335 ಅಂಗನವಾಡಿ ಟೀಚರ್ ಹುದ್ದೆಗಳ ನೇಮಕಾತಿ | WCD Dakshina Kannada Recruitment 2024

WhatsApp Group Join Now
Telegram Group Join Now

WCD Dakshina Kannada Recruitment 2024: ಕರ್ನಾಟಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆಯ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು, ಅಂಗನವಾಡಿ ಸಹಾಯಕಿ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಮಾಡಿಕೊಳ್ಳಲು ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ (Anganwadi Vacancy) ಅಂಗನವಾಡಿ ಕಾರ್ಯಕರ್ತೆಯರು, ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತೆಗಳು, ಒಟ್ಟು ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.

Wcd Dakshina Kannada Recruitment 2024 ನೇಮಕಾತಿ ವಿವರ:

ಒಟ್ಟು ಹುದ್ದೆಗಳ ಸಂಖ್ಯೆ: 335

ಹುದ್ದೆಗಳ ಹೆಸರು: ಅಂಗನವಾಡಿ ಕಾರ್ಯಕರ್ತೆಯರು, ಅಂಗನವಾಡಿ ಸಹಾಯಕಿ

ಉದ್ಯೋಗದ ಸ್ಥಳ: ದಕ್ಷಿಣ ಕನ್ನಡ (ಕರ್ನಾಟಕ)

ಹುದ್ದೆಗಳ ಮಾಹಿತಿ:
ಅಂಗನವಾಡಿ ಕಾರ್ಯಕರ್ತೆಯರು: 73
ಅಂಗನವಾಡಿ ಸಹಾಯಕಿ: 262

ಶೈಕ್ಷಣಿಕ ಅರ್ಹತೆ:
ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ವಿದ್ಯಾರ್ಹತೆ : ದ್ವೀತಿಯ ಪಿಯುಸಿ / ಡಿಪ್ಲೊಮ ಇಸಿಸಿಇ ಪಾಸಾಗಿರಬೇಕು. ಹಾಗೂ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಅಂಗನವಾಡಿ ಸಹಾಯಕಿ ಹುದ್ದೆಗೆ ವಿದ್ಯಾರ್ಹತೆ : 10ನೇ ತರಗತಿ ಪಾಸಾಗಿರಬೇಕು.

ವಯೋಮಿತಿ:
ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರು ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 19 ವರ್ಷ ಪೂರೈಸಿರಬೇಕು. ಹಾಗೂ ಗರಿಷ್ಠ 35 ವರ್ಷ ವಯೋಮಿತಿ ಮೀರಿರಬಾರದು.

ವಯೋಮಿತಿ ಸಡಿಲಿಕೆ:
ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ: 3 ವರ್ಷ
SC /ST ಮತ್ತು ಪ್ರವರ್ಗ-1ರ ಅಭ್ಯರ್ಥಿಗಳಿಗೆ: 5 ವರ್ಷ

ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅವರು ವಿದ್ಯಾರ್ಹತೆ ಪಡೆದ ಅಂಕಗಳ ಆಧಾರದ ಮೇಲೆ ಮೆರಿಟ್ ಲಿಸ್ಟ್ ಮೂಲಕ ಆಯ್ಕೆ ಮಾಡಲಾಗುತ್ತದೆ.

ಇದನ್ನೂ ಓದಿ: ನಮ್ಮ ಬೆಂಗಳೂರು ಮೆಟ್ರೋ ನೇಮಕಾತಿ 2 ಲಕ್ಷಕ್ಕೂ ಅಧಿಕ ವೇತನ

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:

  1. ಜನ್ಮ ದಿನಾಂಕ ಇರುವ 10ನೇ ತರಗತಿ ಅಂಕಪಟ್ಟಿ.
  2. ವಾಸಸ್ಥಳ ದೃಢೀಕರಣ ಪತ್ರ.
  3. ವಿದ್ಯಾರ್ಹತೆ ಬಗ್ಗೆ ಪ್ರಮಾಣ ಪತ್ರ.
  4. ಆದಾಯ ಮತ್ತು ಜಾತಿ ಪ್ರಮಾಣ ಪತ್ರ.
  5. ವಿಧವೆಯಾಗಿದ್ದಲ್ಲಿ ಪತಿಯ ಮರಣ ಪ್ರಮಾಣ ಪತ್ರ.
  6. ಯೋಜನಾ ನಿರಾಶ್ರಿತರಾಗಿದ್ದಲ್ಲಿ ಪ್ರಮಾಣ ಪತ್ರ.
  7. ವಿಚ್ಛೇದಿತರಾಗಿದ್ದಲ್ಲಿ ಪ್ರಮಾಣ ಪತ್ರ.
  8. ಅಂಗವಿಕಲರಾಗಿದ್ದಲ್ಲಿ ಪ್ರಮಾಣ ಪತ್ರ.

ಇದನ್ನೂ ಓದಿ: ಕೆನರಾ ಬ್ಯಾಂಕ್ ನಿಂದ 3000 ಹುದ್ದೆಗಳಿಗೆ ಅರ್ಜಿ ಆಹ್ವಾನ 

ಪ್ರಮುಖ ದಿನಾಂಕಗಳು:
ಸಲ್ಲಿಸಲು ಕೊನೆ ದಿನಾಂಕ : 29-09-2024

WCD Dakshina Kannada Recruitment 2024 ಪ್ರಮುಖ ಲಿಂಕ್‌ಗಳು:
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್‌: karnemakaone.kar.nic

ಇದನ್ನೂ ಓದಿ: ಕಾರ್ಮಿಕರ ಮಕ್ಕಳಿಗೆ ಲೇಬರ್ ಕಾರ್ಡ್ ವಿದ್ಯಾರ್ಥಿವೇತನ ಅರ್ಜಿ ಆಹ್ವಾನ

WhatsApp Group Join Now
Telegram Group Join Now

Leave a Comment