ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ, ಉತ್ತರ ಕನ್ನಡ ಜಿಲ್ಲಾ ಪಂಚಾಯತ್ (Uttara Kannada Zilla Panchayat Recruitment 2025) ನಲ್ಲಿ ಖಾಲಿ ಇರುವ DEO, ಟೆಕ್ನಿಕಲ್ ಅಸಿಸ್ಟೆಂಟ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
Uttara Kannada Zilla Panchayat Recruitment 2025
ಹುದ್ದೆಗಳ ಹೆಸರು: ಡೇಟಾ ಎಂಟ್ರಿ ಆಪರೇಟರ್, ತಾಂತ್ರಿಕ ಸಹಾಯಕ ಇಂಜಿನಿಯರ್.
ಹುದ್ದೆಗಳ ಸಂಖ್ಯೆ:03
ವೇತನ: 18,000 – 28,000 ರೂ.
ಉದ್ಯೋಗದ ಸ್ಥಳ: ಉತ್ತರ ಕನ್ನಡ (ಕರ್ನಾಟಕ)
ಹುದ್ದೆಗಳ ವಿವರ:
ಡೇಟಾ ಎಂಟ್ರಿ ಆಪರೇಟರ್ (DEO): 02
ತಾಂತ್ರಿಕ ಸಹಾಯಕ ಇಂಜಿನಿಯರ್: 0 1
ವಿದ್ಯಾರ್ಹತೆ:
ಡೇಟಾ ಎಂಟ್ರಿ ಆಪರೇಟರ್: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಜೊತೆಗೆ ಕಂಪ್ಯೂಟರ್ ಮತ್ತು ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು.
ತಾಂತ್ರಿಕ ಸಹಾಯಕರು: (ಅರಣ್ಯ) ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಿವಿಲ್ನಲ್ಲಿ ಇಂಜಿನಿಯರಿಂಗ್ ಪದವಿ ಜೊತೆಗೆ ಸಾಮಾನ್ಯ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಜೊತೆಗೆ ಸಂಬಂಧಿಸಿದ ಕ್ಷೇತ್ರದಲ್ಲಿ ಅಭ್ಯರ್ಥಿಗಳು ಕನಿಷ್ಠ 02 ರಿಂದ 03 ವರ್ಷಗಳ ಕೆಲಸದ ಅನುಭವವನ್ನು ಹೊಂದಿರಬೇಕು.
ವಯೋಮಿತಿ:
ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳ ಕನಿಷ್ಟ ವಯಸ್ಸು 25 ವರ್ಷ ಆಗಿರಬೇಕು ಹಾಗೂ ಗರಿಷ್ಠ 40 ವರ್ಷ ಹೊಂದಿರಬೇಕು.
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ವೇತನ ಶ್ರೇಣಿ:
ಡೇಟಾ ಎಂಟ್ರಿ ಆಪರೇಟರ್ (DEO): ರೂ.18480/-
ತಾಂತ್ರಿಕ ಸಹಾಯಕ ಇಂಜಿನಿಯರ್: ರೂ.28000/-
ಅರ್ಜಿ ಶುಲ್ಕ:
ಎಲ್ಲಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
Uttara Kannada Zilla Panchayat Recruitment 2025
ಪ್ರಮುಖ ದಿನಾಂಕಗಳು
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 27 ಜನವರಿ 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05 ಫೆಬ್ರವರಿ 2025
ಪ್ರಮುಖ ಲಿಂಕ್ ಗಳು:
ಅಧಿಕೃತ ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಡೇಟಾ ಎಂಟ್ರಿ ಆಪರೇಟರ್ (DEO) ಅರ್ಜಿ ಸಲ್ಲಿಸಲು : ಇಲ್ಲಿ ಕ್ಲಿಕ್ ಮಾಡಿ
ತಾಂತ್ರಿಕ ಸಹಾಯಕ ಇಂಜಿನಿಯರ್ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್ ವಿಳಾಸ: zpuk.karnataka.gov.in
ಇದನ್ನೂ ಓದಿ: ಹಿರಿಯ ಕಾರ್ಯನಿರ್ವಾಹಕ ಹುದ್ದೆಗಳ ನೇಮಕಾತಿ 1 ಲಕ್ಷ ರೂ ವೇತನ
ಇದನ್ನೂ ಓದಿ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನೇಮಕಾತಿ 2025