ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಗದಗ ಜಿಲ್ಲಾ ವ್ಯಾಪ್ತಿಯಲ್ಲಿ ವಿವಿಧ ಗ್ರಾಮ ಪಂಚಾಯತಿಗಳು ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಸಹಾಯಕಿಯರು ಹುದ್ದೆಗಳನ್ನು ಭರ್ತಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಸಹಾಯಕಿಯರು ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತೆಗಳು, ಒಟ್ಟು ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.
WCD Gadag Anganwadi Recruitment 2024
ಹುದ್ದೆಗಳ ಹೆಸರು : ಅಂಗನವಾಡಿ ಕಾರ್ಯಕರ್ತೆಯರು, ಅಂಗನವಾಡಿ ಸಹಾಯಕಿಯರು
ಒಟ್ಟು ಹುದ್ದೆಗಳ ಸಂಖ್ಯೆ : 196
ಹುದ್ದೆಗಳ ಸಂಖ್ಯೆ:
ಅಂಗನವಾಡಿ ಕಾರ್ಯಕರ್ತೆಯರು: 46
ಅಂಗನವಾಡಿ ಸಹಾಯಕಿಯರು: 150
ಉದ್ಯೋಗದ ಸ್ಥಳ : ಗದಗ, ಗಜೇಂದ್ರಗಡ, ಲಕ್ಷ್ಮೇಶ್ವರ, ಮುಂಡರಗಿ, ನರಗುಂದ, ರೋಣ ಮತ್ತು ಶಿರಹಟ್ಟಿ.
ಶೈಕ್ಷಣಿಕ ಅರ್ಹತೆ :
ಅಂಗನವಾಡಿ ಕಾರ್ಯಕರ್ತೆ: ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ದ್ವೀತಿಯ ಪಿಯುಸಿ ಉತ್ತೀರ್ಣರಾಗಿರಬೇಕು. ಹಾಗೂ SSLC ಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಓದಿರಬೇಕು.
ಅಂಗನವಾಡಿ ಸಹಾಯಕಿಯರು: ಅಭ್ಯರ್ಥಿಯು ಫ್ರೌಡ್ ಶಾಲಾ ಶಿಕ್ಷಣ ಮಂಡಳಿಯಿಂದ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ಉತ್ತೀರ್ಣರಾಗಿರಬೇಕು.
WCD Gadag Anganwadi Recruitment 2024 ವಯೋಮಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 19 ವರ್ಷ ಪೂರೈಸಿರಬೇಕು. ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
ವಿಕಲಚೇತನರಿಗೆ: 10 ವರ್ಷ
ಇದನ್ನೂ ಓದಿ: ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ 50,000 ರೂ. ವೇತನ
ಆಯ್ಕೆ ವಿಧಾನ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಅವರು ವಿದ್ಯಾರ್ಹತೆಯಲ್ಲಿ ಪಡೆದ ಅಂಕಗಳನ್ನು ಆಧರಿಸಿ ಕ್ರೂಡೀಕೃತ ಪಟ್ಟಿಯನ್ನು ಸಿದ್ಧಪಡಿಸಿ ಅರ್ಹತೆ ಮತ್ತು ಮೆರಿಟ್ ಪಟ್ಟಿ ಪರಿಶೀಲಿಸಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ಪ್ರಮುಖ ದಾಖಲೆಗಳು :
- ಜನನ ಪ್ರಮಾಣ ಪತ್ರ
- S.S.L.C.ಅಂಕಪಟ್ಟಿ
- ನಿಗದಿ ಪಡಿಸಿದ ವಿದ್ಯಾರ್ಹತೆಯ ಅಂಕಪಟ್ಟಿ
- ವಾಸಸ್ಥಳ ದೃಢೀಕರಣ ಪತ್ರ
- ಅಭ್ಯರ್ಥಿಗಳ ಜಾತಿ ಪ್ರಮಾಣ ಪತ್ರ
- ಪತಿಯ ಮರಣ ಪ್ರಮಾಣ ಪತ್ರ ಹಾಗೂ ವಿಧವಾ ಪ್ರಮಾಣ ಪತ್ರ
- ಅಂಗವಿಕಲತೆ ಪ್ರಮಾಣಪತ್ರ (ಅಂಗವಿಕಲರಿಗೆ)
- ವಿಚ್ಛೇದನ ಪ್ರಮಾಣ ಪತ್ರ (ನ್ಯಾಯಾಲಯದಿಂದ ಪಡೆದಿರಬೇಕು)
ಇದನ್ನೂ ಓದಿ: 1130 ಫೈರ್ ಮ್ಯಾನ್ & ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿ 2024
ಅರ್ಜಿ ಶುಲ್ಕದ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಪ್ರಮುಖ ದಿನಾಂಕಗಳು :
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ : ಆಗಸ್ಟ್ 17, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 17/09/ 2024
(ಮುಂಡರಗಿ, ನರಗುಂದ) ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 19/09/2024
WCD Gadag Anganwadi Recruitment 2024 ಪ್ರಮುಖ ಲಿಂಕ್‌ಗಳು:
ಗದಗ ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಲಕ್ಷ್ಮೇಶ್ವರ ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಮುಂಡರಗಿ ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ನರಗುಂದ ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ರೋಣ ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಶಿರಹಟ್ಟಿ ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: karnemakaone.kar.nic.in
ಇದನ್ನೂ ಓದಿ: ರೈಲ್ವೆ ಇಲಾಖೆಯಿಂದ 14000 ಹುದ್ದೆಗಳ ನೇಮಕಾತಿ 2024