ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಸಹಾಯಕ ಕಾನೂನು ಅಧಿಕಾರಿ (Assistant Law Officer) ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಅಧಿಸೂಚನೆಯನ್ನು ಹೊರಡಿಸಲಾಗಿದೆ.
ಮಂಗಳೂರು ಮಹಾನಗರ ಪಾಲಿಕೆ (Mangaluru City Corporation Recruitment 2025) ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ? ಯಾವೆಲ್ಲ ಹುದ್ದೆಗಳಿವೆ, ವೇತನ ಎಷ್ಟು, ವಯೋಮಿತಿ ಏನು, ವಿದ್ಯಾರ್ಹತೆ ಏನಿರಬೇಕು? ಆಯ್ಕೆ ಪ್ರಕ್ರಿಯೆ ಹೇಗಿರುತ್ತದೆ ಸೇರಿದಂತೆ ವಿವಿಧ ವಿವರವನ್ನು ಕೆಳಗೆ ನೀಡಲಾಗಿದೆ.
ಹುದ್ದೆಗಳ ಹೆಸರು: ಸಹಾಯಕ ಕಾನೂನು ಅಧಿಕಾರಿ
ಉದ್ಯೋಗದ ಸ್ಥಳ: ಮಂಗಳೂರು (ಕರ್ನಾಟಕ)
ಒಟ್ಟು ಹುದ್ದೆಗಳು: 01
Mangaluru City Corporation Recruitment 2025 ವಿದ್ಯಾರ್ಹತೆ:
ಅಸಿಸ್ಟೆಂಟ್ ಲಾ ಆಫೀಸರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕಾನೂನು (LLM) ಪದವಿಯನ್ನು ಪೂರ್ಣಗೊಳಿಸರಬೇಕು. ಹಾಗೂ ಐದು ವರ್ಷಗಳ ಕಾರ್ಯಾನುಭವವನ್ನು ಹೊಂದಿರಬೇಕು.
ವೇತನ ಶ್ರೇಣಿ:
ಮಂಗಳೂರು ಮಹಾನಗರ ಪಾಲಿಕೆ ನೇಮಕಾತಿ ಮಾನದಂಡಗಳ ಪ್ರಕಾರ, ಸಹಾಯಕ ಕಾನೂನು ಅಧಿಕಾರಿ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 69,250 ರೂ. ವೇತನವನ್ನು ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಅವರು ಪಡೆದಿರುವ ವಿದ್ಯಾರ್ಹತೆ ಮತ್ತು ಕಾರ್ಯಾನುಭವದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಹೇಗೆ ಅರ್ಜಿ ವಿಧಾನ?
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ನಿಮ್ಮ ವಿವರಗಳೊಂದಿಗೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ. ಅಗತ್ಯ ದಾಖಲೆಗಳನ್ನು ಲಗತ್ತಿಸಿ ಅರ್ಜಿಯನ್ನು ಇಮೇಲ್ ಐಡಿ mangaloremcc.est@gmail.com ಗೆ ಕೊನೆಯ ದಿನಾಂಕದೊಳಗೆ ಕಳುಹಿಸಬೇಕು.
ಹೆಚ್ಚಿನ ಮಾಹಿತಿಗಾಗಿ:
ದೂರವಾಣಿ ಸಂಖ್ಯೆ: 0824-2220313-318
ಪ್ರಮುಖ ದಿನಾಂಕಗಳು:
ಅಧಿಸೂಚನೆ ಬಿಡುಗಡೆಯಾದ ದಿನಾಂಕ: 02 ಡಿಸೆಂಬರ್ 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 03 ಜನವರಿ 2025
ಪ್ರಮುಖ ಲಿಂಕ್ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ವೆಬ್ಸೈಟ್ ವಿಳಾಸ: mangalurucity.mrc.gov.in
ಕೇಂದ್ರೀಯ ಉಗ್ರಾಣ ನಿಗಮದಲ್ಲಿ ಉದ್ಯೋಗ 1 ಲಕ್ಷಕ್ಕೂ ಅಧಿಕ ವೇತನ
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 13735 ಹುದ್ದೆಗಳ ನೇಮಕಾತಿ