ಭಾರತದ ಸುಪ್ರೀಂ ಕೋರ್ಟ್ (Supreme Court Recruitment 2025) ಅಗತ್ಯ ಇರುವ ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. ಅರ್ಹತೆ ಹೊಂದಿರುವ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಿ.
ಸುಪ್ರೀಂ ಕೋರ್ಟ್ ಆಫ್ ಇಂಡಿಯಾ ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
Supreme Court Recruitment 2025
ಇಲಾಖೆ: ಸುಪ್ರೀಂ ಕೋರ್ಟ್ ಆಫ್ ಇಂಡಿಯಾ
ಒಟ್ಟು ಹುದ್ದೆಗಳ ಸಂಖ್ಯೆ: 241 ಹುದ್ದೆಗಳು
ಹುದ್ದೆಗಳ ಹೆಸರು: ಜೂನಿಯರ್ ಕೋರ್ಟ್ ಅಸಿಸ್ಟೆಂಟ್
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪೂರ್ಣಗೊಳಿಸಿರಬೇಕು. ಜೊತೆಗೆ ಟೈಪಿಂಗ್ ಕೌಶಲ್ಯ ಹೊಂದಿರಬೇಕು.
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಕನಿಷ್ಠ ವಯಸ್ಸು 18 ಪೂರೈಸಿರಬೇಕು. ಹಾಗೂ ಗರಿಷ್ಠ 30 ವರ್ಷಗಳ ನಡುವೆ ಇರಬೇಕು. ಹಾಗೂ ಅಧಿಸೂಚನೆ ಅನುಸಾರ ಮೀಸಲಾತಿ ವರ್ಗಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ.
ವೇತನ ಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಯು ಮಾಸಿಕ 35,400 ರೂ. ರಿಂದ 72,400 ರೂ. ಗಳವರೆಗೆ ವೇತನ ಪಡೆಯುತ್ತಾರೆ.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಟೈಪಿಂಗ್ ಕೌಶಲ್ಯ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
ಈ ಸುದ್ದಿಯನ್ನೂ ಓದಿ: ಬೆಂಗಳೂರು ಮೆಟ್ರೋದಲ್ಲಿ ಉದ್ಯೋಗವಕಾಶ ಶೀಘ್ರವೇ ಅರ್ಜಿ ಸಲ್ಲಿಸಿ
ಅರ್ಜಿ ಶುಲ್ಕ:
ಸಾಮಾನ್ಯ ಮತ್ತು ಒಬಿಸಿ ವರ್ಗದ ಅಭ್ಯರ್ಥಿಗಳು: 1000 ರೂ. ಎಸ್‌ಸಿ/ಎಸ್‌ಟಿ/ಮಾಜಿ ಸೈನಿಕ/ಅಂಗವಿಕಲ ಅಭ್ಯರ್ಥಿಗಳು: 250 ರೂ.
ಶುಲ್ಕ ಪಾವತಿಸುವ ವಿಧಾನ: ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು.
Supreme Court Recruitment 2025 ಪ್ರಮುಖ ದಿನಾಂಕಗಳು:
ಆನ್‌ಲೈನ್ ಸ್ವೀಕರಿಸಲು ಪ್ರಾರಂಭದ ದಿನಾಂಕ: ಫೆಬ್ರವರಿ 5, 2025
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮಾರ್ಚ್ 8, 2025
ಪ್ರಮುಖ ಲಿಂಕ್ ಗಳು:
ಅಧಿಕೃತ ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್ ಲಿಂಕ್: sci.gov.in
ಈ ಸುದ್ದಿಯನ್ನೂ ಓದಿ: ಸ್ಥಳೀಯ ಬ್ಯಾಂಕ್ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ