ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬಳ್ಳಾರಿ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವಂತಹ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಬಳ್ಳಾರಿ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವಂತಹ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ. ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತೆಗಳು, ಒಟ್ಟು ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.
WCD Ballari Anganwadi Recruitment 2024:
ಹುದ್ದೆ ಹೆಸರು : ಅಂಗನವಾಡಿ ಟೀಚರ್, ಸಹಾಯಕಿಯರು
ಒಟ್ಟು ಹುದ್ದೆಗಳ ಸಂಖ್ಯೆ : 141
ಹುದ್ದೆಗಳ ಮಾಹಿತಿ:
ಅಂಗನವಾಡಿ ಕಾರ್ಯಕರ್ತೆಯರು: 22
ಅಂಗನವಾಡಿ ಸಹಾಯಕಿಯರು: 119
ಉದ್ಯೋಗದ ಸ್ಥಳ : ಬಳ್ಳಾರಿ ಜಿಲ್ಲೆ (ಕರ್ನಾಟಕ)
ಶೈಕ್ಷಣಿಕ ಅರ್ಹತೆ :
ಅಂಗನವಾಡಿ ಕಾರ್ಯಕರ್ತೆಯರು: ದ್ವೀತಿಯ ಪಿಯುಸಿ ಉತ್ತೀರ್ಣರಾಗಿರಬೇಕು. ಹಾಗೂ 10ನೇ ತರಗತಿಯಲ್ಲಿ ಪ್ರಥಮ ಅಥವಾ ದ್ವಿತೀಯ ಕನ್ನಡ ಭಾಷೆಯನ್ನು ಓದಿರಬೇಕು.
ಅಂಗನವಾಡಿ ಸಹಾಯಕಿಯರು: 10 ನೇ ತರಗತಿ ಉತ್ತೀರ್ಣರಾಗಿರಬೇಕು. ಹಾಗೂ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
WCD Ballari Anganwadi Recruitment 2024 ವಯೋಮಿತಿ :
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಸೂಚನೆ ಅನ್ವಯ ಅಭ್ಯರ್ಥಿಗಳ ಕನಿಷ್ಠ ವಯಸ್ಸು 19 ವರ್ಷ ಪೂರೈಸಿರಬೇಕು. ಮತ್ತು ಗರಿಷ್ಠ ವಯಸ್ಸು 35 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು.
ವಯೋಮಿತಿ ಸಡಿಲಿಕೆ :
ವಿಕಲಚೇತನ ಅಭ್ಯರ್ಥಿಗಳಿಗೆ: 10 ವರ್ಷ
ಇದನ್ನೂ ಓದಿ: ಪಶುಸಂಗೋಪನೆ ಇಲಾಖೆಯಿಂದ ವೆಟರ್ನರಿ ಆಫೀಸರ್ ಅಧಿಸೂಚನೆ
ಆಯ್ಕೆ ವಿಧಾನ :
ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಅವರು ವಿದ್ಯಾರ್ಹತೆಯಲ್ಲಿ ಪಡೆದಿರುವ ಅಂಕಗಳಿಗನುಸಾರವಾಗಿ ಅರ್ಹತೆ ಮತ್ತು ಮೆರಿಟ್ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ದಾಖಲೆಗಳು :
- S.S.L.C.ಅಂಕಪಟ್ಟಿ
- ಅರ್ಜಿಗೆ ಅಗತ್ಯ ವಿದ್ಯಾರ್ಹತೆಯ ಅಂಕಪಟ್ಟಿ
- ವಾಸಸ್ಥಳ ದೃಢೀಕರಣ ಪ್ರಮಾಣ ಪತ್ರ
- ಅರ್ಜಿದಾರರ ಜಾತಿ ಪ್ರಮಾಣ ಪತ್ರ
- ಪತಿಯ ಮರಣ ಪ್ರಮಾಣ ಪತ್ರ ಮತ್ತು ವಿಧವಾ ಪ್ರಮಾಣ ಪತ್ರ (ವಿಧವಾ ಮಹಿಳಾ ಅಭ್ಯರ್ಥಿಗಳಿಗೆ ಮಾತ್ರ)
- ಅಂಗವಿಕಲತೆ ಪ್ರಮಾಣಪತ್ರ (ವಿಕಲಚೇತನರಿಗೆ ಮಾತ್ರ)
- ವಿಚ್ಛೇದನ ಪ್ರಮಾಣ ಪತ್ರ (ನ್ಯಾಯಾಲಯದಿಂದ ಹೊಂದಿರಬೇಕು)
ಇದನ್ನೂ ಓದಿ: ಬೆಂಗಳೂರಿನಲ್ಲಿ ಉದ್ಯೋಗ 1.ಲಕ್ಷಕ್ಕೂ ಅಧಿಕ ವೇತನ
ಪ್ರಮುಖ ದಿನಾಂಕಗಳು :
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: ಆಗಸ್ಟ್ 10, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10/09/ 2024
WCD Ballari Anganwadi Recruitment 2024 ಪ್ರಮುಖ ಲಿಂಕ್ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್ಸೈಟ್ ವಿಳಾಸ: karnemakaone.kar.nic.in
ಇದನ್ನೂ ಓದಿ: ಭಾರತೀಯ ತೈಲ ನಿಗಮ ನೇಮಕಾತಿ 2024