ಅಂಗನವಾಡಿ ಟೀಚರ್ ಹುದ್ದಗಳ ನೇಮಕಾತಿ : WCD Uttara Kannada Anganwadi Recruitment 2025

WhatsApp Group Join Now
Telegram Group Join Now

WCD Uttara Kannada Anganwadi Recruitment 2025 : ಕನಾ೯ಟಕ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಬರುವ ಉತ್ತರ ಕನ್ನಡ ಜಿಲ್ಲೆಯ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ಭರ್ತಿಗೆ ಅಜಿ೯ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಮಹಿಳಾ ಅಭ್ಯರ್ಥಿಗಳು ಎಪ್ರಿಲ್ 4, 2025 ರೊಳಗೆ ಆನ್ ಲೈನ್ ಮೂಲಕ ಅಜಿ೯ ಸಲ್ಲಿಸಬಹುದು.

ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ, (Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.

WCD Uttara Kannada Anganwadi Recruitment 2025

ನೇಮಕಾತಿ ಇಲಾಖೆ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
ಹುದ್ದೆ ಹೆಸರುಅಂಗನವಾಡಿ ಕಾರ್ಯಕರ್ತೆಯರು, ಅಂಗನವಾಡಿ ಸಹಾಯಕಿಯರು
ಒಟ್ಟು ಹುದ್ದೆಗಳ ಸಂಖ್ಯೆ : 491 ಹುದ್ದೆಗಳು
ಉದ್ಯೋಗದ ಸ್ಥಳ: ಉತ್ತರ ಕನ್ನಡ ಜಿಲ್ಲೆ (ಕನಾ೯ಟಕ)

ಹುದ್ದೆ ಹೆಸರುಹುದ್ದೆಗಳ ಸಂಖ್ಯೆ
ಅಂಗನವಾಡಿ ಕಾರ್ಯಕರ್ತೆಯರು115
ಅಂಗನವಾಡಿ ಸಹಾಯಕಿಯರು376

ಹುದ್ದೆಗಳ ವಿವರ:

ಉದ್ಯೋಗದ ಸ್ಥಳಅಂಗನವಾಡಿ ಕಾರ್ಯಕರ್ತೆ ಅಂಗನವಾಡಿ ಸಹಾಯಕಿ
ಅಂಕೋಲಾ0421
ಕುಮಟಾ0537
ಹಳಿಯಾಳ1323
ಯಲ್ಲಾಪುರ0823
ಜೋಯಿಡಾ2034
ಶಿರಸಿ2469
ಸಿದ್ದಾಪುರ1232
ಮುಂಡಗೋಡ0939
ಕಾರವಾರ0317
ಹೊನ್ನಾವರ0444
ದಾಂಡೇಲಿ0416
ಭಟ್ಕಳ0921

ಶೈಕ್ಷಣಿಕ ಅರ್ಹತೆ :
ಅಂಗನವಾಡಿ ಕಾರ್ಯಕರ್ತೆಯರು: ಹುದ್ದೆಗೆ ಅಜಿ೯ ಸಲ್ಲಿಸುವ ಅಭ್ಯಾಥಿ೯ಯು ಯಾವುದೇ ವಿಶ್ವವಿದ್ಯಾಲಯದಿಂದ 12ನೇ ತರಗತಿ (ಪಿಯುಸಿ) ವಿದ್ಯಾಹ೯ತೆ ಹೊಂದಿರಬೇಕು. ಹಾಗೂ ಎಸ್.ಎಸ್.ಎಲ್.ಸಿಯಲ್ಲಿ ಪ್ರಥಮ ಭಾಷೆ ಕನ್ನಡ ಅಥವಾ ದ್ವಿತೀಯ ಭಾಷೆಯನ್ನಾಗಿ ಓದಿರಬೇಕು.
ಅಂಗನವಾಡಿ ಸಹಾಯಕಿ: ಈ ಹುದ್ದೆಗೆ ಅಜಿ೯ ಸಲ್ಲಿಸುವ ಅಭ್ಯಾಥಿ೯ಯು ಯಾವುದೇ ಫ್ರೌಢ ವಿದ್ಯಾ ಸಂಸ್ಥೆಯಿಂದ ಎಸ್.ಎಸ್.ಎಲ್.ಸಿ (10ನೇ ತರಗತಿ) ಅಥವಾ ತತ್ಸಮಾನ ವಿದ್ಯಾಹ೯ತೆ ಹೊಂದಿರಬೇಕು.

ವಯೋಮಿತಿ:
ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳ ವಯೋಮಿತಿ ಕನಿಷ್ಠ 19 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ : 
ಇತರೆ ಹಿಂದುಳಿದ ವರ್ಗದ (OBC) ಅಭ್ಯಾಥಿ೯ಗಳಿಗೆ: 38 ವರ್ಷ
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ (SC/ST), ಪ್ರವರ್ಗ-1 ಅಭ್ಯರ್ಥಿಗಳಿಗೆ: 40 ವರ್ಷ
ವಿಕಲಚೇತನ ಅಭ್ಯಾಥಿ೯ಗಳಿಗೆ: 10 ವರ್ಷ

ಆಯ್ಕೆ ವಿಧಾನ:
ಅಜಿ೯ ಸಲ್ಲಿಸುವ ಅಭ್ಯರ್ಥಿಗಳನ್ನು ಅವರು ವಿದ್ಯಾರ್ಹತೆಯಲ್ಲಿ ಪಡೆದಿರುವ ಅಂಕಗಳ ಆಧಾರ ಹಾಗೂ ಬೋನಸ್ ಅಂಕಗಳನ್ನು ಕಡೆಗನಿಸಿ ಪಡೆದ ಒಟ್ಟು ಅಂಕಗಳಿಗನುಸಾರವಾಗಿ ಕ್ರೂಡೀಕೃತ ಮೆರೀಟ್ ಪಟ್ಟಿಯನ್ನು ಸಿದ್ಧಪಡಿಸಿ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ವೇತನ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಸೂಚನೆ ಪ್ರಕಾರ ಅಂಗನವಾಡಿ ಈ ಹುದ್ದೆಗಳಿಗೆ ಆಯ್ಕೆಯಾದವರಿಗೆ ಪ್ರತಿ ತಿಂಗಳು 10,000-15,000 ರೂಪಾಯಿವರೆಗೆ ವೇತನ ನೀಡಲಾಗುತ್ತದೆ.

ಅರ್ಜಿ ಶುಲ್ಕ : ಅಜಿ೯ ಸಲ್ಲಿಸುವ ಎಲ್ಲಾ ವಗ೯ದ ಅಭ್ಯಾಥಿ೯ಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಪ್ರಮುಖ ದಿನಾಂಕಗಳು :
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ : ಮಾರ್ಚ್ 10, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಏಪ್ರಿಲ್ 04, 2025

WCD Uttara Kannada Anganwadi Recruitment 2025 ಪ್ರಮುಖ ಲಿಂಕ್ ಗಳು:
ಅಧಿಕೃತ ಅಧಿಸೂಚನೆ ಓದಲು: ಇಲ್ಲಿ ಕ್ಲಿಕ್‌ ಮಾಡಿ
ಆನ್ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್‌ ಮಾಡಿ
ವೆಬ್‌ಸೈಟ್‌ ವಿಳಾಸ: karnemakaone.kar.nic.in

ಈ ಸುದ್ದಿಯನ್ನೂ ಓದಿ: ಭಾರತೀಯ ಪಶುಪಾಲನ್‌ ನಿಗಮ್‌ ನೇಮಕಾತಿ 10, 12ನೇ ತರಗತಿ ಪಾಸಾದವರಿಗೆ ಅವಕಾಶ

ಈ ಸುದ್ದಿಯನ್ನೂ ಓದಿ: ಜಿಲ್ಲಾ ಪಂಚಾಯತ್ ನಲ್ಲಿ ಅಟೆಂಡರ್ ಹುದ್ದೆಗಳ ನೇಮಕಾತಿ ರೂ. 57550 ವೇತನ


Leave a Comment