ವೆಸ್ಟ್ ಸೆಂಟ್ರಲ್ ರೈಲ್ವೆಯಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಪಶ್ಚಿಮ ಕೇಂದ್ರ ರೈಲ್ವೆ ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತೆಗಳು, ಒಟ್ಟು ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.
West Central Railway Recruitment 2024
ಹುದ್ದೆಗಳ ಹೆಸರು : ಅಪ್ರೆಂಟಿಸ್
ಉದ್ಯೋಗದ ಸ್ಥಳ : ಅಖಿಲ ಭಾರತ
ಒಟ್ಟು ಹುದ್ದೆಗಳ ಸಂಖ್ಯೆ : 3317
ಶೈಕ್ಷಣಿಕ ಅರ್ಹತೆ:
ರೈಲ್ವೆ ನೇಮಕಾತಿ ಅನ್ವಯ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ಸಂಸ್ಥೆಯಿಂದ SSLC ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಹಾಗೂ ಆಯಾ ಟ್ರೇಡ್ ಗಳಲ್ಲಿ ಐಟಿಐ (ನ್ಯಾಷನಲ್ ಟ್ರೇಡ್ ಸರ್ಟಿಫಿಕೇಟ್) ಪಡೆದಿರಬೇಕು.
ವಯೋಮಾನ :
ರೈಲ್ವೆ ನೇಮಕಾತಿ ಅನ್ವಯ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ ವಯಸ್ಸು 15 ವರ್ಷ ಪೂರೈಸಿರಬೇಕು ಮತ್ತು ಗರಿಷ್ಠ 24 ವರ್ಷ ಮೀರಿರಬಾರದು.
West Central Railway Recruitment 2024 ವಯೋಮಿತಿ ಸಡಿಲಿಕೆ :
- ಒಬಿಸಿ ಅಭ್ಯರ್ಥಿಗಳಿಗೆ: 03 ವರ್ಷ
- SC/ST ಅಭ್ಯರ್ಥಿಗಳಿಗೆ: 05 ವರ್ಷ
- ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ: 10 ವರ್ಷ
ಆಯ್ಕೆ ವಿಧಾನ :
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ವಿದ್ಯಾರ್ಹತೆಯಲ್ಲಿ ಪಡೆದಿರುವ ಅಂಕಗಳ ಆಧಾರದ ಮೇಲೆ ಮೆರಿಟ್ ಲಿಸ್ಟ್ ಸಿದ್ಧಪಡಿಸಿ ಮೆರಿಟ್ ಲಿಸ್ಟ್ ನಲ್ಲಿ ಆಯ್ಕೆಯಾದ ಅಭ್ಯರ್ಥಿಗಳನ್ನು ದಾಖಲೆಗಳ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುತ್ತದೆ.
ವೇತನ ಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 8,000- 10,000 ರೂ. ವೇತನ ನೀಡಲಾಗುತ್ತದೆ.
ಅರ್ಜಿ ಶುಲ್ಕದ ವಿವರ :
- SC/ST, ಮಹಿಳಾ, PWD ಅಭ್ಯರ್ಥಿಗಳು: 00
- ಇತರೆ ಎಲ್ಲಾ ಅಭ್ಯರ್ಥಿಗಳು: 100 ರೂ.
ಶುಲ್ಕ ಪಾವತಿಸುವ ವಿಧಾನ :
ಡೆಬಿಟ್ ಕಾರ್ಡ್
ಕ್ರೆಡಿಟ್ ಕಾರ್ಡ್
ನೆಟ್ ಬ್ಯಾಂಕಿಂಗ್
ಪ್ರಮುಖ ದಿನಾಂಕಗಳು :
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: ಆಗಸ್ಟ್ 05, 2024
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಸೆಪ್ಟೆಂಬರ್ 04, 2024
West Central Railway Recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು : ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: nitplrrc.com
ಇತರೆ ಉದ್ಯೋಗ ಮಾಹಿತಿ: