ಕರ್ನಾಟಕ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೈಸೂರು (WCD Mysore) ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಸಹಾಯಕಿಯರು ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೈಸೂರು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಸಹಾಯಕಿಯರು ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತೆಗಳು, ಒಟ್ಟು ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.
WCD Mysore Recruitment 2024 ನೇಮಕಾತಿ ವಿವರ:
ಹುದ್ದೆ ಹೆಸರು: ಅಂಗನವಾಡಿ ಶಿಕ್ಷಕಿ ಮತ್ತು ಅಂಗನವಾಡಿ ಸಹಾಯಕಿ
ಒಟ್ಟು ಹುದ್ದೆಗಳ ಸಂಖ್ಯೆ: 412
ಉದ್ಯೋಗದ ಸ್ಥಳ: ಮೈಸೂರು (ಕರ್ನಾಟಕ)
ಹುದ್ದೆಗಳ ವಿವರ:
ಅಂಗನವಾಡಿ ಕಾರ್ಯಕರ್ತೆ: 83
ಅಂಗನವಾಡಿ ಸಹಾಯಕಿಯರು: 329
ವಿದ್ಯಾರ್ಹತೆ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಮಂಡಳಿ ಅಥವಾ ಸಂಸ್ಥೆಯಿಂದ 10ನೇ ತರಗತಿ, ದ್ವೀತಿಯ ಪಿಯುಸಿ, ಡಿಪ್ಲೊಮಾ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಅಂಗನವಾಡಿ ಶಿಕ್ಷಕಿ ಮತ್ತು ಸಹಾಯಕಿ ನೇಮಕಾತಿ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 19 ವರ್ಷ ಆಗಿರಬೇಕು ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.
ವೇತನ ಶ್ರೇಣಿ:
ಅಂಗನವಾಡಿ ಶಿಕ್ಷಕಿ ಮತ್ತು ಸಹಾಯಕಿ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ವೇತನವನ್ನು ಅಧಿಸೂಚನೆ ಪ್ರಕಾರ ನೀಡಲಾಗುತ್ತದೆ.
ಅರ್ಜಿಶುಲ್ಕ:
ಯಾವುದೇ ಶುಲ್ಕ ಇರುವುದಿಲ್ಲ.
ಇದನ್ನೂ ಓದಿ: ಪಿಎಂ ಕಿಸಾನ್ 18 ನೇ ಕಂತಿನ ಹಣ ಈ ದಿನ ಖಾತೆಗೆ ಜಮಾ
ಆಯ್ಕೆ ವಿಧಾನ:
ಅಂಗನವಾಡಿ ಶಿಕ್ಷಕಿ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಮಹಿಳಾ ಅಭ್ಯರ್ಥಿಗಳನ್ನು ಮೆರಿಟ್ ಲಿಸ್ಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು:
ಆನ್‌ಲೈನ್ ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 25/09/2024
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 19/10/2024
ಇದನ್ನೂ ಓದಿ: ಗೃಹ ಲಕ್ಷ್ಮೀ ಫಲಾನುಭವಿಗಳಿಗೆ ಗುಡ್ ನ್ಯೂಸ್
WCD Mysore Recruitment 2024 ಪ್ರಮುಖ ಲಿಂಕ್‌ಗಳು:
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: karnemakaone.kar.nic.in
ಇದನ್ನೂ ಓದಿ: ಆಧಾರ್ ಕಾರ್ಡ್ ನಲ್ಲಿ ಪೋಟೋ, ಹೆಸರು, ವಿಳಾಸ, ತಿದ್ದುಪಡಿ ಮಾಡಲು ಮತ್ತೆ ದಿನಾಂಕ ವಿಸ್ತರಣೆ