ಕೊಪ್ಪಳ ಜಿಲ್ಲಾ ಪಂಚಾಯಿತಿಯಲ್ಲಿ (Zilla Panchayat) ಖಾಲಿ ಇರುವ ಜಿಲ್ಲಾ ಸಹಾಯಕ ಯೋಜನಾ ವ್ಯವಸ್ಥಾಪಕ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್‌ಲೈನ್ ಮೂಲಕ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗಿದೆ.
ಕೊಪ್ಪಳ ಜಿಲ್ಲಾ ಪಂಚಾಯತಿ (Koppal Zilla Panchayat Recruitment 2024)ಯಲ್ಲಿ ” ಜಿಲ್ಲಾ ಸಹಾಯಕ ಯೋಜನಾ ವ್ಯವಸ್ಥಾಪಕ” ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತೆಗಳು, ಒಟ್ಟು ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.
Koppal Zilla Panchayat Recruitment 2024
ಹುದ್ದೆ ಹೆಸರು: ಜಿಲ್ಲಾ ಸಹಾಯಕ ಯೋಜನಾ ವ್ಯವಸ್ಥಾಪಕ
ಉದ್ಯೋಗದ ಸ್ಥಳ: ಕೊಪ್ಪಳ (ಕರ್ನಾಟಕ)
ಒಟ್ಟು ಹುದ್ದೆಗಳ ಸಂಖ್ಯೆ: 01
ವಿದ್ಯಾರ್ಹತೆ:
ಕೊಪ್ಪಳ ಜಿಲ್ಲಾ ಪಂಚಾಯತ್ ಜಿಲ್ಲಾ ಸಹಾಯಕ ಯೋಜನಾ ವ್ಯವಸ್ಥಾಪಕ ಈ ಹುದ್ದೆಗೆ ಅರ್ಜಿ ಸಲ್ಲಿಸುವವರು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕಂಪ್ಯೂಟರ್ ಸೈನ್ಸ್, ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಅಥವಾ ಇನ್ಫಾರ್ಮಶನ್ ಸೈನ್ಸ್ ವಿಷಯದಲ್ಲಿ ಪದವಿ ಪಾಸಾದವರು ಅರ್ಜಿ ಸಲ್ಲಿಸಬಹುದು.
ವಯೋಮಿತಿ:
ಕೊಪ್ಪಳ ಜಿಲ್ಲಾ ಪಂಚಾಯತ್ ನೇಮಕಾತಿ ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕಕ್ಕೆ ಕನಿಷ್ಠ ವಯಸ್ಸು 21 ವರ್ಷ ಪೂರೈಸಿರಬೇಕು.ಮತ್ತು ಗರಿಷ್ಠ 40 ವರ್ಷದ ಒಳಗಿರಬೇಕು.
ಅರ್ಜಿ ಶುಲ್ಕ:
ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ. ಅಭ್ಯರ್ಥಿಗಳು ಉಚಿತವಾಗಿ ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ: ಈ 14 ಮಾನದಂಡಗಳ ಲಿಸ್ಟ್‌ನಲ್ಲಿ ನೀವಿದ್ದರೆ ನಿಮ್ಮ ರೇಷನ ಕಾರ್ಡ್ ರದ್ದಾಗಲಿದೆ, ಇಲ್ಲಿದೆ ಸಂಪೂರ್ಣ ಮಾಹಿತಿ
ಪ್ರಮುಖ ದಿನಾಂಕಗಳು:
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 20 ಸೆಪ್ಟೆಂಬರ್ 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 04 ಅಕ್ಟೋಬರ್ 2024
Koppal Zilla Panchayat Recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: koppal.nic.in
ಇದನ್ನೂ ಓದಿ: ಪಿಎಂ ಕಿಸಾನ್ 18 ನೇ ಕಂತಿನ 2000 ಹಣ ಈ ದಿನ ಖಾತೆಗೆ ಜಮಾ