ರೇಷ್ಮೆ ಸಂಶೋಧನೆ ಸಂಸ್ಥೆಯಲ್ಲಿ ಉದ್ಯೋಗ 83700 ರೂ. ವೇತನ | KSSRDI Recruitment 2024

WhatsApp Group Join Now
Telegram Group Join Now

ಕರ್ನಾಟಕ ರಾಜ್ಯ ರೇಷ್ಮೆ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಹೈದ್ರಾಬಾದ್ ಕರ್ನಾಟಕ ವಿಭಾಗದಲ್ಲಿ ಖಾಲಿ ಇರುವ ದ್ವಿತೀಯ ದರ್ಜೆ ಸಹಾಯಕರು ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಕರ್ನಾಟಕ ರಾಜ್ಯ ರೇಷ್ಮೆ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (karnataka state sericulture research and development institute) ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತೆಗಳು, ಒಟ್ಟು ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.

KSSRDI Recruitment 2024

ಉದ್ಯೋಗದ ಸ್ಥಳ: ಹೈದರಾಬಾದ್ ಕರ್ನಾಟಕ

ಹುದ್ದೆಗಳ ಹೆಸರು: ದ್ವಿತೀಯ ದರ್ಜೆ ಸಹಾಯಕರು

ಒಟ್ಟು ಹುದ್ದೆಗಳ ಸಂಖ್ಯೆ: 07

ಹುದ್ದೆ ಸಂಖ್ಯೆ;
ವಿಜ್ಞಾನಿ-ಬಿ: 01
ಹಿರಿಯ ಸಂಶೋಧನಾ ಸಹಾಯಕರು: 05
ದ್ವಿತೀಯ ದರ್ಜೆ ಸಹಾಯಕರು: 01

ಹುದ್ದೆವಾರು ವಿದ್ಯಾರ್ಹತೆ:
ವಿಜ್ಞಾನಿ-ಬಿ : ಬಿಇ / ಬಿ.ಟೆಕ್ / ಬಿಎಸ್ಸಿ / ಎಂಎಸ್ಸಿ .
ಹಿರಿಯ ಸಂಶೋಧನಾ ಸಹಾಯಕರು : ಬಿಇ / ಬಿ.ಟೆಕ್ / ಬಿಎಸ್ಸಿ / ಎಂಎಸ್ಸಿ .
ದ್ವಿತೀಯ ದರ್ಜೆ ಸಹಾಯಕರು: ದ್ವಿತೀಯ ಪಿಯುಸಿ ಪಾಸ್.

KSSRDI Recruitment 2024 ವೇತನ ಶ್ರೇಣಿ:
ವಿಜ್ಞಾನಿ ಬಿ: 83700-155200 ರೂ.
ಹಿರಿಯ ಸಂಶೋಧನಾ ಸಹಾಯಕರು: 44425-83700 ರೂ.
ದ್ವಿತೀಯ ದರ್ಜೆ ಸಹಾಯಕರು: 34100-67600 ರೂ.

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ ನೇಮಕಾತಿ ಅಧಿಸೂಚನೆ ಪ್ರಕಾರ ಕನಿಷ್ಠ ವಯಸ್ಸು 18 ವರ್ಷ ಪೂರೈಸಿರಬೇಕು ಮತ್ತು ಗರಿಷ್ಠ 38 ವರ್ಷ ಮೀರಿರಬಾರದು.

ಅರ್ಜಿ ಶುಲ್ಕ :
SC/ ST ಪ್ರವರ್ಗ-I ಅಭ್ಯರ್ಥಿಗಳಿಗೆ: ರೂ. 500/-
ಇತರೆ ಎಲ್ಲಾ ಅಭ್ಯರ್ಥಿಗಳಿಗೆ: ರೂ. 1000/-

ಅರ್ಜಿ ಸಲ್ಲಿಸಲು ಪ್ರಮುಖ ದಾಖಲೆಗಳು:
ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ.
ಹುದ್ದೆಗೆ ಸಂಬಂಧಿಸಿದಂತೆ ವಿದ್ಯಾರ್ಹತೆ ಅಂಕಪಟ್ಟಿ.
ಜಾತಿ ಮತ್ತು ಆದಾಯ ಪ್ರಮಾಣ ಪತ್ರ.
ಕಾರ್ಯಾನುಭವ ಪ್ರಮಾಣಪತ್ರ.
ಆಧಾರ್ ಕಾರ್ಡ್‌
ಇತ್ತೀಚಿನ ಭಾವಚಿತ್ರ

ಅರ್ಜಿ ಸಲ್ಲಿಸುವ ವಿಧಾನ:
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆ ಪಡೆದು ಸಂಪೂರ್ಣವಾಗಿ ಭರ್ತಿ ಮಾಡಿದ ಎಲ್ಲಾ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿನಾಂಕ 30-10-2024 ರ ಸಂಜೆ 4.00 ಘಂಟೆಯೊಳಗಾಗಿ ಈ ಕೆಳಗೆ ನೀಡಲಾದ ವಿಳಾಸಕ್ಕೆ ನೊಂದಾಯಿತ ಅಂಚೆ ಮೂಲಕ ಮಾತ್ರ ಮಾಹಿತಿಯನ್ನು ಕಳುಹಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ:
ಕರ್ನಾಟಕ ರಾಜ್ಯ ರೇಷ್ಮೆ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ, ತಲಘಟ್ಟಪುರ,
ಕನಕಪುರ ರಸ್ತೆ, ಬೆಂಗಳೂರು-560109.

ಹೆಚ್ಚಿನ ಮಾಹಿತಿಗಾಗಿ:
ಇ-ಮೇಲ್ ವಿಳಾಸ: kssrdi12@gmail.com

ಪ್ರಮುಖ ದಿನಾಂಕಗಳು:
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 10-10-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-10-2024

KSSRDI Recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ಮತ್ತು ಅರ್ಜಿ ನಮೂನೆಗಾಗಿ: ಇಲ್ಲಿ ಕ್ಲಿಕ್ ಮಾಡಿ
ವೆಬ್ಸೈಟ್ ವಿಳಾಸ: kssrdi.karnataka.gov.in

KPTCL ನಿಂದ ಕಿರಿಯ ಪವರ್‌ಮ್ಯಾನ್ ಹಾಗೂ ಕಿರಿಯ ಸ್ಟೇಷನ್ ಪರಿಚಾರಕ ನೇಮಕಾತಿ SSLC, PUC ವಿದ್ಯಾರ್ಹತೆ

ITI ಪಾಸಾದವರಿಗೆ BHEL ನಲ್ಲಿ ಉದ್ಯೋಗ 42,500 ರೂ. ವೇತನ 

ರೈತರಿಗೆ ಗುಡ್ ನ್ಯೂಸ್ ಅಕ್ರಮ ಕೃಷಿಯ ಪಂಪ್ ಸೆಟ್ ಸಕ್ರಮ ಯೋಜನೆಗೆ ಮರು ಜಾರಿ ಸಿಎಂ 

Leave a Comment