ಬಿಪಿಎಲ್ ಕಾರ್ಡ್ ರದ್ದಾದ ಅರ್ಹ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಕಡಿತಗೊಂಡ ಬಿಪಿಎಲ್ ಕಾರ್ಡ್ (BPL Card) ಸಮಸ್ಯೆಯನ್ನು ಬಗೆಹರಿಸಲು ಆಹಾರ ಇಲಾಖೆ ಅಧಿಕಾರಿಗಳಿಗೆ ಹೊಸ ಡೆಡ್ ಲೈನ್ ನೀಡಲಾಗಿದೆ, ಇದೇ ನವೆಂಬರ್ 28ರವರೆಗೆ ಸಮಸ್ಯೆ ಪರಿಹರಿಸಲು ಸಮಯಾವಕಾಶವನ್ನು ಆಹಾರ ಸಚಿವ ಮುನಿಯಪ್ಪ ನೀಡಿದ್ದಾರೆ.
ಬಿಪಿಎಲ್ ಕಾರ್ಡ್ (Ration Card Problem Solution) ಪಡೆಯಲು ಅರ್ಹರಾಗಿದ್ದು ವಂಚಿತರಾಗಿರುವ ಫಲಾನುಭವಿಗಳಿಗೆ ಚಿಂತೆ ಮಾಡಬೇಕಾಗಿಲ್ಲ. ಇನ್ನೂ ಮುಂದಿನ 3 ದಿನದೊಳಗಡೆ ರೇಷನ ಪಡೆಯಬಹುದು ಎಂದು ಆಹಾರ ಸಚಿವರು ಹೇಳಿದ್ದಾರೆ.
ಪರಿಶೀಲನೆ ಮಾಡಿ ಅರ್ಹರಿಗೆ ಬಿಪಿಎಲ್ ಕಾರ್ಡ್ ಗಳನ್ನು ವಾಪಸ್ ನೀಡಲಾಗುತ್ತದೆ. ನವೆಂಬರ್ 28ರೊಳಗೆ ಸಮಸ್ಯೆಗೆ ಪರಿಹಾರ ನೀಡಲು ಆಹಾರ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಆಹಾರ ಇಲಾಖೆಯ ಸಚಿವ ಮುನಿಯಪ್ಪ ಸ್ಪಷ್ಟನೆ ನೀಡಿದ್ದಾರೆ.
ಬಿಪಿಎಲ್ ಕಾರ್ಡ್ಗಳ ಗೊಂದಲ ನಿವಾರಣೆ ಆಗಿದೆ. ಒಂದು ವಾರದೊಳಗೆ ಗೊಂದಲ ಪರಿಹರಿಸುವುದಾಗಿ ಹೇಳಿದ್ದೆ. ನವೆಂಬರ್ 28 ರ ನಂತ್ರ ಮೊದಲಿನಂತೆ ಬಿಪಿಎಲ್ ಕಾರ್ಡ್ ಫಲಾನುಭವಿಗಳು ಮತ್ತೆ ಪಡಿತರ ಪಡೆಯಬಹುದು. ಬಿಪಿಎಲ್ ಕಾಡ್೯ ಪರಿಷ್ಕರಣೆಯಲ್ಲಿ ನಾವು ಕೇಂದ್ರ ಸರ್ಕಾರದ ಮಾನದಂಡಗಳು ಅನುಸರಿಸಿದ್ದೇವೆ ಹೊರತು ಯಾವುದೇ ಅವೈಜ್ಞಾನಿಕ ಕ್ರಮ ಅನುಸರಿಸಿಲ್ಲ ಎಂದಿದ್ದಾರೆ.
ಗಂಡ ಹೆಂಡತಿಗೆ ಪ್ರತಿ ತಿಂಗಳು 5000 ರೂ. ಪಿಂಚಣಿ ಯೋಜನೆ