ಕೇಂದ್ರ ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿ ಬರುವ ಬೌದ್ಧಿಕ ವಿಕಲಾಂಗ ಸಬಲೀಕರಣ ಸಂಸ್ಥೆ (NIEPID) ಯಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕ, ಉಪನ್ಯಾಸಕ, ಗುಮಾಸ್ತ ಸೇರಿದಂತೆ ವಿವಿಧ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ನ್ಯಾಷನಲ್ ಇನ್ಸ್ಟಿಟ್ಯೂಟ್ ಫಾರ್ ಪರ್ಸನ್ಸ್ ಆಫ್ ಇಂಟೆಲೆಕ್ಚುವಲ್ ಡಿಸಾಬಿಲಿಟೀಸ್ (NIEPID) ನೇಮಕಾತಿ ಅಧಿಸೂಚನೆ ಗೆ ಸಂಬಂಧಿಸಿದಂತೆ, ಶೈಕ್ಷಣಿಕ ಅರ್ಹತೆ, ವಯಸ್ಸಿನ ಮಿತಿ, ವೇತನ, ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ಶುಲ್ಕ ಪಾವತಿಸುವ ವಿಧಾನ, ದಿನಾಂಕ, ಅರ್ಜಿ ಸಲ್ಲಿಕೆಗೆ ಡೈರೆಕ್ಟ್ ಲಿಂಕ್, ಅಧಿಕೃತ ಅಧಿಸೂಚನೆ ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.
NIEPID Recruitment 2024:
ಹುದ್ದೆಗಳ ಹೆಸರು: ಸಹಾಯಕ ಪ್ರಾಧ್ಯಾಪಕ, ಉಪನ್ಯಾಸಕ, ಗುಮಾಸ್ತ, ಸ್ಟೆನೋಗ್ರಾಫರ್, ನರ್ಸ್, ಚಾಲಕ.
ಒಟ್ಟು ಹುದ್ದೆಗಳ ಸಂಖ್ಯೆ: 60
ಉದ್ಯೋಗದ ಸ್ಥಳ: ಕರ್ನಾಟಕ, ಕೋಲ್ಕತ್ತಾ
ಶೈಕ್ಷಣಿಕ ವಿದ್ಯಾರ್ಹತೆ :
NIEPID ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ SSLC ಪಿಯುಸಿ, ಪದವಿ, ಐಟಿಐ, ಡಿಪ್ಲೊಮಾ, ಸ್ನಾತಕೋತ್ತರ ಪದವಿ, ನರ್ಸಿಂಗ್ ವಿದ್ಯಾರ್ಹತೆ ಹೊಂದಿರಬೇಕು.
ವಯೋಮಿತಿ:
NIEPID ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ ಕನಿಷ್ಠ 18 ವರ್ಷ ಪೂರೈಸಿರಬೇಕು. ಹಾಗೆಯೇ ಗರಿಷ್ಟ 35 ವರ್ಷ ಮೀರುವಂತಿಲ್ಲ.
ವೇತನ ಶ್ರೇಣಿ:
ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 25,000 ರೂ ಯಿಂದ 75,000 ರೂ. ವರೆಗೆ ವೇತನವನ್ನು ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
NIEPID ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
NIEPID Recruitment ಅರ್ಜಿ ಶುಲ್ಕ:
SC, ST, ಮಹಿಳಾ ಮತ್ತು ಅಂಗವಿಕಲ ಅಭ್ಯರ್ಥಿಗಳು : ಅರ್ಜಿ ಶುಲ್ಕ ಇರುವುದಿಲ್ಲ
ಸಾಮಾನ್ಯ ವರ್ಗದ ಅಭ್ಯರ್ಥಿಗಳು : 500 ರೂ.
ಅರ್ಜಿ ಶುಲ್ಕ ಪಾವತಿಸುವ ವಿಧಾನ: ಡಿಮ್ಯಾಂಡ್ ಡ್ರಾಫ್ಟ್
ಅರ್ಜಿ ಸಲ್ಲಿಸುವ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವವರು ಅರ್ಜಿ ನಮೂನೆ ಭರ್ತಿ ಮಾಡಿ ಮತ್ತು ಅಗತ್ಯ ದಾಖಲೆಗಳೊಂದಿಗೆ 17/07/2024 ರೊಳಗೆ ಸ್ಪೀಡ್ ಪೋಸ್ಟ್, ರಿಜಿಸ್ಟರ್ ಪೋಸ್ಟ್ ಅಥವಾ ಇತರ ಯಾವುದೇ ಸೇವೆಗಳ ಮೂಲಕ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.
ವಿಳಾಸ:
Director, NIEPID,
Manovikas Nagar,
Secunderabad-500009
ಪ್ರಮುಖ ದಿನಾಂಕಗಳು:
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 06/06/2024
ಅರ್ಜಿ ಸ್ವೀಕರಿಸಲು ಕೊನೆಯ ದಿನಾಂಕ: 19/07/2024
NIEPID Recruitment 2024 ಪ್ರಮುಖ ಲಿಂಕ್‌ಗಳು:
ಅಧಿಕೃತ ಅಧಿಸೂಚನೆ: Download
ಅರ್ಜಿ ನಮೂನೆ: Apply
ವೆಬ್‌ಸೈಟ್ ವಿಳಾಸ: niepid.nic.in