ಸ್ವಯಂ ಉದ್ಯೋಗ ಪ್ರಾರಂಭಿಸಲು 1,00,000 ರೂ. ನೇರಸಾಲ ಯೋಜನೆಗೆ ಅರ್ಜಿ ಆಹ್ವಾನಿ | Self Employment Subsidy Loan Scheme

WhatsApp Group Join Now
Telegram Group Join Now

Self Employment Direct Loan Scheme (1 Lakh Subsidy):ಕರ್ನಾಟಕ ಸರ್ಕಾರವು ಬಡ ಮತ್ತು ಆರ್ಥಿಕವಾಗಿ ಹಿಂದುಳಿದಿರುವ ಫಲಾನುಭವಿಗಳಿಗೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಕಿರು ಆರ್ಥಿಕ ಚಟುವಟಿಕೆಗಳನ್ನು ಕೈಗೊಳ್ಳಲು ಸಹಾಯಧನ ಹಾಗೂ ಸಾಲ ಮಂಜೂರು ಮಾಡಲು ಸ್ವಯಂ ಉದ್ಯೋಗ ನೇರಸಾಲ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.

ಏನಿದು ಯೋಜನೆ?.
ಸ್ವಯಂ ಉದ್ಯೋಗ (ನೇರಸಾಲ) ಯೋಜನೆಯಡಿ ಪರಿಶಿಷ್ಟ ಜಾತಿ ವರ್ಗಕ್ಕೆ ಸೇರಿದ ನಿರುದ್ಯೋಗಿಗಳು ಕೈಗಾಡಿಗಳನ್ನು ಖರೀದಿಸಿ ಹಾಗೂ ರೈತರಿಂದ ತರಕಾರಿ ಹಣ್ಣುಗಳನ್ನು ಖರೀದಿ ಮಾಡಿ, ತಳ್ಳುವ ಗಾಡಿಯ ಮೂಲಕ ಮಾರಾಟ ಮಾಡಿ, ಸ್ವಯಂ ಉದ್ಯೋಗ ಕೈಗೊಂಡು ಆದಾಯಗಳಿಸಲು ಅವಶ್ಯವಿರುವ ಅನುದಾನವನ್ನು ನಿಗಮದಿಂದ ನೀಡಲಾಗುತ್ತದೆ.

Self Employment Subsidy Loan Scheme

ಯೋಜನೆಯ ಪ್ರಯೋಜನಗಳು:
ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ದಿ ನಿಗಮ ನಿಯಮಿತ ವತಿಯಿಂದ ಸ್ವಯಂ ಉದ್ಯೋಗ ನೇರಸಾಲ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಘಟಕ ವೆಚ್ಚ ರೂ.1ಲಕ್ಷ ರೂ. ನೀಡಲಾಗುತ್ತದೆ. ಈ ಪೈಕಿ ರೂ.50,000 ಸಹಾಯಧನ ಹಾಗೂ ರೂ.50,000 ಸಾಲದ ರೂಪದಲ್ಲಿ ಆರ್ಥಿಕ ನೆರವನ್ನು ಒದಗಿಸಲಾಗುತ್ತದೆ. ಈ ಸಾಲದ ಮೊತ್ತವನ್ನು 30 ಸಮಾನ ಕಂತುಗಳಲ್ಲಿ ನಿಗಮಕ್ಕೆ ಶೇ.4ರ ಬಡ್ಡಿದರದೊಂದಿಗೆ ಮರುಪಾವತಿಸಬೇಕಾಗಿರುತ್ತದೆ.

ಅರ್ಜಿ ಸಲ್ಲಿಸಲು ಅರ್ಹತೆಗಳೇನು?:

  • ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.
  • ಅರ್ಜಿದಾರರು ಪರಿಶಿಷ್ಟ ಜಾತಿಗೆ ಸೇರಿದವರಾಗಿರಬೇಕು.
  • ಜಾತಿ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಸಲ್ಲಿಸಬೇಕು.
  • ಅರ್ಜಿದಾರರು/ ಕುಟುಂಬದ ಯಾವುದೇ ಸದಸ್ಯರು ಈ ಹಿಂದೆ ನಿಗಮದಿಂದ ಸೌಲಭ್ಯ ಪಡೆದಿರಬಾರದು.
  • ಅರ್ಜಿದಾರರ ಕುಟುಂಬದ ಯಾವುದೇ ಸದಸ್ಯರು ಸರ್ಕಾರಿ/ಅರೆ ಸರ್ಕಾರಿ ಹುದ್ದರಯಲ್ಲಿರಬಾರದು.
  • ಅರ್ಜಿದಾರರು ಘಟಕವನ್ನು ಸ್ಥಾಪಿಸಲು ಅಗತ್ಯವಿರುವ ಸ್ಥಳವನ್ನು ಹೊಂದಿರಬೇಕು.

ಪ್ರಮುಖ ದಾಖಲೆಗಳು:

  • ಪಾಸ್ ಪೋರ್ಟ್ ಸೈಜ್ ಪೋಟೋ (Photo)
  • ಜಾತಿ ಪತ್ರ ಮತ್ತು ಆದಾಯ ಪ್ರಮಾಣ ಪತ್ರ (RD number)
  • ಆಧಾರ ಕಾರ್ಡ್ (Aadhaar card)
  • ಬ್ಯಾಂಕ್ ಪಾಸ್ ಬುಕ್ (Bank passbook)

ಸರ್ಕಾರದಿಂದ ಮಹಿಳೆಯರಿಗೆ 2.5 ಲಕ್ಷ ಸಹಾಯಧನ ಅರ್ಜಿ ಆಹ್ವಾನ

ಪ್ರಮುಖ ನಿಯಮಗಳು:

  • ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯ ಎಲ್ಲಾ ಮೂಲಗಳಿಂದ ಗ್ರಾಮೀಣ ಪ್ರದೇಶದವರಿಗೆ ರೂ.1,50,000 ಲಕ್ಷ ಹಾಗೂ ನಗರ ಪ್ರದೇಶದವರಿಗೆ ರೂ.2.00,000 ಲಕ್ಷ ಒಳಗಿರಬೇಕು.
  • ಅರ್ಜಿದಾರರ ವಯಸ್ಸು 21 ವರ್ಷದಿಂದ 50 ವರ್ಷಗಳ ನಡುವೆ ಇರಬೇಕು.
  • ಉದ್ದೇಶಿತ ವ್ಯಾಪಾರ /ಚಟುವಟಿಕೆ ಆಧಾರದ ಮೇಲೆ ಸಾಲ ಸಹಾಯಧನ ನೀಡಲಾಗುತ್ತದೆ.
  • ಸಹಾಯಧನ ಮತ್ತು ಸಾಲವನ್ನು ನೇರವಾಗಿ ಫಲಾನುಭವಿಗಳು ಮತ್ತು ಮಾರಾಟಗಾರರ ಖಾತೆ ನೇರವಾಗಿ ಬಿಡುಗಡೆ ಮಾಡಲಾಗುವುದು.
Self Employment Subsidy Loan Scheme

ಬೆಳೆಹಾನಿ ಪರಿಹಾರ ಆಧಾ‌ರ್ ಲಿಂಕ್ ಆದ ರೈತರ ಪಟ್ಟಿ ಬಿಡುಗಡೆ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ

ಅರ್ಜಿ ಸಲ್ಲಿಸುವ ಹೇಗೆ?
ಸ್ವಯಂ ಉದ್ಯೋಗ ನೇರಸಾಲ ಯೋಜನೆ (Self Employment Subsidy Loan Scheme)ಗೆ ಅರ್ಜಿ ಆಹ್ವಾನಿಸಲಾಗಿದೆ. ಸೇವಾ ಸಿಂಧು ಪೋರ್ಟಲ್‌ ಅಥವಾ ಕರ್ನಾಟಕ ಒನ್‌, ಗ್ರಾಮ ಒನ್‌, ಬೆಂಗಳೂರು ಒನ್‌ ಕೇಂದ್ರಗಳಲ್ಲಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 23/11/ 2024

ಗಮನಿಸಿ:
ಹೆಚ್ಚಿನ ಮಾಹಿತಿಗಾಗಿ ದೂರವಾಣಿ 9482300400 ಸಂಪರ್ಕಿಸಬಹುದು.

ಕರ್ನಾಟಕ ಸರ್ಕಾರದಿಂದ ಕಾರು, ಗುಡ್ಸ್ ವಾಹನ ಖರೀದಿಸಲು 3 ಲಕ್ಷ ರೂ. ಆರ್ಥಿಕ ನೇರವು

Leave a Comment