---Advertisement---

Kusum B Yojana Karnataka : ‘ರಾಜ್ಯ ಸರ್ಕಾರ’ದಿಂದ ರೈತರಿಗೆ ಶೇಕಡಾ 80% ಸಬ್ಸಿಡಿ’ ದರದಲ್ಲಿ ಸೌರಪಂಪ್’ಸೆಟ್ ಪಡೆಯಲು ಅರ್ಜಿ ಆಹ್ವಾನ.!

By admin

Published On:

Follow Us
Kusum B Yojana Karnataka
---Advertisement---
WhatsApp Group Join Now
Telegram Group Join Now

Kusum B Yojana Karnataka: ರಾಜ್ಯ ಸರ್ಕಾರವು ರೈತರಿಗೆ ಗುಡ್ ನ್ಯೂಸ್ ಯೊಂದನ್ನು ನೀಡಿದ್ದು, ಕುಸುಮ್ ಬಿ ಯೋಜನೆಯಡಿ ಜಾಲ ಮುಕ್ತ ಸೌರ ಕೃಷಿ ಪಂಪ್ಸೆಟ್ ಅಳವಡಿಸಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಈ ಯೋಜನೆಯ ಉದ್ದೇಶ?
ರಾಜ್ಯ ಸರ್ಕಾರದಿಂದ ರೈತರಿಗೆ ಹಗಲು ವೇಳೆಯಲ್ಲಿ ವಿದ್ಯುತ್ ಇಲ್ಲದೆ ಇರುವ ವೇಳೆಯಲ್ಲಿ ನೀರಾವರಿ ಸೌಕರ್ಯವನ್ನು ಒದಗಿಸುವ ಮಹತ್ವಾಕಾಂಕ್ಷಿ ಸೋಲಾರ್ ಪಂಪ್ಸೆಟ್ ಯೋಜನೆ ಇದಾಗಿದೆ.

ರೈತರಿಗೆ ನೀರಾವರಿಗೆ ಸಾಂಪ್ರದಾಯಿಕ ವಿದ್ಯುತ್ ಅವಲಂಬನೆಯನ್ನು (ಬಳಕೆ) ಕಡಿಮೆ ಮಾಡಿ, ಸೌರಶಕ್ತಿಯನ್ನು ಬಳಸುವ ಮೂಲಕ ರೈತರು ಸ್ವಾವಲಂಬನೆ ಸಾಧಿಸಲು ಕುಸುಮ್ ಬಿ ಯೋಜನೆಯನ್ನು ರೂಪಿಸಲಾಗಿದೆ. ಕೃಷಿ ಕ್ಷೇತ್ರದಲ್ಲಿ ರೈತರನ್ನು ಲಾಭದಾಯಕವಾಗಿಸಲು, ಸೌರಶಕ್ತಿ ಬಳಕೆಯ ಉತ್ತೇಜನಕ್ಕೆ ಸರ್ಕಾರದಿಂದ ಶೇಕಡಾ.80 ರಷ್ಟು ಹೆಚ್ಚಿನ ಸಹಾಯಧನ ನೀಡುತ್ತದೆ.

ರಾಜ್ಯ ಸರ್ಕಾರವು ಕುಸುಮ್ ಬಿ ಯೋಜನೆಯಡಿ ಜಾಲ ಮುಕ್ತ ಸೌರ ಕೃಷಿ ಪಂಪ್ಸೆಟ್ ಅಳವಡಿಸಲು ಒತ್ತು ನೀಡಿ, ಸಬ್ಸಿಡಿ ಮೊತ್ತವನ್ನು ಶೇಕಡಾ. 30 ರಿಂದ ಶೇ. 50ಕ್ಕೆ ಹೆಚ್ಚಿಸಿದೆ. ಕುಸುಮ್ ಬಿ (Kusum B Yojana Karnataka) ಯೋಜನೆಯಡಿ ಅರ್ಜಿ ಸಲ್ಲಿಸುವ ರೈತರಿಗೆ ಸೌರ ಫಲಕಗಳು, ಸಬ್ಮರ್ಸಿಬಲ್/ಸರ್ಫೇಸ್ ಡಿಸಿ ಪಂಪ್ಗಳು, ಮೌಂಟಿಂಗ್ ಸ್ಟ್ರಕ್ಟರ್, ಪ್ಯಾನಲ್ ಬೋರ್ಡ್, ಪೈಪ್ ಮತ್ತು ಕೇಬಲ್ ಒದಗಿಸಲಾಗುತ್ತದೆ.

Kusum B Yojana Karnataka ಕುಸುಮ್ ಬಿ ಯೋಜನೆಯ ಪ್ರಯೋಜನಗಳು?

ಸೌರ ಪಂಪ್ ಸೆಟ್ ಗಳ ಸ್ಥಾಪನೆ ಅತ್ಯಂತ ಸುಲಭವಾಗಿದ್ದು, ದೀರ್ಘಕಾಲ ಬಾಳಿಕೆ ಬರುವ ಕಾರಣದಿಂದ ಗ್ರಾಮೀಣ ಪ್ರದೇಶಗಳಲ್ಲೂ ಸೌರ ತಂತ್ರಜ್ಞಾನ ಹೆಚ್ಚು ಜನಪ್ರಿಯವಾಗುತ್ತಿದ್ದು. ಸೌರ ಪಂಪ್ಸೆಟ್ ಬಳಕೆಯಿಂದ ರೈತರಿಗೆ ಸುಮಾರು 8 ಗಂಟೆಗಳ ಕಾಲ ಹಗಲಿನ ವೇಳೆಯಲ್ಲಿ ಕೃಷಿ ಚಟುವಟಿಕೆಗಳಿಗೆ ವಿದ್ಯುತ್ ಪೂರೈಕೆಯಿಂದ ನೀರಾವರಿ ಅನುಕೂಲ ಕಲ್ಪಿಸುತ್ತದೆ.

ಅರ್ಜಿ ಸಲ್ಲಿಸಲು ಯಾವ ದಾಖಲೆಗಳು ಬೇಕು?
ಜಮೀನಿನ ದಾಖಲೆಗಳು
ಆಧಾರ್ ಕಾರ್ಡ್
ಬ್ಯಾಂಕ್ ಪಾಸ್‌ಬುಕ್
ಇತರ ಅಗತ್ಯ ದಾಖಲೆಗಳು

Kusum B Yojana Karnataka

ಅರ್ಜಿ ಸಲ್ಲಿಸುವುದು ಹೇಗೆ?
ರೈತರು ತಮ್ಮ ಆಧಾರ್, ಆರ್ಟಿಸಿ ಮತ್ತು ಬ್ಯಾಂಕ್ ವಿವರಗಳೊಂದಿಗೆ ಆನ್‌ಲೈನ್ ವೆಬ್‌ಸೈಟ್ https://souramitra.com ಮೂಲಕ ನೋಂದಾಯಿಸಿಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:
ರೈತರ ನೋಂದಣಿ ಸಮಸ್ಯೆ ಪರಿಹರಿಸಲು ದೂರವಾಣಿ ಸಂಖ್ಯೆ 080-22202100 ಸಂಪರ್ಕಿಸಿ.

ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಕರ್ನಾಟಕ ಸರ್ಕಾರದ ಸಂಪೂರ್ಣ ಸ್ವಾಮ್ಯಕ್ಕೆ ಒಳಪಟ್ಟಿದೆ) ನಿಗಮ ಕಛೇರಿ, ನವನಗರ ಪಿ.ಬಿ ರಸ್ತೆ, ಹುಬ್ಬಳ್ಳಿ 580025
ದೂರವಾಣಿ ಸಂಖ್ಯೆ: 0836 – 2222535
ವೆಬ್‌ಸೈಟ್ ವಿಳಾಸ: hescom.Karanataka.gov.in
ಇ-ಮೇಲ್ ವಿಳಾಸ: hescom@gmail.com

ರೈತರಿಗೆ ದನದ ಶೇಡ್ ನಿರ್ಮಾಣಕ್ಕೆ ಸರ್ಕಾರದಿಂದ 87, 000 ರೂ. ಸಹಾಯಧನ ಅರ್ಜಿ ಆಹ್ವಾನ! 

Leave a Comment

WhatsApp

Join Now Latest UpDates

Join Now Latest Job And Scheme UpDates News Belagavi

Powered by Webpresshub.net