ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಧಾರವಾಡ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆಸಕ್ತ ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಧಾರವಾಡ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದ ಬೇಕಾಗುವ ಮಾಹಿತಿ, ಹುದ್ದೆ ಸಂಖ್ಯೆ, ಅರ್ಜಿ ಸಲ್ಲಿಸುವ ವಿಧಾನ, ವೇತನ ಪ್ರಮುಖ ದಿನಾಂಕಗಳು, ಆಯ್ಕೆ ಪ್ರಕ್ರಿಯೆ, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್ ಸೇರಿದಂತೆ ಸಂಪೂರ್ಣ ವಿವರವನ್ನು ಕೆಳಗೆ ನೀಡಲಾಗಿದೆ.
WCD Dharwad Anganwadi Recruitment 2024:
ಹುದ್ದೆಗಳ ಹೆಸರು : ಅಂಗನವಾಡಿ ಕಾರ್ಯಕರ್ತೆಯರು, ಅಂಗನವಾಡಿ ಸಹಾಯಕಿಯರು
ಒಟ್ಟು ಹುದ್ದೆಗಳ ಸಂಖ್ಯೆ : 199
ಉದ್ಯೋಗದ ಸ್ಥಳ: ಹುಬ್ಬಳ್ಳಿ-ಧಾರವಾಡ (ಕರ್ನಾಟಕ)
ಶೈಕ್ಷಣಿಕ ಅರ್ಹತೆ :
ಅಂಗನವಾಡಿ ಕಾರ್ಯಕರ್ತೆ: ಪಿಯುಸಿ ವಿದ್ಯಾರ್ಹತೆ ಪೂರ್ಣಗೊಳಿಸರಬೇಕು. 10 ನೇ ತರಗತಿಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಕಡ್ಡಾಯ ಓದಿರಬೇಕು.
ಅಂಗನವಾಡಿ ಸಹಾಯಕಿ: 10 ನೇ ತರಗತಿ ಉತ್ತೀರ್ಣರಾಗಿಬೇಕು ಹಾಗೂ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಕನಿಷ್ಠ 19 ವರ್ಷ ಪೂರೈಸಿರಬೇಕು ಮತ್ತು ಗರಿಷ್ಠ 35 ವಯಸ್ಸು ಮೀರಿರಬಾರದು.
ವಯೋಮಿತಿ ಸಡಿಲಿಕೆ :
ವಿಕಲಚೇತನ ಅಭ್ಯರ್ಥಿಗಳಿಗೆ: 10 ವರ್ಷ
WCD Dharwad Anganwadi Recruitment 2024 ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅವರು ವಿದ್ಯಾರ್ಹತೆಯಲ್ಲಿ ಪಡೆದ ಅಂಕಗಳನ್ನು ಆಧರಿಸಿ ಕ್ರೂಡೀಕೃತ ಪಟ್ಟಿಯನ್ನು ಸಿದ್ಧಪಡಿಸಿ ಅರ್ಹ ಮತ್ತು ಮೆರಿಟ್ ಪರಿಶೀಲಿಸಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿ ಸಲ್ಲಿಸಲು ಪ್ರಮುಖ ದಾಖಲೆಗಳು :
- ಜನನ ಪ್ರಮಾಣ ಪತ್ರ
- S.S.L.C.ಅಂಕಪಟ್ಟಿ
- ನಿಗದಿತ ವಿದ್ಯಾರ್ಹತೆಯ ಅಂಕಪಟ್ಟಿ
- ವಾಸಸ್ಥಳ ದೃಢೀಕರಣ ಪತ್ರ
- ಅರ್ಜಿದಾರರ ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಪತಿಯ ಮರಣ ಪ್ರಮಾಣ ಪತ್ರ ಹಾಗೂ ವಿಧವಾ ಪ್ರಮಾಣ ಪತ್ರ (ವಿಧವಾ ಅಭ್ಯರ್ಥಿಗಳಿಗೆ ಮಾತ್ರ)
- ಅಂಗವಿಕಲತೆ ಪ್ರಮಾಣಪತ್ರ (ಅಂಗವಿಕಲ ಅಭ್ಯರ್ಥಿಗಳ )
- ವಿಚ್ಛೇದನ ಪ್ರಮಾಣ ಪತ್ರ (ನ್ಯಾಯಾಲಯದಿಂದ ಪಡೆದಿರಬೇಕು)
ಪ್ರಮುಖ ದಿನಾಂಕಗಳು :
ಆನ್‌ಲೈನ್ ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ : ಆಗಸ್ಟ್ 01, 2024
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಸೆಪ್ಟೆಂಬರ್ 02, 2024
WCD Dharwad Anganwadi Recruitment 2024 ಪ್ರಮುಖ ಲಿಂಕ್‌ಗಳು:
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: karnemakaone.kar.nic.in
ಇತರೆ ಉದ್ಯೋಗ ಮಾಹಿತಿ:
- ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನೇಮಕಾತಿ 2024
- ಅಕೌಂಟೆಂಟ್ ಕಂ ಕ್ಲರ್ಕ, ಕಂಪ್ಯೂಟರ್ ಆಪರೇಟರ್ ಹುದ್ದೆಗಳ ನೇಮಕಾತಿ
- ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿ