ಕರ್ನಾಟಕ ರಾಜ್ಯ ಮಹಿಳೆ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ದಾವಣಗೆರೆ ಜಿಲ್ಲೆಯ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ & ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಮಹಿಳೆ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಂಗನವಾಡಿ ಕಾರ್ಯಕರ್ತೆ & ಸಹಾಯಕಿಯರು ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದ ಅಗತ್ಯ ಮಾಹಿತಿ, ಹುದ್ದೆ ಸಂಖ್ಯೆ, ಅರ್ಜಿ ಸಲ್ಲಿಸುವ ವಿಧಾನ, ವಿದ್ಯಾರ್ಹತೆ, ವೇತನ, ಪ್ರಮುಖ ದಿನಾಂಕಗಳು, ಆಯ್ಕೆ ಪ್ರಕ್ರಿಯೆ, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್ ಸೇರಿದಂತೆ ಸಂಪೂರ್ಣ ವಿವರವನ್ನು ಕೆಳಗೆ ನೀಡಲಾಗಿದೆ.
ಸಂಕ್ಷಿಪ್ತ ವಿವರ:
ಉದ್ಯೋಗದ ಸ್ಥಳ: ದಾವಣಗೆರೆ (ಕರ್ನಾಟಕ)
ಒಟ್ಟು ಹುದ್ದೆಗಳ ಸಂಖ್ಯೆ: 232
ಹುದ್ದೆ ಹೆಸರು: ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರು
ಹುದ್ದೆಗಳ ಮಾಹಿತಿ:
ಅಂಗನವಾಡಿ ಕಾರ್ಯಕರ್ತೆಯರು: 34
ಅಂಗನವಾಡಿ ಸಹಾಯಕಿಯರು: 198
ವಿದ್ಯಾರ್ಹತೆ:
ಅಂಗನವಾಡಿ ಕಾರ್ಯಕರ್ತೆಯರು: ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಪೂರ್ಣಗೊಳಿಸರಬೇಕು.
ಸಹಾಯಕಿಯರು: 10ನೇ ತರಗತಿ ಪಾಸಾಗಿರಬೇಕು.
ವಯೋಮಿತಿ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ ಕನಿಷ್ಟ 19 ವರ್ಷ ಪೂರೈಸಿರಬೇಕು. ಮತ್ತು ಗರಿಷ್ಟ ವಯಸ್ಸು 35 ವರ್ಷ ಮೀರಿರಬಾರದು.
ಅರ್ಜಿ ಶುಲ್ಕ:
ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿ ಸಲ್ಲಿಸಲು ಪ್ರಮುಖ ದಾಖಲಾತಿಗಳು:
- ಅಂಕಪಟ್ಟಿ
- ವಾಸಸ್ಥಳ ದೃಢೀಕರಣ ಪ್ರಮಾಣ ಪತ್ರ
- ಜನನ ಪ್ರಮಾಣ ಪತ್ರ
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ವಿಚ್ಛೇದನ ಪ್ರಮಾಣ ಪತ್ರ
- ಯೋಜನಾ ನಿರಾಶ್ರಿತರಾಗಿದ್ದಲ್ಲಿ ಪ್ರಮಾಣ ಪತ್ರ
ವೇತನ ಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 10,000 ರಿಂದ 15,000 ರೂ. ವೇತನವನ್ನು ಪ್ರತಿ ತಿಂಗಳು ನೀಡಲಾಗುತ್ತದೆ.
ಆಯ್ಕೆ ವಿಧಾನ :
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ವಿದ್ಯಾರ್ಹತೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಮೆರಿಟ್ ಲಿಸ್ಟ್ ಮೂಲಕ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು:
ಆನ್‌ಲೈನ್ ಅರ್ಜಿ ಸ್ವೀಕರಿಸಲು ಕೊನೆಯ ದಿನಾಂಕ: 09-09-2024
ಪ್ರಮುಖ ಲಿಂಕ್‌ಗಳು:
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ