ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬಾಗಲಕೋಟೆ ಜಿಲ್ಲೆಯಾದ್ಯಂತ ಇರುವ ಅಂಗನವಾಡಿ (Anganwadi) ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕರು ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ (Anganwadi Recruitment) ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತೆಗಳು, ಒಟ್ಟು ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.
WCD Bagalkot Anganwadi Recruitment 2024:
ಹುದ್ದೆಗಳ ಹೆಸರು: ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ
ಒಟ್ಟು ಹುದ್ದೆಗಳ ಸಂಖ್ಯೆ : 577
ಹುದ್ದೆಯ ವಿವರ :
ಅಂಗನವಾಡಿ ಸಹಾಯಕಿ ಹುದ್ದೆಗಳ ಸಂಖ್ಯೆ: 106
ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳ ಸಂಖ್ಯೆ: 471
ವಿದ್ಯಾರ್ಹತೆ:
ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಆಸಕ್ತ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಯೋಮಿತಿ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 19 ವರ್ಷ ತುಂಬಿರಬೇಕು. ಹಾಗೂ ಗರಿಷ್ಠ 35 ವರ್ಷ ವರ್ಷದ ಒಳಗಿರಬೇಕು.
ವಯೋಮಿತಿ ಸಡಿಲಿಕೆ:
ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ: 03 ವರ್ಷ
ಎಸ್‌ಸಿ/ ಎಸ್‌ಟಿ/ ಪ್ರವರ್ಗ-1 ಅಭ್ಯರ್ಥಿಗಳಿಗೆ: 05 ವರ್ಷ
ವಿಕಲಚೇತನರಿಗೆ ಅಭ್ಯರ್ಥಿಗಳಿಗೆ: 10 ವರ್ಷ
ಅಗತ್ಯ ದಾಖಲೆಗಳು :
- ಜನ್ಮ ದಿನಾಂಕ ಇರುವ ಎಸ್‌ಎಸ್‌ಎಲ್‌ಸಿ/ಪಿಯುಸಿ ಅಂಕಪಟ್ಟಿ.
- ವಿದ್ಯಾರ್ಹತೆ ಪ್ರಮಾಣ ಪತ್ರ.
- ವಾಸಸ್ಥಳ ದೃಢೀಕರಣ ಪತ್ರ.
- ಮೀಸಲಾತಿ ಮತ್ತು ಜಾತಿ ಪ್ರಮಾಣ ಪತ್ರ.
- ವಿಧವೆಯಾಗಿದ್ದಲ್ಲಿ ಪತಿಯ ಮರಣ ಪ್ರಮಾಣ ಪತ್ರ.
- ಆತ್ಮಹತ್ಯೆ ಮಾಡಿಕೊಂಡ ರೈತರ ಪತ್ನಿಯಾಗಿದ್ದಲ್ಲಿ ಉಪವಿಭಾಗಾಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರ.
- ಯೋಜನಾ ನಿರಾಶ್ರಿತರಾಗಿದ್ದಲ್ಲಿ ಪ್ರಮಾಣ ಪತ್ರ.
- ವಿಚ್ಛೇದಿತರಾಗಿದ್ದಲ್ಲಿ ಪ್ರಮಾಣ ಪತ್ರ.
- ವಿಕಲಚೇತನರಾಗಿದ್ದಲ್ಲಿ ಅಂಗವಿಕಲ ಪ್ರಮಾಣ ಪತ್ರ
- ಇತರೆ ಅಗತ್ಯ ದಾಖಲೆಗಳು ಹೊಂದಿರಬೇಕು.
WCD Bagalkot Anganwadi Recruitment 2024 ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅರ್ಜಿಸಲ್ಲಿಸಿದ ಅಭ್ಯರ್ಥಿಗಳು ವಿದ್ಯಾರ್ಹತೆಯಲ್ಲಿ ಪಡೆದ ಅಂಕಗಳಿಗನುಸಾರವಾಗಿ ಕ್ರೂಡೀಕೃತ ಪಟ್ಟಿಯನ್ನು ಸಿದ್ಧಪಡಿಸಿ ಅರ್ಹತೆ ಮತ್ತು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಪ್ರಮುಖ ದಿನಾಂಕಗಳು :
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ : ಅಕ್ಟೋಬರ್ 16, 2024
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ನವ್ಹಂಬರ್ 15, 2024
WCD Bagalkot Anganwadi Recruitment 2024 ಪ್ರಮುಖ ಲಿಂಕ್‌ಗಳು:
ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: anganwadirecruit.kar.nic.in
ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನೇಮಕಾತಿ SSCL ಪಾಸಾದವರು ಅರ್ಜಿ ಸಲ್ಲಿಸಿ
2024-25ನೇ ಸಾಲಿಗೆ ‘BE.d ಕೋರ್ಸ್ ದಾಖಲಾತಿ’ಗೆ ಅರ್ಜಿ ಆಹ್ವಾನ
KPTCL ನಿಂದ ಕಿರಿಯ ಪವರ್‌ಮ್ಯಾನ್ ಹಾಗೂ ಕಿರಿಯ ಸ್ಟೇಷನ್ ಪರಿಚಾರಕ ನೇಮಕಾತಿ