Virat Kohli Injury Update: ಭಾರತ ಮತ್ತು ಇಂಗ್ಲೆಂಡ್ ನಡುವಿನ ಏಕದಿನ ಸರಣಿಯಲ್ಲಿ ವಿರಾಟ್ ಕೊಹ್ಲಿ ಗಾಯದಿಂದ ಚೇತರಿಸಿಕೊಂಡಿದ್ದಾರೆ. ಮೊದಲ ಪಂದ್ಯದಲ್ಲಿ ಅಲಭ್ಯಿದ ವಿರಾಟ್ ಕೊಹ್ಲಿ, ಎರಡನೇ ಪಂದ್ಯಕ್ಕೆ ಇಂಜುರಿಯಿಂದಾಗಿ ಸಂಪೂರ್ಣವಾಗಿ ಫಿಟ್ ಆಗಿದ್ದಾರೆ. ಇದರಿಂದ ಟೀಮ್ ಇಂಡಿಯಾಗೆ ಬಲ ಬಂದಿದೆ. ಕೊಹ್ಲಿಯ ಆಗಮನದಿಂದ ಆಡುವ ಹನ್ನೊಂದರಲ್ಲಿ ಬದಲಾವಣೆ ಸಾದ್ಯತೆ.
ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಸರಣಿಯಲ್ಲಿ ಭಾರತೀಯ ಕ್ರಿಕೆಟ್ ತಂಡ ಭರ್ಜರಿ ಆರಂಭ ಮಾಡಿದೆ. ನಾಗ್ಪುರದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಇಂಗ್ಲೆಂಡ್ ವಿರುದ್ಧ 4 ವಿಕೆಟ್ಗಳ ಜಯ ಸಾಧಿಸಿದೆ. ಆದರೆ ನಾಗ್ಪುರದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಸ್ಟಾರ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಗಾಯದಿಂದಾಗಿ ಈ ಪಂದ್ಯವನ್ನು ಆಡಿರಲಿಲ್ಲ. ಈ ಸರಣಿಯ ಎರಡನೇ ಪಂದ್ಯ ಫೆಬ್ರವರಿ 9 ರ ಭಾನುವಾರದಂದು ಕಟಕ್ನ ಬಾರಾಬತಿ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಕೊಹ್ಲಿ ಇಂಜುರಿ ಬಗ್ಗೆ ಬಿಗ್ ಅಪ್ಡೇಟ್ ಹೊರಬಿದ್ದಿದೆ. ಕೊಹ್ಲಿ ಎರಡನೇ ಪಂದ್ಯದಲ್ಲಿ ಆಡುವ ಸಾಧ್ಯತೆ ಇದೆ.
ಎರಡನೇ ಏಕದಿನ ಪಂದ್ಯದ ಒಂದು ದಿನ ಮೊದಲು ವಿರಾಟ್ ಕೊಹ್ಲಿ ಫಿಟ್ನೆಸ್ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಭಾರತ ತಂಡದ ಬ್ಯಾಟಿಂಗ್ ಕೋಚ್ ಸಿತಾಶು ಕೊಟಕ್, ‘ವಿರಾಟ್ ಈಗ ಸಂಪೂರ್ಣವಾಗಿ ಫಿಟ್ ಆಗಿದ್ದು, 2ನೇ ಪಂದ್ಯವನ್ನು ಆಡಲಿದ್ದಾರೆ ಎಂದು ಕೋಚ್ ಹೇಳಿದ್ದಾರೆ. ಇದರರ್ಥ ಎರಡನೇ ಏಕದಿನ ಪಂದ್ಯದಲ್ಲಿ ವಿರಾಟ್ ಆಡುವ ಹನ್ನೊಂದರ ಬಳಗಕ್ಕೆ ಮರಳುವುದು ಖಚಿತವಾಗಿದೆ.
ವಿರಾಟ್ ಬಂದ್ರೆ ಜೈಸ್ವಾಲ್ಗೆ ಜಾಗ?
ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದ ಮೂಲಕ ಜೈಸ್ವಾಲ್ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಪದಾರ್ಪಣೆ ಮಾಡಿ. ಚೊಚ್ಚಲ ಏಕದಿನ ಪಂದ್ಯವನ್ನಾಡುವ ಅವಕಾಶ ಸಿಕ್ಕಿತ್ತು ಆದರೆ ಹೆಚ್ಚು ರನ್ ಗಳಿಸಲಿಲ್ಲ. ಕೊಹ್ಲಿ ಬಂದರೆ ಜೈಸ್ವಾಲ್ ಅನ್ನು ಕೈಬಿಟ್ಟು ಕೊಹ್ಲಿಗೆ ಅವಕಾಶ ನೀಡುವ ಸಾಧ್ಯತೆಗಳಿವೆ.
ಏಕದಿನ ಸರಣಿಗೆ ಟೀಮ್ ಇಂಡಿಯಾ!
ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಅಕ್ಷರ್ ಪಟೇಲ್, , ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಯಶಸ್ವಿ ಜೈಸ್ವಾಲ್, ರಿಷಬ್ ಪಂತ್, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್.