ಕರ್ನಾಟಕ ಪಂಚಾಯತ್ ರಾಜ್ ಕಮಿಷನರೇಟ್ (Panchayat Raj Commissionerate) ಖಾಲಿ ಇರುವ ರಾಜೀವ್ ಗಾಂಧಿ ಪಂಚಾಯತ್ ರಾಜ್ ಫೆಲೋಶಿಪ್ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅಧಿಸೂಚನೆಯನ್ನು ಹೊರಡಿಸಲಾಗಿದೆ.
ಪಂಚಾಯತ್ ರಾಜ್ ಕಮಿಷನರೇಟ್ ಫೆಲೋಶಿಪ್ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತೆಗಳು, ಒಟ್ಟು ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.
Panchayat Raj Commissionerate Recruitment 2024
ಹುದ್ದೆಯ ಹೆಸರು: ಪಂಚಾಯತ್ ರಾಜ್ ಫೆಲೋಶಿಪ್
ಒಟ್ಟು ಹುದ್ದೆಗಳ ಸಂಖ್ಯೆ: 07
ಉದ್ಯೋಗದ ಸ್ಥಳ: ರಾಯಚೂರು, ಯಾದಗಿರಿ, ಬೀದರ್, ಕಲಬುರಗಿ, ಬಳ್ಳಾರಿ, ವಿಜಯನಗರ, ಕೊಪ್ಪಳ (ಕರ್ನಾಟಕ)
ವಿದ್ಯಾರ್ಹತೆ:
ಪಂಚಾಯತ್ ರಾಜ್ ಕಮಿಷನರೇಟ್ ಅಧಿಸೂಚನೆಯ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಪದವಿ, ಸಮಾಜಶಾಸ್ತ್ರ, ಅರ್ಥಶಾಸ್ತ್ರ, ಗ್ರಾಮೀಣಾಭಿವೃದ್ಧಿ, ಸಾಮಾಜಿಕ ಕಾರ್ಯ, ಸಾರ್ವಜನಿಕ ನೀತಿಯಲ್ಲಿ ಸ್ನಾತಕೋತ್ತರ ಪದವಿ, M.Phil, Ph.D ಪೂರ್ಣಗೊಳಿಸಿರಬೇಕು. ಜೊತೆಗೆ ಕನಿಷ್ಠ ಒಂದರಿಂದ ಎರಡು ವರ್ಷಗಳ ಸಂಬಂಧಿಸಿದ ಕ್ಷೇತ್ರದಲ್ಲಿ ಕಾರ್ಯ ಅನುಭವವ ಹೊಂದಿರಬೇಕು.
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯಸ್ಸು 32 ವರ್ಷ ಮೀರಿರಬಾರದು.
ಅರ್ಜಿಶುಲ್ಕ:
ಎಲ್ಲಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ.
Panchayat Raj Commissionerate Recruitment 2024 ವೇತನ ಶ್ರೇಣಿ:
ಪಂಚಾಯತ್ ರಾಜ್ ಕಮಿಷನರೇಟ್ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 60,000 ರೂ. ವೇತನವನ್ನು ನೀಡಲಾಗುತ್ತದೆ.
ಇದನ್ನೂ ಓದಿ: ಗೃಹಲಕ್ಷ್ಮಿ ಹಣ ಬಿಡುಗಡೆ ಬಗ್ಗೆ ಹೊಸ ಅಪ್‌ಡೇಟ್!
ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು, ಲಿಖಿತ ಪರೀಕ್ಷೆ, ಮೆರಿಟ್ ಲಿಸ್ಟ್, ಆಪ್ಟಿಟ್ಯೂಡ್ ಅಸೆಸ್ಮೆಂಟ್, ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು:
ಆನ್‌ಲೈನ್ ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 02-09-2024
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 09-09-2024
Panchayat Raj Commissionerate Recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ:prcrdpr.karnataka.gov.in
ಇದನ್ನೂ ಓದಿ: ಪದವಿ ವಿದ್ಯಾರ್ಥಿಗಳಿಗೆ 1 ಲಕ್ಷ ರೂ. ವಿದ್ಯಾರ್ಥಿವೇತನ