಕಾರಿ ಕೋಟಾದಲ್ಲಿ ಸರ್ಕಾರಿ/ಖಾಸಗಿ ಕಾಲೇಜು ಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಗರಿಷ್ಠ 50,000 ರೂ. ನೀಡಲಾಗುತ್ತದೆ.

3). ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (ಸಿ.ಇ.ಟಿ./ನೀಟ್) ಮುಖಾಂತರ ಆಯ್ಕೆಯಾದ ಬ್ಯಾಚುಲಾರ್ ಆಫ್ ಆರ್ಕಿಟೆಕ್ಟ/ಇಂಜಿನಿಯರಿಂಗ್/ಟೆಕ್ನಾಲಜಿ (ಬಿ.ಇ./ಬಿ.ಟೆಕ್), ಎಂ.ಟೆಕ್, ಎಂ.ಇ. ಬಿ.ಆರ್ಕ್. ಎಂ.ಆರ್ಕ್ ವ್ಯಾಸಾಂಗ ಮಾಡುತ್ತಿರುವ, ಸರ್ಕಾರಿ ಕೋಟಾದಲ್ಲಿ ಸರ್ಕಾರಿ/ಖಾಸಗಿ ಕಾಲೇಜು ಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಗರಿಷ್ಠ 50,000 ರೂ. ರವರೆಗೆ ಸಾಲ ನೀಡಲಾಗುತ್ತದೆ.

4) ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (CET/NEET) ಮುಖಾಂತರ ಎಂ ಬಿ ಎ, ಎಂ ಸಿ ಎ, ಎಲ್ ಎಲ್ ಬಿ ಕೋರ್ಸಗಳಿಗೆ ಓದುತ್ತಿರುವ ವಿದ್ಯಾರ್ಥಿಗಳಿಗೆ ಬೋಧನಾ ಶುಲ್ಕ ಮಾತ್ರ ಗರಿಷ್ಠ 50,000 ರೂ. ಸಾಲ ನೀಡಲಾಗುವುದು.

ಇದನ್ನೂ ಓದಿ: ಸರ್ಕಾರದಿಂದ ಜನಸಾಮಾನ್ಯರಿಗೆ 5 ಲಕ್ಷ ರೂ. ಗಿಫ್ಟ್​ ಈ ಯೋಜನೆ ಪಡೆಯೋದು ಹೇಗೆ? 

5). ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (ಸಿ.ಇ.ಟಿ/ನೀಟ್) ಮುಖಾಂತರ ಆಯ್ಕೆಯಾದ B.Sc. in Horticulture, Agriculture, Dairy Technology, Forestry, Veterinary, Animal science, Food Technology, Bio Technology, Fisheries, Sericulture, Home/community Sciences, Food Nutrition and Dietetics, ಕೋರ್ಸ್‍ಗಳಿಗೆ ಸರ್ಕಾರಿ ಕೋಟಾದಲ್ಲಿ ಸರ್ಕಾರಿ/ಖಾಸಗಿ ಕಾಲೇಜುಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಬೋಧನಾ ಶುಲ್ಕ ಮಾತ್ರ ಗರಿಷ್ಟ 50,000 ರೂ. ಸಾಲವಾಗಿ ನೀಡಲಾಗುವುದು.

6) ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (ಸಿ.ಇ.ಟಿ/ನೀಟ್) ಮುಖಾಂತರ ಆಯ್ಕೆಯಾದ B.Pharma, M.Pharma, Pharma.D,and D.Pharma, ಕೋರ್ಸ್‍ಗಳಿಗೆ ಸರ್ಕಾರಿ ಕೋಟಾದಲ್ಲಿ ಸರ್ಕಾರಿ/ಖಾಸಗಿ ಕಾಲೇಜುಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಬೋಧನಾ ಶುಲ್ಕ ಮಾತ್ರ ಗರಿಷ್ಟ 50,000 ರೂ. ಸಾಲವನ್ನು ನೀಡಲಾಗುವುದು.

ಸೂಚನೆ:
ಅರ್ಜಿದಾರರ ಎಲ್ಲಾ ಮೂಲಗಳಿಂದ ಕುಟುಂಬದ ವಾರ್ಷಿಕ ಆದಾಯ 8,00,000 ರೂ. ಗಿಂತ ಕಡಿಮೆ ಇರಬೇಕು.. ವಿದ್ಯಾರ್ಥಿಯು ಪಡೆದ ಸಾಲವನ್ನು ಕೋರ್ಸ್ ಮುಗಿದ 1 ವರ್ಷದ ನಂತರ 48 ತಿಂಗಳ ಅವಧಿಯಲ್ಲಿ 2% ಬಡ್ಡಿದರದೊಂದಿಗೆ ಮರುಪಾವತಿ ಮಾಡಬೇಕು.

ಪ್ರಮುಖ ದಾಖಲೆಗಳು:
ಜಾತಿ/ಅಲ್ಪಸಂಖ್ಯಾತ ಪ್ರಮಾಣಪತ್ರ
ಆದಾಯ ಪ್ರಮಾಣಪತ್ರ
ಆಧಾರ್ ಕಾರ್ಡ್ ಪ್ರತಿ (ನಿವಾಸದ ಪುರಾವೆ)
CET ಪ್ರವೇಶ ಪತ್ರ
NEET ಪ್ರವೇಶ ಪತ್ರ
SSLC/10 ನೇ ತರಗತಿಯ ಅಂಕಪಟ್ಟಿ
ಡಿಪ್ಲೋಮ/ಪಿ.ಯು.ಸಿ ಅಂಕಪಟ್ಟಿ
ಇಂಡೆಮ್ನಿಟೀ (ನಷ್ಟ ಪರಿಹಾರ) ಬಾಂಡ್
ವಿದ್ಯಾರ್ಥಿಯ ಸ್ವಯಂ ಘೋಷಣೆ ಪತ್ರ
ಪೋಷಕರ ಸ್ವಯಂ ಘೋಷಣೆ ಪತ್ರ

ಇದನ್ನೂ ಓದಿ: ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಉಚಿತ ಹಾಸ್ಟೆಲ್ ಅರ್ಜಿ ಆಹ್ವಾನ

KMCDC Arivu Education Loan ಅರ್ಜಿ ಸಲ್ಲಿಕೆ ಹೇಗೆ?
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: kmdconline.karnataka.gov.in

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 8277799990

WhatsApp Group Join Now
Telegram Group Join Now

Leave a Comment