10 ನೇ ತರಗತಿ, ದ್ವಿತೀಯ ಪಿಯುಸಿ, ಡಿಪ್ಲೊಮ ಶಿಕ್ಷಣ ಪಡೆದು ಉದ್ಯೋಗ ಹುಡುಕುತ್ತಿರುವ ಆಕಾಂಕ್ಷಿಗಳಿಗೆ, ಇಲ್ಲಿದೆ ಗುಡ್ ನ್ಯೂಸ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಬರುವ ಉತ್ತರ ಕನ್ನಡ ಜಿಲ್ಲೆಯ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು, ಅಂಗನವಾಡಿ ಸಹಾಯಕಿ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅಧಿಸೂಚನೆ ಹೊರಡಿಸಲಾಗಿದೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಭವಿಸಿದ ಪ್ರಮುಖ ವಿವರಗಳು ಹುದ್ದೆಗಳ ವಿವರ, ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ & ಅರ್ಜಿ ಸಲ್ಲಿಸುವ ವಿಧಾನ, ಅಧಿಕೃತ ಅಧಿಸೂಚನೆ, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ಗಳು ಮುಂತಾದ ವಿವರಗಳನ್ನು ಕೆಳಗೆ ನೀಡಲಾಗಿದೆ ಖಚಿತ ಪಡೆಸಿಕೊಂಡು ಅರ್ಜಿ ಸಲ್ಲಿಸಿ.
WCD Uttara Kannada Recruitment 2024:
ಉದ್ಯೋಗದ ಸ್ಥಳ: ಉತ್ತರ ಕನ್ನಡ ಜಿಲ್ಲೆ
ಒಟ್ಟು ಹುದ್ದೆಗಳ ಸಂಖ್ಯೆ: 344
ಹುದ್ದೆಗಳ ಸಂಖ್ಯೆ: ಅಂಗನವಾಡಿ ಕಾರ್ಯಕರ್ತೆಯರು ಮತ್ತು, ಅಂಗನವಾಡಿ ಸಹಾಯಕಿ
ಹುದ್ದೆಗಳ ಮಾಹಿತಿ:
ಅಂಗನವಾಡಿ ಕಾರ್ಯಕರ್ತೆ: 81
ಅಂಗನವಾಡಿ ಸಹಾಯಕಿ: 263
ಶೈಕ್ಷಣಿಕ ಅರ್ಹತೆ:
ಉತ್ತರ ಕನ್ನಡ ಜಿಲ್ಲೆಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು, ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ, ಪಿಯುಸಿ, ಡಿಪ್ಲೊಮ ಪಾಸಾಗಿರುವ ಮಹಿಳಾ ಅಭ್ಯರ್ಥಿಗಳು ಸರ್ಕಾರಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ವಯೋಮಿತಿ:
ಅಂಗನವಾಡಿ ಕಾರ್ಯಕರ್ತೆಯರು ಮತ್ತು, ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ ಕನಿಷ್ಠ 18 ವರ್ಷ ಪೂರೈಸಿರಬೇಕು ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.
ವೇತನ ಶ್ರೇಣಿ:
ಅಂಗನವಾಡಿ ಕಾರ್ಯಕರ್ತೆಯರು ಮತ್ತು, ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ವೇತನ 6000 ರಿಂದ 10000 ರೂ ನೀಡಲಾಗುತ್ತದೆ.
ವಯೋಮಿತಿ ಸಡಿಲಿಕೆ:
ಒಬಿಸಿ ವರ್ಗದ ಅಭ್ಯರ್ಥಿಗಳಿಗೆ: 03 ವರ್ಷ,
ಎಸ್‌ಸಿ / ಎಸ್‌ಟಿ / ಪ್ರವರ್ಗ-1 ಅಭ್ಯರ್ಥಿಗಳಿಗೆ: 05 ವರ್ಷ
ಆಯ್ಕೆ ಪ್ರಕ್ರಿಯೆ:
ಅಂಗನವಾಡಿ ಕಾರ್ಯಕರ್ತೆಯರು ಮತ್ತು, ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸಿದ ಮಹಿಳಾ ಅಭ್ಯರ್ಥಿಗಳನ್ನು ಅವರು 10 ನೇ ತರಗತಿಯಲ್ಲಿ ಪಡೆದ ಅಂಕಗಳನ್ನು ಆಧರಿಸಿ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ಲಿಂಕ್‌ಗಳು:
ಆನ್‌ಲೈನ್ ಅರ್ಜಿ ಸ್ವೀಕರಿಸಲು ಆರಂಭಿಕ ದಿನಾಂಕ: 12-07-2024
ಆನ್‌ಲೈನ್ ಅರ್ಜಿ ಸ್ವೀಕರಿಸಲು ಕೊನೆಯ ದಿನಾಂಕ: 12-08-2024
WCD Uttara Kannada Recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ಇಲಾಖೆ ವೆಬ್‌ಸೈಟ್ ವಿಳಾಸ: karnemakaone.kar.nic.in
ಇತರೆ ಉದ್ಯೋಗ ಮಾಹಿತಿ:
- ಕರ್ನಾಟಕ ಅಂಚೆ ಇಲಾಖೆ ನೇಮಕಾತಿ 2024
- ಕೃಷಿ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿ 2024
- ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ IDFC FIRST ಬ್ಯಾಂಕ್ನಿಂದ 2 ಲಕ್ಷ ರೂ. ಸ್ಕಾಲರ್ಶಿಪ್