ಭಾರತೀಯ ರೈಲ್ವೆ ಇಲಾಖೆಯು ಉತ್ತರ ರೈಲ್ವೆ ವಲಯದಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳನ್ನು ಅಭ್ಯರ್ಥಿಗಳಿಂದ ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ರೈಲ್ವೆ ಇಲಾಖೆಯ ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತೆಗಳು, ಒಟ್ಟು ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.
Northern Railway Recruitment 2024
ಹುದ್ದೆಗಳ ಹೆಸರು : ಅಪ್ರೆಂಟಿಸ್
ಉದ್ಯೋಗದ ಸ್ಥಳ : ಭಾರತದಾದ್ಯಂತ
ಒಟ್ಟು ಹುದ್ದೆಗಳ ಸಂಖ್ಯೆ : 4096
ಶೈಕ್ಷಣಿಕ ಅರ್ಹತೆ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ SSLC ಪಾಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಉತ್ತೀರ್ಣರಾಗಿರಬೇಕು. ಅಥವಾ ಐಟಿಐ (ನ್ಯಾಷನಲ್ ಟ್ರೇಡ್ ಸರ್ಟಿಫಿಕೇಟ್) ಹೊಂದಿರಬೇಕು.
ವಯೋಮಿತಿ:
ಉತ್ತರ ರೈಲ್ವೆ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳ ವಯಸ್ಸು ಕನಿಷ್ಠ 15 ವರ್ಷ ಪೂರೈಸಿರಬೇಕು ಮತ್ತು ಗರಿಷ್ಠ 24 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ :
- SC/ST ಅಭ್ಯರ್ಥಿಗಳಿಗೆ: 05 ವರ್ಷ
- ಒಬಿಸಿ ಅಭ್ಯರ್ಥಿಗಳಿಗೆ: 03 ವರ್ಷ
- PWD ಅಭ್ಯರ್ಥಿಗಳಿಗೆ: 10 ವರ್ಷ
ಅರ್ಜಿ ಶುಲ್ಕ :
ಇತರ ಎಲ್ಲಾ ಅಭ್ಯರ್ಥಿಗಳಿಗೆ: 100 ರೂ.
SC/ST, ಮಹಿಳಾ, PWD ಅಭ್ಯರ್ಥಿಗಳಿಗೆ: ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿ ಶುಲ್ಕ ಪಾವತಿಸುವ ವಿಧಾನ :
ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್
ಇದನ್ನೂ ಓದಿ: ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ 50,000 ರೂ. ವೇತನ
ಆಯ್ಕೆ ವಿಧಾನ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಅವರು ವಿದ್ಯಾರ್ಹತೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಮೆರಿಟ್ ಲಿಸ್ಟ್ ಮೂಲಕ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು :
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ : ಆಗಸ್ಟ್ 16, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 16-09- 2024
ಇದನ್ನೂ ಓದಿ: ನಿರುದ್ಯೋಗ ಯುವಕರಿಗೆ ಸ್ವಯಂ ಉದ್ಯೋಗ ಆರಂಭಿಸಲು 30,ಸಾವಿರ ರೂ. ಸಹಾಯಧನ
Northern Railway Recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: rrcnr.org
ಇದನ್ನೂ ಓದಿ: ಅರಿವು ಯೋಜನೆಯಡಿ ವಿದ್ಯಾರ್ಥಿಗಳಿಗೆ ಸಾಲ ಸೌಲಭ್ಯ ಅರ್ಜಿ ಆಹ್ವಾನ