Raichur University Recruitment: ರಾಯಚೂರು ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದದ 06 ಹಾಗೂ ಕಲ್ಯಾಣ ಕರ್ನಾಟಕ ವೃಂದದಲ್ಲಿ 18 ಒಟ್ಟು 24 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅಧಿಸೂಚನೆ ಹೊರಡಿಸಲಾಗಿದೆ. ಈ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ನೇರ ನೇಮಕಾತಿ ಮೂಲಕ ಭರ್ತಿ ಮಾಡಲಿದೆ.
ರಾಯಚೂರು ವಿಶ್ವವಿದ್ಯಾಲಯ ಸಹಾಯಕ ಪ್ರಾಧ್ಯಾಪಕರು ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದ ಬೇಕಾಗುವ ಅರ್ಹತೆಗಳು, ಒಟ್ಟು ಹುದ್ದೆ ಸಂಖ್ಯೆ, ಅರ್ಜಿ ಸಲ್ಲಿಸುವ ವಿಧಾನ, ವೇತನ ಶ್ರೇಣಿ ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.
Raichur University Recruitment 2024 ಸಂಕ್ಷಿಪ್ತ ವಿವರ:
- ನೇಮಕಾತಿ ಸಂಸ್ಥೆ: ರಾಯಚೂರು ವಿಶ್ವವಿದ್ಯಾಲಯ
- ಪರೀಕ್ಷಾ ಪ್ರಾಧಿಕಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA)
- ಹುದ್ದೆಗಳ ಹೆಸರು: ಸಹಾಯಕ ಪ್ರಾಧ್ಯಾಪಕರು (Assistant Professor)
- ಒಟ್ಟು ಹುದ್ದೆಗಳ ಸಂಖ್ಯೆ: 24
ಹುದ್ದೆಗಳ ಮಾಹಿತಿ:
ಸಹಾಯಕ ಪ್ರಾಧ್ಯಾಪಕರು: 06 (Non HK)
ಸಹಾಯಕ ಪ್ರಾಧ್ಯಾಪಕರು:18 (HK)
ಶೈಕ್ಷಣಿಕ ಅರ್ಹತೆ:
NET, KSET ತೇರ್ಗಡೆಯಾಗಿರಬೇಕು. ಪಿಹೆಚ್‌ಡಿ ಪದವಿ / ಎಂಫಿಲ್ ಪದವಿ ಪಾಸಾದವರಿಗೆ ಎನ್‌ಇಟಿ, ಎಸ್‌ಎಲ್‌ಇಟಿ ಪರೀಕ್ಷೆಯಲ್ಲಿ ವಿನಾಯಿತಿ ನೀಡಲಾಗುತ್ತದೆ.
ವಯೋಮಿತಿ:
ರಾಯಚೂರು ವಿಶ್ವವಿದ್ಯಾಲಯದಲ್ಲಿ ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದೊಳಗೆ ಕನಿಷ್ಠ ವಯಸ್ಸು 22 ವರ್ಷಗಳು ಪೂರೈಸಿರಬೇಕು.
ವೇತನ ಶ್ರೇಣಿ:
ರಾಯಚೂರು ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ ರೂ. 57,700-1,82,400 ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಸಾಮಾನ್ಯ ವರ್ಗ ಮತ್ತು ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳು : 2000 ರೂ.
ಪರಿಶಿಷ್ಟ ಜಾತಿ (SC), ಪರಿಶಿಷ್ಟ ಪಂಗಡ(ST), ಪ್ರವರ್ಗ-1 ಅಭ್ಯರ್ಥಿಗಳು : 1000 ರೂ.
ಅಂಗವಿಕಲ ಅಭ್ಯರ್ಥಿಗಳು : ಅರ್ಜಿ ಶುಲ್ಕ ವಿನಾಯಿತಿ ಇರುತ್ತದೆ.
ಆಯ್ಕೆ ವಿಧಾನ:
ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ, ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ನೇರ ನೇಮಕಾತಿ ಮೂಲಕ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ಲಿಂಕ್‌ಗಳು:
ಆನ್‌ಲೈನ್ ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 05-08-2024
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25-08-2024
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 27-08-2024
ಸ್ಪರ್ಧಾತ್ಮಕ ಪರೀಕ್ಷೆ ದಿನಾಂಕ 03-10-2024 ಮತ್ತು 04-10-2024
Raichur University Recruitment 2024 ಪ್ರಮುಖ ಲಿಂಕ್‌ಗಳು:
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ಅಧಿಸೂಚನೆ ನೋಡಲು (Non HK): ಇಲ್ಲಿ ಕ್ಲಿಕ್ ಮಾಡಿ
ಅಧಿಸೂಚನೆ ನೋಡಲು(HK): ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: raichuruniversity.ac.in