SSLC-PUC Students Free Travel in KSRTC Bus: ಕರ್ನಾಟಕದಲ್ಲಿ ಮಾಚ್೯ ತಿಂಗಳಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳು ಪ್ರಾರಂಭವಾಗಲಿವೆ. ಪರೀಕ್ಷೆಗಳ ಸಂದರ್ಭದಲ್ಲಿ ಕನಾ೯ಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಸರ್ಕಾರಿ ಬಸ್‌ಗಳಲ್ಲಿ ವಿದ್ಯಾರ್ಥಿಗಳು ಹಾಲ್ ಟಿಕೆಟ್ ತೋರಿಸಿ ಉಚಿತವಾಗಿ ಪ್ರಯಾಣ ಮಾಡಲು ಅವಕಾಶ ನೀಡಲಾಗಿದೆ. ಈ ಕುರಿತು ಸಾರಿಗೆ ನಿಗಮಗಳಿಗೆ ಮಾಹಿತಿ ನೀಡಲಾಗಿದ್ದು, ಸುತ್ತೋಲೆಯ ಪ್ರಕಾರ ಚಾಲಕರು, ನಿರ್ವಾಹಕರಿಗೂ ಸೂಕ್ತ ನಿರ್ದೇಶನ ನೀಡುವಂತೆ ಸೂಚನೆ ನೀಡಲಾಗಿದೆ.
2024-25ನೇ ಶೈಕ್ಷಣಿಕ ವರ್ಷದಲ್ಲಿ ದಿನಾಂಕ 01ಮಾಚ್೯ 2025 ರಿಂದ ಕರ್ನಾಟಕ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮತ್ತು ದಿನಾಂಕ 21.03.2025 ರಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಗಳು ಪ್ರಾರಂಭವಾಗಲಿವೆ. ಸಾರಿಗೆ ನಿಗಮವು ಉಚಿತ ಬಸ್ ಸೇವೆ ಘೋಷಣೆ ಮಾಡಿದೆ. ಎಸ್ಎಸ್ಎಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣದಿಂದ ಪರೀಕ್ಷಾ ಕೇಂದ್ರಗಳಿಗೆ ತಲುಪಲು ಅನುಕೂಲ ವಾಗಲಿದೆ.
ಈ ಸಂಬಂಧ ವಿದ್ಯಾರ್ಥಿಗಳಿಗೆ ಅವರ ವಿದ್ಯಾಸಂಸ್ಥೆಯ ಹೊರತಾಗಿ ಇತರೆ ವಿದ್ಯಾಸಂಸ್ಥೆಗಳಗೆ ಪರೀಕ್ಷಾ ಕೇಂದ್ರಗಳ ನಿಯೋಜನೆಯಾಗಿರುವುದರಿಂದ, ಪರೀಕ್ಷಾ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ವಾಸಸ್ಥಳದಿಂದ ತಮ್ಮ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಕನಾ೯ಟಕ ಸಾರಿಗೆ ನಿಗಮದ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿಸಿರುವ ಕುರಿತು ಮುಖ್ಯ ಸಂಚಾರ ವ್ಯವಸ್ಥಾಪಕರು (ವಾ), ಕರಾರಸಾ ನಿಗಮ ಬೆಂಗಳೂರು ಸುತ್ತೋಲೆಯನ್ನು ಹೊರಡಿಸಿರುತ್ತಾರೆ. ವಿದ್ಯಾಥಿ೯ಗಳು ಪರೀಕ್ಷೆಗೆ ತೆರಳುವಾಗ ಹಾಲ್ ಟಿಕೆಟ್ ತೋರಿಸಿ (Admission Ticket) ಉಚಿತವಾಗಿ ಪ್ರಯಾಣಿಸಬಹುದು.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಮಾರ್ಚ್ 1 ರಿಂದ ಮಾರ್ಚ್ 20ರವರೆಗೆ ದ್ವಿತೀಯ ಪಿಯು ಪರೀಕ್ಷೆ -1 ನಡೆಯಲಿದ್ದು. ಹಾಗೂ ಮಾರ್ಚ್ 21ರಿಂದ ಏಪ್ರಿಲ್ 04 ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು -1 ನಡೆಯಲಿವೆ.
ಈ ಸುದ್ದಿಯನ್ನೂ ಓದಿ: SBI ಬ್ಯಾಂಕ್ ವತಿಯಿಂದ 6 ರಿಂದ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ 70,000 ರೂ. ಸ್ಕಾಲರ್ಶಿಪ್