ಕೊಡಗು ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ (Kodagu District Gram Panchayat Recruitment 2025) ಖಾಲಿ ಇರುವ ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಕೊಡಗು ಜಿಲ್ಲಾ ಪಂಚಾಯತ್, ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
Kodagu District Gram Panchayat Recruitment 2025
ಹುದ್ದೆ ಹೆಸರು : ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರು
ಉದ್ಯೋಗದ ಸ್ಥಳ : ಕೊಡಗು ಜಿಲ್ಲೆ (ಕರ್ನಾಟಕ)
ಒಟ್ಟು ಹುದ್ದೆಗಳ ಸಂಖ್ಯೆ : 10
ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಯು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ (ಪಿಯುಸಿ) ಉತ್ತೀರ್ಣರಾಗಿರಬೇಕು. ಹಾಗೂ ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಪ್ರಮಾಣ ಪತ್ರ ಪಡೆದಿರಬೇಕು. ಹಾಗೂ ಕನಿಷ್ಠ 03 ತಿಂಗಳ ಕಂಪ್ಯೂಟರ್ ಕೋರ್ಸನಲ್ಲಿ ಉತ್ತೀರ್ಣರಾಗಿರಬೇಕು.
ವಯೋಮಿತಿ:
ಅರ್ಜಿ ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕ (13/02/2025) ಕ್ಕೆ ಅಭ್ಯರ್ಥಿಯು ಕನಿಷ್ಠ 18 ವರ್ಷ ವಯೋಮಿತಿ ಪೂರೈಸಿರಬೇಕು.
ಅರ್ಜಿ ಸಲ್ಲಿಸಲು ಗರಿಷ್ಠ ವಯೋಮಿತಿ:
- ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 35 ವರ್ಷ
- ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ: 38 ವರ್ಷ
- ಪ.ಜಾತಿ/ಪ.ಪಂಗಡ/ ಪ್ರ1ರ ಅಭ್ಯರ್ಥಿಗಳಿಗೆ: 40 ವರ್ಷ
Kodagu District Gram Panchayat Recruitment 2025 ವೇತನ:
ಗ್ರಾಮ ಪಂಚಾಯತ್ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ. 18,606.12 ಕನಿಷ್ಠ ವೇತನದ ಜೊತೆಗೆ ತುಟ್ಟಿ ಭತ್ಯ ನೀಡಲಾಗುತ್ತದೆ.
ಅರ್ಜಿ ಶುಲ್ಕ :
- ಸಾಮಾನ್ಯ ಅಭ್ಯರ್ಥಿಗಳಿಗೆ: ರೂ. 500
- ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ: ರೂ. 300
- ಪ.ಜಾತಿ, ಪ.ಪಂಗಡ, ಪ್ರ1, ಮಾಜಿ ಸೈನಿಕ ಅಭ್ಯರ್ಥಿಗಳಿಗೆ: ರೂ. 200
- ಎಲ್ಲಾ ವಿಧಗಳ ವಿಕಲಚೇತನ ಅಭ್ಯರ್ಥಿಗಳಿಗೆ: ರೂ. 100
ಅರ್ಜಿ ಶುಲ್ಕ ಪಾವತಿಸುವ ವಿಧಾನ :
ಅಧಿಸೂಚನೆಯಲ್ಲಿ ನೀಡಿರುವ ಮುಖ್ಯ ಲೆಕ್ಕಾಧಿಕಾರಿ, ಜಿಲ್ಲಾ ಪಂಚಾಯತ್, ಕೊಡಗು ಇವರ ಬ್ಯಾಂಕ್ ಖಾತೆ ಸಂಖ್ಯೆಗೆ ಅಥವಾ QR Code ಸ್ಕ್ಯಾನ್ ಮಾಡುವ ಮೂಲಕ ಅರ್ಜಿ ಶುಲ್ಕ ಪಾವತಿಸಬೇಕು.
ಈ ಸುದ್ದಿಯನ್ನೂ ಓದಿ: ಡಾ. ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ 6ನೇ ತರಗತಿಗೆ ಉಚಿತ ಪ್ರವೇಶ: ಅರ್ಜಿ ಆಹ್ವಾನ
ಆಯ್ಕೆ ವಿಧಾನ :
ಶೈಕ್ಷಣಿಕ ಅರ್ಹತೆಯಲ್ಲಿ ಪಡೆದಿರುವ ಅಂಕಗಳನ್ನು ಪರಿಗಣಿಸಿ ಮೆರಿಟ್ ಮತ್ತು ಮೀಸಲಾತಿ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
Kodagu District Gram Panchayat Recruitment 2025 ಪ್ರಮುಖ ದಿನಾಂಕಗಳು:
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ : ಜನವರಿ 27, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಫೆಬ್ರುವರಿ 13, 2025
ಪ್ರಮುಖ ದಿನಾಂಕಗಳು:
ಅಧಿಕೃತ ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್ ಲಿಂಕ್:
ಈ ಸುದ್ದಿಯನ್ನೂ ಓದಿ: 10th, 12th ಪಾಸಾದವರಿಗೆ ಇಂಡಿಯನ್ ಮರ್ಚೆಂಟ್ ನೇವಿ ಹುದ್ದೆಗಳ ನೇಮಕಾತಿ