ರೇಷನ ಕಾರ್ಡ್ ಹೊಂದಿರುವವರು ಇ-ಕೆವೈಸಿ’ ಮಾಡಿಸಿ ಇಲ್ಲದಿದ್ರೆ ಡಿಸೆಂಬರ್ ನಿಂದ ಸಿಗಲ್ಲ ರೇಷನ್’ | Ration Card ekyc Karnataka

WhatsApp Group Join Now
Telegram Group Join Now

Ration Card ekyc Karnataka: ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಪ್ರಮುಖ ಆದೇಶ ಪ್ರಕಾರ ಪಡಿತರ ಚೀಟಿದಾರರು (Ration Card Holders) ಒಂದು ಬಾರಿ ತಮ್ಮ ರೇಷನ ಕಾರ್ಡ್ ನಲ್ಲಿರುವ ಎಲ್ಲಾ ಸದಸ್ಯರ ‘ಇಕೆವೈಸಿ’ (ಆಧಾರ್ ಆಧಾರಿತ ಬೆರಳಚ್ಚಿನ ದೃಢೀಕರಣ) ಮಾಡಿಸುವುದು ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ವಯ ಕಡ್ಡಾಯವಾಗಿದೆ.

ಈಗಾಗಲೇ ಯಾರು ಕಳೆದ ಹಲವು ವರ್ಷಗಳಿಂದ ತಮ್ಮ ಬಿಪಿಎಲ್ (BPL Card) ಪಡಿತರ ಚೀಟಿಗೆ ಈವರೆಗೆ ಇಕೆವೈಸಿ ನೋಂದಣಿ ಆಗಿಲ್ಲ ಅಂತಹ ಕುಟುಂಬದವರು ತಪ್ಪದೇ ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗೆ ತೆರಳಿ ಇಕೆವೈಸಿ (ಆಧಾರ್ ಆಧಾರಿತ ಬೆರಳಚ್ಚಿನ ದೃಢೀಕರಣ) ಮಾಡಿಸಿಕೊಳ್ಳುವುದು ಕಡ್ಡಾಯ ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇಕೆವೈಸಿ ಮಾಡಲು ಮುಖ್ಯ ಕಾರಣ:
ಸರ್ಕಾರದ ಮಾನದಂಡಗಳನ್ವಯ ಒಂದೇ ಕುಟುಂಬದಲ್ಲಿ ಒಂದಂಕ್ಕಿಂತ ಹೆಚ್ಚು ರೇಷನ ಕಾರ್ಡ್ ಇರುವುದು ಹಾಗೂ ಅನರ್ಹ ಪಡಿತರ ಚೀಟಿ ಪಡೆದುಕೊಂಡಿರುವವರು ಮತ್ತು ಆರ್ಥಿಕವಾಗಿ ಸಬಲರಾಗಿದ್ದು, ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದುಕೊಂಡಿರುವವರು ಕೂಡಲೇ ತಾಲ್ಲೂಕು ಕಚೇರಿ/ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ ತಮ್ಮ ಪಡಿತರ ಚೀಟಿಯನ್ನು ಹಿಂದಿರುಗಿಸುವಂತೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ತಿಳಿಸಿದೆ.

ಹಾಗೆಯೇ ಕಳೆದ 6 ತಿಂಗಳಿನಿಂದ ರೇಷನ್ ಪಡೆಯದೇ ಇರುವ ಬಿಪಿಎಲ್ ಪಡಿತರ ಚೀಟಿಗಳನ್ನು ಸಹ ರದ್ದು ಮಾಡುವುದು ಎಂಬುದನ್ನು ಆಹಾರ ಇಲಾಖೆ ಚಿಂತನೆ ನಡೆಸಿದೆ.

ಇ-ಕೆವೈಸಿ ಮಾಡಿಸಲು ಕಡ್ಡಾಯ ದಾಖಲೆಗಳು:
ಪಡಿತರ ಚೀಟಿಯ ಒರಿಜಿನಲ್ ಪ್ರತಿ
ಕುಟುಂಬದ ಸದಸ್ಯರ ಆಧಾರ್ ಕಾರ್ಡ್ ಫೋಟೋಕಾಪಿ
ಕುಟುಂಬದ ಯಜಮಾನನ ಆಧಾರ್ ಕಾರ್ಡ್ ನಕಲು ಪ್ರತಿ
ಬ್ಯಾಂಕ್ ಪಾಸ್‌ಬುಕ್‌ನ ಫೋಟೋಕಾಪಿ
ಕುಟುಂಬದ ಯಜಮಾನನ ಎರಡು ಪಾಸ್‌ಪೋರ್ಟ್ ಅಳತೆಯ ಪೋಟೋ

ಪಡಿತರ ಚೀಟಿಯನ್ನು ಹೊಂದಿರುವ ಎಲ್ಲಾ ಫಲಾನುಭವಿಗಳು ತಮ್ಮ ಗುರುತು ನೋಂದಣಿ ಅಥವಾ ಮರುನೋಂದಣಿ ಮಾಡಿಸದೇ ಇರುವ ಎಲ್ಲಾ ಸದಸ್ಯರು ನವೆಂಬರ್ 30 ರೊಳಗೆ ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ತಮ್ಮ ಬೆರಳಚ್ಚು ನೀಡಿ ಭಯೋಸಂಗ್ರಹಣೆ (ಇ-ಕೆವೈಸಿ) ಸಂಗ್ರಹಣೆ (Ration Card ekyc Biometric) ಕಾರ್ಯ ಮಾಡಿಸಿಕೊಳ್ಳಬೇಕು. ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ತಿಳಿಸಿದೆ.

ಇದಕ್ಕೆ ಯಾವುದೇ ರೀತಿಯ ಹಣ ನೀಡುವಂತಿಲ್ಲ. ಆಧಾರ್ ದೃಢೀಕರಣ(ಇ-ಕೆವೈಸಿ) ಮಾಡಿಸದೇ ಇರುವ ಫಲಾನುಭವಿಗಳಿಗೆ ಡಿಸೆಂಬರ್ ತಿಂಗಳ ಪಡಿತರ (ರೇಷನ) ಹಂಚಿಕೆಯನ್ನು ಸ್ಥಗಿತಗೊಳಿಸಲು ಕ್ರಮವಹಿಸಲಾಗುವುದು. ಹಾಗಾಗಿ ಇ-ಕೆವೈಸಿ ಮಾಡಿಸಿಕೊಳ್ಳವುದು ಕಡ್ಡಾಯ.

ರೈತರಿಗೆ ಗುಡ್ ನ್ಯೂಸ್‌ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ 25,000 ರೂ. ಸಹಾಯಧನ 

ದನದ ಶೇಡ್ ನಿರ್ಮಾಣಕ್ಕೆ ಸರ್ಕಾರದಿಂದ 57, 000 ರೂ. ಸಹಾಯಧನ ಅರ್ಜಿ ಆಹ್ವಾನ! 

ಅನ್ನಭಾಗ್ಯ ಫಲಾನುಭವಿಗಳಿಗೆ ಮತ್ತೊಂದು ಗುಡ್ ನ್ಯೂಸ್ 

Leave a Comment