ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿವಮೊಗ್ಗ ಜಿಲ್ಲಾದ್ಯಂತ ಅಂಗನವಾಡಿ ಕೇಂದ್ರಗಳಲ್ಲಿ ಇರುವ ವಿರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದ ಅಗತ್ಯ ಮಾಹಿತಿ, ಹುದ್ದೆ ಸಂಖ್ಯೆ, ಅರ್ಜಿ ಸಲ್ಲಿಸುವ ವಿಧಾನ, ವಿದ್ಯಾರ್ಹತೆ, ವೇತನ, ಪ್ರಮುಖ ದಿನಾಂಕಗಳು, ಆಯ್ಕೆ ಪ್ರಕ್ರಿಯೆ, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್ ಸೇರಿದಂತೆ ಸಂಪೂರ್ಣ ವಿವರವನ್ನು ಕೆಳಗೆ ನೀಡಲಾಗಿದೆ.
WCD Shivamogga Anganwadi Recruitment 2024 ಸಂಕ್ಷಿಪ್ತ ಮಾಹಿತಿ:
ಹುದ್ದೆಗಳ ಹೆಸರು : ಅಂಗನವಾಡಿ ಕಾರ್ಯಕರ್ತೆಯರು, ಅಂಗನವಾಡಿ ಸಹಾಯಕಿಯರು
ಒಟ್ಟು ಹುದ್ದೆಗಳ ಸಂಖ್ಯೆ : 575
ಉದ್ಯೋಗದ ಸ್ಥಳ : ಶಿವಮೊಗ್ಗ (ಕರ್ನಾಟಕ)
ಹುದ್ದೆಗಳ ಮಾಹಿತಿ:
ಅಂಗನವಾಡಿ ಕಾರ್ಯಕರ್ತೆಯರು: 127
ಅಂಗನವಾಡಿ ಸಹಾಯಕಿಯರು: 448
ಶೈಕ್ಷಣಿಕ ಅರ್ಹತೆ :
ಅಂಗನವಾಡಿ ಕಾರ್ಯಕರ್ತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ ಪಿಯುಸಿ ಉತ್ತೀರ್ಣರಾಗಿಬೇಕು. ಜೊತೆಗೆ 10ನೇ ತರಗತಿಯಲ್ಲಿ ಪ್ರಥಮ ಭಾಷೆ ಕನ್ನಡ ಅಥವಾ ದ್ವಿತೀಯ ಭಾಷೆಯನ್ನು ಕಡ್ಡಾಯ ಓದಿರಬೇಕು.
ಅಂಗನವಾಡಿ ಸಹಾಯಕಿ: 10 ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ವಯೋಮಿತಿ:
ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ವಯಸ್ಸು ಕನಿಷ್ಠ 19 ವರ್ಷ ತುಂಬಿರಬೇಕು ಮತ್ತು ಗರಿಷ್ಠ 35 ವಯಸ್ಸು ಮೀರಿರಬಾರದು.
ವಯೋಮಿತಿ ಸಡಿಲಿಕೆ:
ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.
WCD Shivamogga Anganwadi Recruitment 2024 ವೇತನ ಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 8,000 ರಿಂದ 15,000 ರೂ. ವೇತನ ನೀಡಲಾಗುತ್ತದೆ.
ಆಯ್ಕೆ ವಿಧಾನ :
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಅವರು ವಿದ್ಯಾರ್ಹತೆಯಲ್ಲಿ ಪಡೆದ ಅಂಕಗಳಿಗನುಸಾರವಾಗಿ ಕ್ರೂಡೀಕೃತ ಪಟ್ಟಿಯನ್ನು ಸಿದ್ಧಪಡಿಸಿ ಅರ್ಹತೆ ಮತ್ತು ಮೆರಿಟ್ ಆಧಾರದ ಮೇಲೆ ಹೆಚ್ಚು ಅಂಕಗಳನ್ನು ಪಡೆದ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸಲು ಪ್ರಮುಖ ದಾಖಲೆಗಳು :
- ಜನನ ಪ್ರಮಾಣ ಪತ್ರ
- S.S.L.C.ಅಂಕಪಟ್ಟಿ
- ನಿಗದಿತ ವಿದ್ಯಾರ್ಹತೆಯ ಅಂಕಪಟ್ಟಿ
- ವಾಸಸ್ಥಳದ ದೃಢೀಕರಣ ಪತ್ರ
- ಅಭ್ಯರ್ಥಿಗಳ ಆದಾಯ ಮತ್ತು ಜಾತಿ ಪ್ರಮಾಣ ಪತ್ರ
- ಪತಿಯ ಮರಣ ಪ್ರಮಾಣ ಪತ್ರ ಹಾಗೂ ವಿಧವಾ ಪ್ರಮಾಣ ಪತ್ರ (ವಿಧವಾ ಅಭ್ಯರ್ಥಿಗಳು)
- ಅಂಗವಿಕಲತೆ ಪ್ರಮಾಣಪತ್ರ (ವಿಕಲಚೇತನರಿಗೆ)
- ವಿಚ್ಛೇದನ ಪ್ರಮಾಣ ಪತ್ರ (ನ್ಯಾಯಾಲಯದಿಂದ)
ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಪ್ರಮುಖ ದಿನಾಂಕಗಳು :
ಆನ್‌ಲೈನ್ ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ : ಜುಲೈ 30, 2024
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 29/08/ 2024
WCD Shivamogga Anganwadi Recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: karnemakaone.kar.nic.in