ಕರ್ನಾಟಕದ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಒಂದಾದ ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (MESCOM) ನಲ್ಲಿ ಖಾಲಿ ಇರುವ ಕಿರಿಯ ಪವರ್‌ಮ್ಯಾನ್ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಮೆಸ್ಕಾಂ) ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತೆಗಳು, ಒಟ್ಟು ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.
MESCOM Recruitment 2024:
ಹುದ್ದೆ ಹೆಸರು: ಸ್ಟೇಷನ್ ಅಟೆಂಡೆಂಟ್ ಮತ್ತು ಜೂನಿಯರ್ ಪವರ್‌ಮ್ಯಾನ್
ಒಟ್ಟು ಹುದ್ದೆಗಳ ಸಂಖ್ಯೆ: 449
ವೇತನ: ರೂ.17,000-63,000/-
ಉದ್ಯೋಗ ಸ್ಥಳ: ಮಂಗಳೂರು (ಕರ್ನಾಟಕ)
ಹುದ್ದೆಗಳ ವಿವರ:
ಕಿರಿಯ ಪವರ್ ಮ್ಯಾನ್: 415
ಕಿರಿಯ ಪವರ್ ಮ್ಯಾನ್ (ಬ್ಯಾಕ್‌ಲಾಗ್): 34
ವಿದ್ಯಾರ್ಹತೆ:
ಕಿರಿಯ ಪವರ್ ಮ್ಯಾನ್ ಮತ್ತು ಸ್ಟೇಷನ್ ಅಟೆಂಡೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿಯಲ್ಲಿ (SSLC) ತೇರ್ಗಡೆ ಆಗಿರಬೇಕು.
ವಯೋಮಿತಿ:
ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಪೂರೈಸಿರಬೇಕು. ಹಾಗೂ ಗರಿಷ್ಠ ವಯಸ್ಸು 35 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳಿಗೆ: 03 ವರ್ಷ
SC/ ST ಅಭ್ಯರ್ಥಿಗಳಿಗೆ: 05 ವರ್ಷ
MESCOM Recruitment 2024 ವೇತನ ಶ್ರೇಣಿ:
ಸ್ಟೇಷನ್ ಅಟೆಂಡೆಂಟ್ ಮತ್ತು ಜೂನಿಯರ್ ಪವರ್‌ಮ್ಯಾನ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ರೂ.17,000 ರಿಂದ 63,000/- ಪ್ರತಿ ತಿಂಗಳು ವೇತನವನ್ನು ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಸಾಮಾನ್ಯ, OBC, EWS ಅಭ್ಯರ್ಥಿಗಳು: ರೂ.378/-
SC, ST ಅಭ್ಯರ್ಥಿಗಳು: ರೂ.614/-
ಆಯ್ಕೆ ಪ್ರಕ್ರಿಯೆ:
ಮೆರಿಟ್ ಪಟ್ಟಿ
ಸಹಿಷ್ಣುತೆ ಪರೀಕ್ಷೆ
ದಾಖಲೆಗಳ ಪರಿಶೀಲನೆ
ಪ್ರಮುಖ ದಿನಾಂಕಗಳು:
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 21-10-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20 ನವೆಂಬರ್ 2024
ಶುಲ್ಕ ಪಾವತಿ ಕೊನೆಯ ದಿನಾಂಕ: 25 ನವೆಂಬರ್, 2024
MESCOM Recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: mescom.karnataka.gov.in
ಯುವಕ ಯುವತಿಯರಿಗೆ ಉಚಿತ ಕಂಪ್ಯೂಟರ್ ಟ್ಯಾಲಿ ತರಬೇತಿ ಜೊತೆಗೆ ಊಟ ವಸತಿ ಉಚಿತ