Uttara Kannada Zilla Grama Panchayat Recruitment 2024: ಉತ್ತರ ಕನ್ನಡ ಜಿಲ್ಲಾ ವ್ಯಾಪ್ತಿಯ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಮೇಲ್ವಿಚಾರಕರು ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಉತ್ತರ ಕನ್ನಡ ಜಿಲ್ಲಾ ಗ್ರಾಮ ಪಂಚಾಯತ್ ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತೆಗಳು, ಒಟ್ಟು ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.
Uttara Kannada Zilla Grama Panchayat Recruitment
ಹುದ್ದೆಗಳ ಹೆಸರು : ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವಿಚಾರಕರು.
ಕರ್ತವ್ಯ ಸ್ಥಳ : ಉತ್ತರ ಕನ್ನಡ ಜಿಲ್ಲೆ (ಕರ್ನಾಟಕ)
ಒಟ್ಟು ಹುದ್ದೆಗಳ ಸಂಖ್ಯೆ : 05
ಶೈಕ್ಷಣಿಕ ಅರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ಸಂಸ್ಥೆಯಿಂದ ದ್ವಿತೀಯ ಪಿಯುಸಿ ಉತ್ತೀರ್ಣರಾಗಿರಬೇಕು. ಹಾಗೂ ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಪ್ರಮಾಣ ಪತ್ರ ಹೊಂದಿರಬೇಕು. ಜೊತೆಗೆ ಮೂರು ತಿಂಗಳ ಕಂಪ್ಯೂಟರ್ ಕೋರ್ಸ್ ಹೊಂದಿರಬೇಕು.
ವಯಸ್ಸಿನ ಮೀತಿ:
ಉತ್ತರ ಕನ್ನಡ ಜಿಲ್ಲಾ ಗ್ರಾಮ ಪಂಚಾಯತ್ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಪೂರೈಸಿರಬೇಕು.
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ: 35 ವರ್ಷ
2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆಗರಿಷ್ಠ: 38 ವರ್ಷ
SC/ ST ಮತ್ತು ಪ್ರವರ್ಗ-I ರ ಅಭ್ಯರ್ಥಿಗಳಿಗೆ ಗರಿಷ್ಠ: 40 ವರ್ಷ
ಅರ್ಜಿ ಶುಲ್ಕ : ಎಲ್ಲಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
KPSC ಕಾನೂನು ಸಲಹೆಗಾರರು ಹುದ್ದೆಗಳ ನೇಮಕಾತಿ 1 ಲಕ್ಷಕ್ಕೂ ಹೆಚ್ಚು ವೇತನ
ಅರ್ಜಿ ಸಲ್ಲಿಸುವ ವಿಳಾಸ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಖಾಲಿ ಇರುವ ಆಯಾ ಗ್ರಾಮ ಪಂಚಾಯತಿಯಿಂದ ಅರ್ಜಿ ನಮೂನೆ ಪಡೆದು ಅರ್ಜಿಯನ್ನು ಭರ್ತಿ ಮಾಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಅರ್ಜಿಯನ್ನು ನೀಡಬೇಕು.
ಪ್ರಮುಖ ಲಿಂಕ್‌ಗಳು:
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: ಸೆಪ್ಟೆಂಬರ್ 12, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಸೆಪ್ಟೆಂಬರ್ 30, 2024
ಮಾನಧನ್ ಯೋಜನೆಯಡಿ ರೈತರಿಗೆ ಪ್ರತಿ ತಿಂಗಳು 3000 ರೂ. ಇಗಲೇ ಅಪ್ಲೈ ಮಾಡಿ.
Uttara Kannada Zilla Grama Panchayat Recruitment ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: zpuk.karnataka.gov.in