ಕರ್ನಾಟಕ ಸರ್ಕಾರದ ವತಿಯಿಂದ ನೇಕಾರ ವರ್ಗದವರಿಗೆ ಗುಡ್ ನ್ಯೂಸ್ ನೀಡಿದೆ. 2024-25ನೇ ಸಾಲಿನ ನೇಕಾರ ಸಮ್ಮಾನ್ ಯೋಜನೆಯಡಿಯಲ್ಲಿ ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರರಿಗೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಏನಿದು ಯೋಜನೆ?.
2020 ರಲ್ಲಿ ಕರ್ನಾಟಕ ನೇಕಾರ ಸಮ್ಮಾನ್ ಯೋಜನೆ ಎಂಬ ಮೆಗಾ ಯೋಜನೆಯನ್ನು ಪ್ರಾರಂಭಿಸಲಾಗಿದ್ದು. ರಾಜ್ಯದಲ್ಲಿ ಕೈಮಗ್ಗ ಮತ್ತು ಜವಳಿ ಉದ್ಯಮದಲ್ಲಿ ತೊಡಗಿರುವಂತಹ ಬಡ ನೇಕಾರರಿಗೆ ಆರ್ಥಿಕವಾಗಿ ನೆರವನ್ನು ನೀಡುವ ಸದುದ್ದೇಶದಿಂದ ಈ ಯೋಜನೆಯನ್ನು ಪ್ರಾರಂಭಿಸಲಾಯಿತು.
Nekar Samman Yojana
ಈ ಯೋಜನೆಯ ಪ್ರಯೋಜನ?
2024- 25ನೇ ಸಾಲಿನ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ನೇಕಾರ ಸಮ್ಮಾನ್ ಯೋಜನೆಯನ್ನು (Nekar samman yojana) ರಾಜ್ಯದಲ್ಲಿರುವ ಪ್ರತಿ ಕೈಮಗ್ಗ ಮತ್ತು ವಿದ್ಯುತ್ ಮಗ್ಗ (power loom weavers) ನೇಕಾರರಿಗೆ ವಾರ್ಷಿಕ ರೂ.5000/- ಗಳ ಆರ್ಥಿಕ ನೆರವನ್ನು ನೀಡುವ ಉದ್ದೇಶದಿಂದ ಸೇವಾ ಸಿಂಧು ಪೋರ್ಟಲ್ ನಲ್ಲಿ ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರರ ಮಾಹಿತಿಯನ್ನು ಆಪ್ ಲೋಡ್ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವುದು ಹೇಗೆ?
ಜಿಲ್ಲೆಯ ಕೈಮಗ್ಗ ಮತ್ತು ವಿದ್ಯುತ್ ಮಗ್ಗ ಹಾಗೂ ಮಗ್ಗ ಪೂರ್ವಘಟಕಗಳ ಮಾಲಿಕರು/ ನೇಕಾರರು/ಕಾರ್ಮಿಕರು
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಪ ನಿರ್ದೇಶಕರ ಕಛೇರಿ,
ಗಾರ್ಮೆಂಟ್ಸ್ ತರಬೇತಿ ಕೇಂದ್ರದ ಕಟ್ಟಡ,
ಕೆಐಎಡಿಬಿ ಅಪೇರಲ್ ಪಾರ್ಕ್,
ದೊಡ್ಡಬಳ್ಳಾಪುರ, ಈ ಕಛೇರಿಯಿಂದ ಅರ್ಜಿಯನ್ನು ಪಡೆದು ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಕೊನೆಯ ದಿನಾಂಕದೊಳಗೆ ಸಲ್ಲಿಸಬೇಕು.
Nekar Samman Yojana ಕೊನೆಯ ದಿನಾಂಕ:
ಈ ಯೋಜನೆಗೆ ಅರ್ಜಿ ಸಲ್ಲಿಸುವವರು ಅಕ್ಟೊಬರ್ 30 ರೊಳಗೆ ಸಲ್ಲಿಸಬಹುದಾಗಿದೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ:
ಈ ಯೋಜನೆಯ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 080-22341176 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲಾ ಪಂಚಾಯತ್, ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪೋಸ್ಟ್ ಆಫೀಸ್ ನಲ್ಲಿ ಹೂಡಿಕೆ ಮಾಡಿದ್ರೆ ಸಾಕು 10 ಲಕ್ಷ ರೂ. ರಿಟರ್ನ್ ಸಿಗುತ್ತೆ!
ದನದ ಶೇಡ್ ನಿರ್ಮಾಣಕ್ಕೆ ಸರ್ಕಾರದಿಂದ 57, 000 ರೂ. ಸಹಾಯಧನ ಅರ್ಜಿ ಆಹ್ವಾನ!