ಪದವಿ ಪಾಸಾದವರಿಗೆ ಉಚಿತ PSI ಕೋಚಿಂಗ್ | PSI Free coaching Karnataka

WhatsApp Group Join Now
Telegram Group Join Now

ಪೊಲೀಸ್‌ ಇಲಾಖೆಯ ಪೊಲೀಸ್‌ ಸಬ್‌ಇನ್ಸ್‌ಪೆಕ್ಟರ್‌ ಹುದ್ದೆಗೆ, ಪ್ಯಾರಾ ಮಿಲಿಟರಿ ಹುದ್ದೆಗಳಿಗೆ ಸೇರಬೇಕು ಎನ್ನುವ ಅಭ್ಯರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪೊಲೀಸ್‌ ಸಬ್‌ಇನ್ಸ್‌ಪೆಕ್ಟರ್‌ (PSI) ಉಚಿತ ತರಬೇತಿಯನ್ನು ನೀಡುತ್ತಿದ್ದು, ಉಚಿತ ಕೋಚಿಂಗ್ ಗೆ ಅರ್ಜಿಯನ್ನು ಸಲ್ಲಿಸುವುದು ಹೇಗೆ, ಅರ್ಹತಾ ಮಾನದಂಡಗಳು ಏನು? ಸಮಗ್ರ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.

2024-25ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ಪೋಲಿಸ್ ಸಬ್ ಇನ್ಸೆಕ್ಟರ್ (PSI) ಮತ್ತು ಪ್ಯಾರ ಮಿಲಿಟರಿ ಪೂರ್ವ ನೇಮಕಾತಿ ತರಬೇತಿ ನೀಡಲು ಕರ್ನಾಟಕ ರಾಜ್ಯದ 04 ಕಂದಾಯ ವಿಭಾಗಗಳಲ್ಲಿ ಪ್ರತ್ಯೇಕವಾಗಿ 75 ದಿನಗಳ ವಸತಿಯುತ ತರಬೇತಿ ನೀಡಲಾಗುತ್ತದೆ. ಅಭ್ಯರ್ಥಿಗಳಿಗೆ ಯಾವುದೇ ಪರೀಕ್ಷೆ ಇಲ್ಲದೆ ಆಯ್ಕೆ ಮಾಡಲಾಗುತ್ತದೆ.

PSI Free coaching Karnataka:

ಅರ್ಜಿ ಸಲ್ಲಿಸಲು ಅರ್ಹತಾ ಮಾನದಂಡಗಳು:
ವಯೋಮಿತಿ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಕನಿಷ್ಠ 21 ವರ್ಷ, ಗರಿಷ್ಠ 32 ವರ್ಷದೊಳಗಿರಬೇಕು. ಸೇವಾನಿರತವಾಗಿರುವ ಅಭ್ಯರ್ಥಿಗಳು ಗರಿಷ್ಠ 40 ವರ್ಷ

ವಿದ್ಯಾರ್ಹತೆ:
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಯುಜಿಸಿ ಇಂದ ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಅಥವಾ ತತ್ಸಮಾನ (ಪಿಯುಸಿ ನಂತರ ಪದವಿಗೆ ಸಮನಾದ ಯಾವುದೇ ಶಿಕ್ಷಣ) ಪದವಿ ಪಾಸಾಗಿರಬೇಕು.

ಸೇವಾನಿರತರ ಅಭ್ಯರ್ಥಿಗಳು ಪೊಲೀಸ್ ಇಲಾಖೆಯ ಯಾವುದೇ ವೃಂದದಲ್ಲಿ ಕನಿಷ್ಠ 5 ವರ್ಷಗಳ ಕಾಲ ಸೇವೆ ಸಲ್ಲಿಸಿರಬೇಕು.

PSI Free coaching Karnataka ಪ್ರಮುಖ ದಾಖಲೆಗಳು:
ಅಭ್ಯರ್ಥಿ ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.
ಅರ್ಜಿದಾರರ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹೊಂದಿರಬೇಕು.
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗೆ ಪದವಿ ಪಾಸಾಗಿರಬೇಕು.

ಇದನ್ನೂ ಓದಿ: ಪದವಿ ಪಾಸಾದವರಿಗೆ ಇಂಡಿಯನ್ ಬ್ಯಾಂಕ್ ನಲ್ಲಿ ಉದ್ಯೋಗ 

PSI ಉಚಿತ ಕೋಚಿಂಗ್ ಅವಧಿ:
ಆಯ್ಕೆಯಾಗುವ ಅಭ್ಯರ್ಥಿಗಳಿಗೆ ವಸತಿಯುತ, ಪೋಲಿಸ್ ಸಬ್ ಇನ್ವೆಕ್ಟರ್ (PSI) ಮತ್ತು ಪ್ಯಾರ ಮಿಲಿಟರಿ ಪೂರ್ವ-ನೇಮಕಾತಿ ತರಬೇತಿ ನೀಡುವ ಸಂಬಂಧ ಕರ್ನಾಟಕ ರಾಜ್ಯದ 04 ಕಂದಾಯ ವಿಭಾಗಗಳಲ್ಲಿ ಪ್ರತ್ಯೇಕವಾಗಿ 75 ದಿನಗಳ ವಸತಿಯುತ ತರಬೇತಿ ನೀಡಲಾಗುತ್ತದೆ.

ದೈಹಿಕ ಮಾನದಂಡಗಳು:
ಅಭ್ಯರ್ಥಿಗಳ ಎತ್ತರ:
ಪುರುಷರಿಗೆ ಕನಿಷ್ಠ 163 ಸೆಂ.ಮೀ ಹೊಂದಿರಬೇಕು. ಮಹಿಳಾ ಅಭ್ಯರ್ಥಿಗಳು ಕನಿಷ್ಠ 153 ಸೆಂ.ಮೀ

ತೂಕ: ಪುರುಷ ಅಭ್ಯರ್ಥಿಗಳಿಗೆ ಕನಿಷ್ಠ ತೂಕ 50 ಕೆ.ಜಿ ಮಹಿಳೆಯರಿಗೆ ಕನಿಷ್ಠ 45 ಕೆ.ಜಿ.

ಇದನ್ನೂ ಓದಿ: ಮೈಸೂರು ನೋಟು ಮುದ್ರಣ ಕೇಂದ್ರದಲ್ಲಿ ಉದ್ಯೋಗ 69,700 ರೂ. ವೇತನ

ಎದೆ ಅಳತೆ: (ಪುರುಷರಿಗೆ) ಕನಿಷ್ಠ 76 ಸೆಂ.ಮೀ.

ಆಯ್ಕೆ ವಿಧಾನ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿಯಲ್ಲಿ ಪಡೆದಿರುವಂತಹ ಅಂಕಗಳ ಆಧಾರದ ಆಯ್ಕೆ ನಡೆಯುತ್ತದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31/08/2024

PSI Free coaching Karnataka ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್‌ ವಿಳಾಸ: petc.kar.nic.in

ಇದನ್ನೂ ಓದಿ: PUC, ಪದವಿ, ಡಿಪ್ಲೊಮಾ, ಓದುತ್ತಿರುವ ವಿದ್ಯಾರ್ಥಿಗಳಿಗೆ 12,000 ರೂ. ವಿದ್ಯಾರ್ಥಿವೇತನ 

Leave a Comment

WhatsApp

Join Now Latest UpDates

Join Now Latest Job And Scheme UpDates News Belagavi

Powered by Webpresshub.net