ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ಖಾಲಿ ಇರುವ ಜೂನಿಯರ್ ಇಂಜಿನಿಯರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಪವರ್ ಗ್ರೇಟ್ ಕಾರ್ಪೊರೇಷನ್ ಆಫ್ ಇಂಡಿಯಾ ಜೂನಿಯರ್ ಇಂಜಿನಿಯರ್ (ಸರ್ವೆ ಇಂಜಿನಿಯರಿಂಗ್), ಸರ್ವೇಯರ್, ಡ್ರಾಫ್ಟ್ ಮನ್ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತೆಗಳು, ಒಟ್ಟು ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.
ಹುದ್ದೆಗಳ ಹೆಸರು: ಜೂನಿಯರ್ ಇಂಜಿನಿಯರ್, ಸರ್ವೇಯರ್, ಡ್ರಾಫ್ಟ್ ಮನ್
ಒಟ್ಟು ಹುದ್ದೆಗಳ ಸಂಖ್ಯೆ: 38
PGCIL Recruitment 2024 ಹುದ್ದೆಗಳ ವಿವರ:
- ಜೂನಿಯರ್ ಇಂಜಿನಿಯರ್ (ಸರ್ವೆ ಇಂಜಿನಿಯರಿಂಗ್): 15
- ಸರ್ವೇಯರ್ : 15
- ಡ್ರಾಫ್ಟ್ ಮನ್: 08
ಶೈಕ್ಷಣಿಕ ಅರ್ಹತೆ:
ಜೂನಿಯರ್ ಇಂಜಿನಿಯರ್(ಸರ್ವೆ ಇಂಜಿನಿಯರಿಂಗ್)ಸರ್ವೇಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತಾ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಇಂಜಿನಿಯರಿಂಗ್ ನಲ್ಲಿ ಮೂರು ವರ್ಷದ ಡಿಪ್ಲೋಮಾ, ITI ಪೂರ್ಣಗೊಳಿಸರಬೇಕು.
ವಯೋಮಿತಿ:
ಜೂನಿಯರ್ ಇಂಜಿನಿಯರ್, ಸರ್ವೇಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ ಕನಿಷ್ಠ 18 ಪೂರೈಸಿರಬೇಕು. ಮತ್ತು ಗರಿಷ್ಠ 32 ವರ್ಷ ಮೀರಿರಬಾರದು.
PGCIL Recruitment 2024 ವೇತನ ಶ್ರೇಣಿ:
- ಜೂನಿಯರ್ ಇಂಜಿನಿಯರ್ (ಸರ್ವೆ ಇಂಜಿನಿಯರಿಂಗ್): 26,000 ರಿಂದ 1,18,000 ರೂ.
- ಸರ್ವೇಯರ್ : 22,000 ರಿಂದ 85,000 ರೂ.
- ಡ್ರಾಫ್ಟ್ ಮನ್: 22,000 ರಿಂದ 85,000 ರೂ.
ಅರ್ಜಿ ಶುಲ್ಕ:
- ಸಾಮಾನ್ಯ ವರ್ಗದ ಅಭ್ಯರ್ಥಿಗಳು: 300 ರೂ.
- ST/SC/Ex-s/PWD ಅಭ್ಯರ್ಥಿಗಳು: ಅರ್ಜಿ ಶುಲ್ಕ ವಿನಾಯಿತಿ ಇರುತ್ತದೆ.
ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ, ಸಂದರ್ಶನ ಮತ್ತು ಟ್ರೇಡ್ ಪರೀಕ್ಷೆ ನಡೆಸಿ ಮೂಲಕ
ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಪ್ರಮುಖ ದಿನಾಂಕಗಳು:
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: ಆಗಸ್ಟ್, 07,2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಆಗಸ್ಟ್ 29, 2024
PGCIL Recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: powergrid.in