ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನೇಮಕಾತಿ 2025 | RDPR Karnataka Recruitment 2025 Apply Offline

WhatsApp Group Join Now
Telegram Group Join Now

ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣಾಭಿವೃದ್ಧಿ ಉದ್ಯೋಗ ಖಾತರಿ ಯೋಜನೆಯಡಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಡಿ (RDPR Karnataka Recruitment 2025) ಖಾಲಿ ಇರುವ ಓಂಬುಡ್ಸ್‌ ಪರ್ಸನ್ ಹುದ್ದೆಗಳನ್ನು ಭರ್ತಿ ಮಾಡಿ ಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಹೊಸ ಅಧಿಸೂಚನೆ ಹೊರಡಿಸಲಾಗಿದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಡಿ (RDPR Karnataka) ಖಾಲಿ ಇರುವ ಓಂಬುಡ್ಸ್‌ ಪರ್ಸನ್ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕ, ಹುದ್ದೆಗಳ ಸಂಖ್ಯೆ, ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಸೇರಿದಂತೆ ಇತರೆ ಎಲ್ಲಾ ಮಾಹಿತಿಗಳನ್ನು ಈ ಕೆಳಗಿನಂತೆ ವಿವರಿಸಲಾಗಿದೆ.

RDPR Karnataka Recruitment 2025

ಹುದ್ದೆಗಳ ಹೆಸರು : ಓಂಬುಡ್ಸ್ ಪರ್ಸನ್ಸ್‌ (Ombudsman)

ಉದ್ಯೋಗದ ಸ್ಥಳ : ದಕ್ಷಿಣ ಕನ್ನಡ, ಮೈಸೂರು ಮತ್ತು ಕೋಲಾರ (ಕರ್ನಾಟಕ)

ವೇತನ: 45,000 ರೂ.

ಅರ್ಹತೆ:
ಆರ್‌ಡಿಪಿಆರ್ ಕರ್ನಾಟಕ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಸಾರ್ವಜನಿಕ ಆಡಳಿತ, ಕಾನೂನು, ಶೈಕ್ಷಣಿಕ ಕ್ಷೇತ್ರ, ಸಮಾಜ ಸೇವೆ/ ಮ್ಯಾನೇಜ್ ಮೆಂಟ್ ಇವುಗಳಲ್ಲಿ ಯಾವುದಾದರೊಂದು ಕ್ಷೇತ್ರದಲ್ಲಿ ಕನಿಷ್ಠ 10 ವರ್ಷಗಳ ಕಾರ್ಯಾನುಭವ ಹೊಂದಿರಬೇಕು.

ವಯೋಮಿತಿ:
ರಾಷ್ಟ್ರೀಯ ಉಷ್ಣ ವಿದ್ಯುತ್ ನಿಗಮ ನಿಯಮಿತ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 66 ವರ್ಷಗಳು.

ವಯೋಮಿತಿ:
ಆರ್‌ಡಿಪಿಆರ್ ಕರ್ನಾಟಕ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳ ಗರಿಷ್ಠ ವಯಸ್ಸು 66 ವರ್ಷದೊಳಗೆ ಇರಬೇಕು.

ವೇತನ ಶ್ರೇಣಿ:
ಕೇಂದ್ರ/ ರಾಜ್ಯ ಸರ್ಕಾರವು ಹೊರಡಿಸುವ ಆದೇಶಗಳ ಅನುಸಾರ ಸಂಬಳ, ಸಿಟ್ಟಿಂಗ್ ಫೀಜು ನೀಡಲಾಗುವುದು. ಪ್ರಸ್ತುತ ಪ್ರತಿ ತಿಂಗಳು ರೂ. 10,000 ಗೌರವಧನ ಹಾಗೂ ಪ್ರತಿ ಸಿಟ್ಟಿಂಗ್ ಗೆ ರೂ. 2,250 ಹಾಗೂ ಗರಿಷ್ಠ ರೂ. 45,000 ಮಿತಿಗೊಳಪಟ್ಟು ಸಿಟ್ಟಿಂಗ್ ಫೀಜು ನೀಡಲಾಗುವುದು.

ಅರ್ಜಿ ಸಲ್ಲಿಸುವ ವಿಳಾಸ:
ಆಯುಕ್ತರು ಗ್ರಾಮೀಣಾಭಿವೃದ್ಧಿ, ಗ್ರಾಮೀಣಾಭಿವೃದ್ಧಿ ಆಯುಕ್ತಾಲಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, 5ನೇ ಮಹಡಿ, ಪ್ಲಾಟ್ ನಂ‌. 1243, ಕೆ.ಎಸ್.ಐ.ಐ.ಡಿ.ಸಿ. ಕಟ್ಟಡ, ಐ.ಟಿ ಪಾರ್ಕ್, ಸೌತ್ ಬ್ಲಾಕ್, ರಾಜಾಜಿನಗರ ಇಂಡಸ್ಟ್ರೀಯಲ್ ಎಸ್ಟೇಟ್, ಬೆಂಗಳೂರು – 560010.

ಈ ಮೇಲಿನ ವಿಳಾಸಕ್ಕೆ ಕೊನೆಯ ದಿನಾಂಕದೊಳಗೆ ಖುದ್ದಾಗಿ ಅಂಚೆ ಮೂಲಕ ಅಗತ್ಯ ದಾಖಲೆಗಳೊಂದಿಗೆ, ಹಾಗೂ ಕಾರ್ಯಾನುಭವ ವಿವರಗಳೊಂದಿಗೆ ಅರ್ಜಿ ಕಳುಹಿಸಬೇಕು.

ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

RDPR Karnataka Recruitment 2025 ಪ್ರಮುಖ ದಿನಾಂಕಗಳು :
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: ಜನವರಿ 22, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಫೆಬ್ರವರಿ 21, 2025

ಪ್ರಮುಖ ಲಿಂಕ್ ಗಳು:
ಅಧಿಸೂಚನೆ ಮತ್ತು ಅರ್ಜಿ ಫಾರ್ಮ್ ನೋಡಲು: ಇಲ್ಲಿ ಕ್ಲಿಕ್ ಮಾಡಿ
ವೆಬ್ ಸೈಟ್ ವಿಳಾಸ: rdpr.karnataka.gov.in

Leave a Comment