NIMHANS Recruitment 2024: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (ನಿಮ್ಹಾನ್ಸ್) ನಲ್ಲಿ ಖಾಲಿ ಇರುವ ಮಲ್ಟಿ ಟಾಸ್ಕಿಂಗ್ ಸ್ಟಾಫ್ (MTS) ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್ಲೈನ್ (Online) ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (NIMHANS) ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತೆಗಳು, ಒಟ್ಟು ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.
NIMHANS Recruitment 2024
ಹುದ್ದೆಗಳ ಹೆಸರು: ಮಲ್ಟಿ ಟಾಸ್ಕಿಂಗ್ ಸ್ಟಾಫ್ (MTS)
ಒಟ್ಟು ಹುದ್ದೆಗಳ ಸಂಖ್ಯೆ: 01
ಉದ್ಯೋಗ ಸ್ಥಳ – ಬೆಂಗಳೂರು (ಕರ್ನಾಟಕ)
ವಿದ್ಯಾರ್ಹತೆ
ನಿಮ್ಹಾನ್ಸ್ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ 10ನೇ ತರಗತಿಯಲ್ಲಿ (SSLC) ಪೂರ್ಣಗೊಳಿಸಿರಬೇಕು.
ವಯೋಮಿತಿ:
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಮತ್ತು ನ್ಯೂರೋ ಸೈನ್ಸಸ್ ಅಧಿಸೂಚನೆಯ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠ ವಯಸ್ಸು 25 ವರ್ಷ ಮೀರಿರಬಾರದು.
ವೇತನಶ್ರೇಣಿ:
ನಿಮ್ಹಾನ್ಸ್ ಅಧಿಸೂಚನೆ ನಿಯಮಗಳ ಪ್ರಕಾರ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ.18,000/- ವೇತನವನ್ನು ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಅರ್ಜಿ ಸಲ್ಲಿಸುವ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ .
ಅರ್ಜಿ ಸಲ್ಲಿಸುವ ವಿಧಾನ:
ನಿಮ್ಹಾನ್ಸ್ ನೇಮಕಾತಿ ಮಲ್ಟಿ ಟಾಸ್ಕಿಂಗ್ ಸ್ಟಾಫ್ (MTS) ಉದ್ಯೋಗಗಳಿಗೆ ಅರ್ಜಿ ಸಲ್ಲಿಸುವ ಅರ್ಹ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ. ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಇ-ಮೇಲ್ ಐಡಿ, [nimhansbrainbank@gmail.com] ಗೆ 18 ನವೆಂಬರ್ 2024 ರೊಳಗೆ ಪ್ರಮುಖ ದಾಖಲೆಗಳನ್ನು ಲಗತ್ತಿಸಿ ಕಳುಹಿಸಬೇಕು.
ಪ್ರಮುಖ ದಿನಾಂಕಗಳು:
ಅಧಿಸೂಚನೆ ಬಿಡುಗಡೆಯಾದ ದಿನಾಂಕ: 04/11/2024
ಇ-ಮೇಲ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 18/11/2024
NIMHANS Recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು ಇಲ್ಲಿ ಕ್ಲಿಕ್ ಮಾಡಿ: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: nimhans.ac.in
ಜೂನಿಯರ್ ಆಫೀಸರ್ ಹುದ್ದೆಗಳ ನೇಮಕಾತಿ 2024
ಪಟ್ಟಣ ಪಂಚಾಯಿತಿ ಗ್ರೂಪ್ ಡಿ ನೇರ ನೇಮಕಾತಿ 2024