ಕರ್ನಾಟಕ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ಕೈಗಾರಿಕಾ ವಿಸ್ತರಣಾಧಿಕಾರಿ ನೇಮಕಾತಿ | Kpsc Industrial Extension Officer Recruitment 2024

WhatsApp Group Join Now
Telegram Group Join Now

ಕರ್ನಾಟಕ ಲೋಕಸೇವಾ ಆಯೋಗವು ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯಲ್ಲಿ ಖಾಲಿ ಇರುವ ಕೈಗಾರಿಕಾ ವಿಸ್ತರಣಾಧಿಕಾರಿ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮೊದಲು ನೀಡಿದ ದಿನಾಂಕವನ್ನು ವಿಸ್ತರಿಸಲಾಗಿದೆ.

ಕರ್ನಾಟಕ ಲೋಕಸೇವಾ ಆಯೋಗವು ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದ ಪ್ರಮುಖ ವಿವರಗಳು ಹುದ್ದೆಗಳ ವಿವರ, ವಿದ್ಯಾರ್ಹತೆ, ವೇತನ, ವಯೋಮಿತಿ, ಅಪ್ಲಿಕೇಶನ್ ಶುಲ್ಕ, ಆಯ್ಕೆ ಪ್ರಕ್ರಿಯೆ ಮತ್ತು ಅರ್ಜಿ ಸಲ್ಲಿಸುವ ವಿಧಾನ, ಅಧಿಕೃತ ಅಧಿಸೂಚನೆ, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ ಹೆಚ್ಚಿನ ಮಾಹಿತಿಗಾಗಿ ಕೆಳಗೆ ನೀಡಲಾದ ವಿವರ ಖಚಿತ ಪಡೆಸಿಕೊಂಡು ಅರ್ಜಿ ಸಲ್ಲಿಸಿ.

ಈ ಹಿಂದೆ ಹೊರಡಿಸಲಾದ ಅಧಿಸೂಚನೆಯಲ್ಲಿ ನಿಗದಿಪಡಿಸಲಾಗಿದ್ದ ವಿದ್ಯಾರ್ಹತೆಯ ಕೋರ್ಸ್‌ಗಳಲ್ಲಿ ಬಿ.ಕಾಂ, ಬಿಎಸ್ಸಿ, ಬಿಬಿಎ, ಬಿಇ ಪದವಿಗಳನ್ನು ಮಾತ್ರ ಪರಿಗಣಿಸಲಾಗಿತ್ತು. ಆದರೆ ಪ್ರಸ್ತುತ ಸದರಿ ಹುದ್ದೆಗಳಿಗೆ ಬಿಬಿಎಂ ಮತ್ತು ಬಿ.ಟೆಕ್‌ ಪದವಿ ಪಡೆದ ಅಭ್ಯರ್ಥಿಗಳು ಸಹ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯಲ್ಲಿನ ಕೈಗಾರಿಕಾ ವಿಸ್ತರಣಾಧಿಕಾರಿ 50+13 (HK) ಹುದ್ದೆಗಳಿಗೆ ಬಿಬಿಎಂ ಮತ್ತು ಬಿ.ಟೆಕ್ ಪದವಿದರರು ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 01-08-2024 ರವರೆಗೆ ವಿಸ್ತಾರಿಸಲಾಗಿದೆ.

Kpsc Industrial Extension Officer Recruitment 2024:

ಹುದ್ದೆಗಳ ಹೆಸರು: ಕೈಗಾರಿಕಾ ವಿಸ್ತರಣಾಧಿಕಾರಿ

ಒಟ್ಟು ಹುದ್ದೆಗಳ ಸಂಖ್ಯೆ: 50+13

ವಿದ್ಯಾರ್ಹತೆ :
ಕರ್ನಾಟಕ ಲೋಕಸೇವಾ ಆಯೋಗ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ನೇಮಕಾತಿ ಪ್ರಕಾರ ಅಭ್ಯರ್ಥಿಗಳು ಬಿ.ಕಾಂ, ಬಿಎಸ್ಸಿ, ಬಿಬಿಎ, ಬಿಇ, ಬಿಬಿಎಂ ಮತ್ತು ಬಿ.ಟೆಕ್ ಪಾಸಾದವರು ಅರ್ಜಿ ಸಲ್ಲಿಸಬಹುದು.

ವಯೋಮಿತಿ:
ಕನಿಷ್ಠ 18 ವರ್ಷ ಪೂರೈಸಿರಬೇಕು.
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 35 ವರ್ಷ
ಹಿಂದುಳಿದ ವರ್ಗಗಳ (OBC) ಅಭ್ಯರ್ಥಿಗಳಿಗೆ: 38 ವರ್ಷ
ಎಸ್‌ಸಿ, ಎಸ್‌ಟಿ, ಪ್ರವರ್ಗ-1 ಅಭ್ಯರ್ಥಿಗಳಿಗೆ: 40 ವರ್ಷ

ವೇತನ ಶ್ರೇಣಿ:
ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಕೈಗಾರಿಕಾ ನೇಮಕಾತಿ ಪ್ರಕಾರ ವಿಸ್ತಾರಣಾಧಿಕಾರಿ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ವೇತನ ರೂ. 33,450 ರಿಂದ 62,600 ನೀಡಲಾಗುತ್ತದೆ.

ಅರ್ಜಿ ಶುಲ್ಕ:
ಸಾಮಾನ್ಯ ವರ್ಗದ ಅಭ್ಯರ್ಥಿಗಳು: 600 ರೂ.
ಇತರೆ ಹಿಂದುಳಿದ ಎಲ್ಲಾ ವರ್ಗದ ಅಭ್ಯರ್ಥಿಗಳು: 300 ರೂ.
ಮಾಜಿ ಸೈನಿಕ ಅಭ್ಯರ್ಥಿಗಳು: 50 ರೂ.
SC/ST ಮತ್ತುಪ್ರವರ್ಗ-1 ಅಭ್ಯರ್ಥಿಗಳು: ಅರ್ಜಿ ಶುಲ್ಕ ವಿನಾಯಿತಿ ಇರುತ್ತದೆ.

ಆಯ್ಕೆ ಪ್ರಕ್ರಿಯೆ:
ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಕೈಗಾರಿಕಾ ನೇಮಕಾತಿ ಪ್ರಕಾರ ವಿಸ್ತಾರಣಾಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಿ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮತ್ತು ದಾಖಲೆಗಳ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುವುದು.

ಪ್ರಮುಖ ದಿನಾಂಕಗಳು:
ಅರ್ಜಿ ಸ್ವೀಕರಿಸಲು ವಿಸ್ತರಿಸಿದ ಪ್ರಾರಂಭಿಕ ದಿನಾಂಕ: 23-07-2024
ಆನ್‌ಲೈನ್ ಅರ್ಜಿ ಸಲ್ಲಿಸಲು ವಿಸ್ತರಿಸಿದ ಕೊನೆ ದಿನಾಂಕ: 01-08-2024

Kpsc Industrial Extension Officer Recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: kpsc.kar.nic.in

Leave a Comment