1170 ಅಂಗನವಾಡಿ ಟೀಚರ್ ಹುದ್ದೆಗಳ ನೇಮಕಾತಿ SSLC, PUC ವಿದ್ಯಾರ್ಹತೆ | WCD Vijayapura Recruitment 2024 

WhatsApp Group Join Now
Telegram Group Join Now

ಕರ್ನಾಟಕ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿಜಯಪುರ ಜಿಲ್ಲೆಯಾದ್ಯಂತ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ‌ ಕಾರ್ಯಕರ್ತೆಯರು, ಸಹಾಯಕಿಯರು (Anganwadi Worker & Helper) ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ನೇಮಕ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ (Women and Child Development Department Vijayapura) ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತೆಗಳು, ಒಟ್ಟು ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.

WCD Vijayapura Recruitment 2024 

ಹುದ್ದೆ ಹೆಸರು: ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು

ಉದ್ಯೋಗದ ಸ್ಥಳ: ವಿಜಯಪುರ ಜಿಲ್ಲೆ (Vijayapura)

ಒಟ್ಟು ಹುದ್ದೆಗಳ ಸಂಖ್ಯೆ: 1170

ಹುದ್ದೆಗಳ ಸಂಖ್ಯೆ:
ಅಂಗನವಾಡಿ ಕಾರ್ಯಕರ್ತೆಯರು: 313
ಅಂಗನವಾಡಿ ಸಹಾಯಕಿಯರು: 857

ವಿದ್ಯಾರ್ಹತೆ:
ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದ್ವೀತಿಯ ಪಿಯುಸಿ ಪಾಸಾಗಿರಬೇಕು. ಅಥವಾ ಡಿಪ್ಲೋಮಾ ಉತ್ತೀರ್ಣರಾಗಿರಬೇಕು. ಹಾಗೂ ಅಂಗನವಾಡಿ ಸಹಾಯಕಿ ಹುದ್ದೆಗೆ ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ವಯೋಮಿತಿ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ ವಯಸ್ಸು 19 ವರ್ಷ ಪೂರೈಸಿರಬೇಕು. ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ: 03 ವರ್ಷ
ಎಸ್‌ಸಿ/ ಎಸ್‌ಟಿ / ಪ್ರವರ್ಗ-1 ಅಭ್ಯರ್ಥಿಗಳಿಗೆ: 05 ವರ್ಷ

WCD Vijayapura Recruitment 2024  ವೇತನ ಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ರೂ.10,000 – 15,000 ವರೆಗೆ ವೇತನ ನೀಡಲಾಗುತ್ತದೆ.

ಅರ್ಜಿ ಶುಲ್ಕ:
ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು, ಅವರು ವಿದ್ಯಾರ್ಹತೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಶಾರ್ಟ್‌ ಲಿಸ್ಟ್‌ ಮಾಡಿ, ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಾಖಲೆಗಳು:

  1. ಜನ್ಮ ದಿನಾಂಕ ಇರುವ SSLC ಅಂಕಪಟ್ಟಿ,
  2. ನಿಗದಿತ ವಿದ್ಯಾರ್ಹತೆಯ ಅಂಕಪಟ್ಟಿ
  3. ಆಧಾರ ಕಾರ್ಡ/ಮತದಾರರ ಗುರುತಿನ ಚೀಟಿ/ರೇಷನ್ ಕಾರ್ಡ
  4. ವಾಸಸ್ಥಳ ದೃಢೀಕರಣ ಪತ್ರ
  5. ಅಭ್ಯರ್ಥಿಗಳ ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  6. ಪತಿಯ ಮರಣ ಪ್ರಮಾಣ ಪತ್ರ ಹಾಗೂ ವಿಧವಾ ಪ್ರಮಾಣ ಪತ್ರ
  7. ವಿಕಲಚೇತನರ ಪ್ರಮಾಣಪತ್ರ UDID ( Unique Disability ID)
  8. ವಿಚ್ಛೇದನ ಪ್ರಮಾಣ ಪತ್ರ (ನ್ಯಾಯಾಲಯದಿಂದ)
  9. ಯೋಜನಾ ನಿರಾಶ್ರಿತರ ಪ್ರಮಾಣ ಪತ್ರ

ಪ್ರಮುಖ ದಿನಾಂಕಗಳು:
ಆನ್‌ಲೈನ್‌ ಅರ್ಜಿ ಸ್ವೀಕಾರ ಪ್ರಾರಂಭದ ದಿನಾಂಕ: 10 ಅಕ್ಟೋಬರ್, 2024
ಆನ್‌ಲೈನ್‌ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 09 ನವೆಂಬರ್, 2024

WCD Vijayapura Recruitment 2024  ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: karnemakaone.kar.nic.in

ಭಾರತೀಯ ವಾಯುಯಾನ ಸೇವೆ ನೇಮಕಾತಿ 3508 ಹುದ್ದೆಗಳು

ನೈಋತ್ಯ ರೈಲ್ವೆ ಹುಬ್ಬಳ್ಳಿಯಲ್ಲಿ ಉದ್ಯೋಗ 10ನೇ, 12ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ 

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿ 1,30,000 ರೂ. ವೇತನ 

Leave a Comment