---Advertisement---

ರಾಷ್ಟ್ರೀಯ ರಸಗೊಬ್ಬರ ಇಲಾಖೆ ನೇಮಕಾತಿ 56,500 ರೂ. ವೇತನ | NFL Recruitment 2024 @ nationalfertilizers.com

WhatsApp Group Join Now
Telegram Group Join Now

ಕೇಂದ್ರ ಸರ್ಕಾರದ ರಾಷ್ಟ್ರೀಯ ರಸಗೊಬ್ಬರ ಲಿಮಿಟೆಡ್​ (National Fertilizers Limited)ನಲ್ಲಿ ಖಾಲಿ ಇರುವ ನಾನ್ ಎಕ್ಸಿಕ್ಯೂಟಿವ್ ಹುದ್ದೆಳಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್‌ಲೈನ್ ಮೂಲಕ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗಿದೆ.

ನ್ಯಾಷನಲ್ ಫರ್ಟಿಲೈಸರ್ಸ್ ಲಿಮಿಟೆಡ್​ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತೆಗಳು, ಒಟ್ಟು ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.

NFL Recruitment 2024

ಒಟ್ಟು ಹುದ್ದೆಗಳ ಸಂಖ್ಯೆ: 336

ಉದ್ಯೋಗದ ಸ್ಥಳ: ಭಾರತದಾದ್ಯಂತ

ಹುದ್ದೆಗಳ ಹೆಸರು: ಜೂನಿಯರ್ ಇಂಜಿನಿಯರ್ ಗ್ರೇಡ್-2, ಅಕೌಂಡ್ ಅಸಿಸ್ಟೆಂಟ್

ಹುದ್ದೆಗಳ ವಿವರ:
ಜೂನಿಯರ್ ಇಂಜಿನಿಯರ್ ಗ್ರೇಡ್-2, ಡ್ರಾಫ್ಟ್‌ಮನ್, ಸ್ಟೋರ್ ಅಸಿಸ್ಟೆಂಟ್, ಲೋಕೋ ಅಟೆಂಡ್ ಗ್ರೇಡ್-2, ನರ್ಸ್, ಫಾರ್ಮಾಸಿಸ್ಟ್, ಲ್ಯಾಬ್ ಟೆಕ್ನಿಷಿಯನ್, ಎಕ್ಸ್ ರೇ ಟೆಕ್ನಿಷಿಯನ್, ಅಕೌಂಡ್ ಅಸಿಸ್ಟೆಂಟ್, ಅಟೆಂಡೆಂಟ್ ಗ್ರೇಡ್- I (ಫಟ್ಟರ್, ವೆಲ್ಡರ್), ಒಟಿ ಟೆಕ್ನಿಷಿಯನ್ ಸೇರಿದಂತೆ ಹಲವು ಹುದ್ದೆಗಳಿವೆ.

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಪಿಯುಸಿ, ಬಿಎಸ್​​ಸಿ, ಇಂಜಿನಿಯರಿಂಗ್, ಡಿಪ್ಲೋಮಾ, ಪದವಿ (ಸೈನ್ಸ್​, ಆರ್ಟ್ಸ್​, ಕಾಮರ್ಸ್) ನರ್ಸಿಂಗ್, ಬಿಎಸ್​​ಸಿ ನರ್ಸಿಂಗ್, ಫಾರ್ಮಸಿ, ಆಯಾಯ ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆ ಹೊಂದಿರಬೇಕು

NFL Recruitment 2024 ವೇತನ ಶ್ರೇಣಿ:
ರಾಷ್ಟ್ರೀಯ ರಸಗೊಬ್ಬರ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ ಈ ಮೇಲಿನ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 23,000 ದಿಂದ 56,500 ರೂ. ವರಗೆ ವೇತನವನ್ನು ನೀಡಲಾಗುತ್ತದೆ.

ವಯೋಮಿತಿ:
ರಾಷ್ಟ್ರೀಯ ರಸಗೊಬ್ಬರ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಪೂರೈಸಿರಬೇಕು. ಮತ್ತು ಗರಿಷ್ಠ 30 ವರ್ಷದೊಳಗೆ ಇರಬೇಕು.

ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳಿಗೆ: 03 ವರ್ಷ
SC/ ST ಅಭ್ಯರ್ಥಿಗಳಿಗೆ: 05 ವರ್ಷ
PWBD (UR) ಅಭ್ಯರ್ಥಿಗಳಿಗೆ: 10 ವರ್ಷ
PWBD (OBC) ಅಭ್ಯರ್ಥಿಗಳಿಗೆ: 13 ವರ್ಷ
PWBD (SC/ST) ಅಭ್ಯರ್ಥಿಗಳಿಗೆ: 15 ವರ್ಷ

ಆಯ್ಕೆ ಪ್ರಕ್ರಿಯೆ ಹೇಗೆ ನಡೆಯುತ್ತದೆ?
ಒಎಂಆರ್ ಆಧಾರಿತ ಲಿಖಿತ ಪರೀಕ್ಷೆ
ಕೌಶಲ್ಯ ಪರೀಕ್ಷೆ ಇರುತ್ತದೆ.

ಅರ್ಜಿ ಶುಲ್ಕ:
ಜನರಲ್, ಒಬಿಸಿ ಅಭ್ಯರ್ಥಿಗಳು: 200 ರೂ.
SC/ST/PwBD/ExSM ಅಭ್ಯರ್ಥಿಗಳು: ಶುಲ್ಕ ಇರುವುದಿಲ್ಲ.

ಪ್ರಮುಖ ದಿನಾಂಕಗಳು:
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 09 ಅಕ್ಟೋಬರ್ 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 08 ನವೆಂಬರ್ 2024

NFL Recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: nationalfertilizers.com

ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ನೇಮಕಾತಿ ಪದವಿ ಪಾಸಾದವರು ಅರ್ಜಿ ಸಲ್ಲಿಸಿ 

KPTCL ನಿಂದ ಕಿರಿಯ ಪವರ್‌ಮ್ಯಾನ್ ಹಾಗೂ ಕಿರಿಯ ಸ್ಟೇಷನ್ ಪರಿಚಾರಕ ನೇಮಕಾತಿ SSLC, PUC ವಿದ್ಯಾರ್ಹತೆ

1170 ಅಂಗನವಾಡಿ ಟೀಚರ್ ಹುದ್ದೆಗಳ ನೇಮಕಾತಿ SSLC, PUC ವಿದ್ಯಾರ್ಹತೆ 

Leave a Comment

WhatsApp

Join Now Latest UpDates

Join Now Latest Job And Scheme UpDates News Belagavi

Powered by Webpresshub.net