ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಡಿಯಲ್ಲಿ ಬರುವ ರಾಜ್ಯದ ವಿವಿಧ ಜಿಲ್ಲೆಗಳ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ (Department of Women and Child Development) ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅಧಿಸೂಚನೆಯನ್ನು ಹೊರಡಿಸಲಾಗಿದೆ.
Anganwadi Teacher Job: ಈ ಪೈಕಿ ಬೆಳಗಾವಿ ಗ್ರಾಮೀಣ ವ್ಯಾಪ್ತಿಯ ಅಂಗನವಾಡಿ ಕೇಂದ್ರ ಗಳಲ್ಲಿ ಖಾಲಿ ಇರುವ 07 ಅಂಗನವಾಡಿ ಕಾರ್ಯಕರ್ತೆ (Anganwadi Workers) 26 ಅಂಗನವಾಡಿ ಸಹಾಯಕಿಯರು (Anganwadi assistant) ಹಾಗೂ ಬೆಳಗಾವಿ ಜಿಲ್ಲೆಯ 13 ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಖಾಲಿ ಹುದ್ದೆಗಳನ್ನು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
Women and Child Development Recruitment 2024
ಹುದ್ದೆಗಳ ಹೆಸರು: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರು
ಒಟ್ಟು ಹುದ್ದೆಗಳ ಸಂಖ್ಯೆ: 46
ಉದ್ಯೋಗದ ಸ್ಥಳ: ಬೆಳಗಾವಿ ಜಿಲ್ಲೆ ಕರ್ನಾಟಕ
ಶೈಕ್ಷಣಿಕ ಅರ್ಹತೆ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರು ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಶಾಲಾ/ ಕಾಲೇಜುಗಳಲ್ಲಿ ಅಂಗನವಾಡಿ ಸಹಾಯಕಿ ಹುದ್ದೆ ಅರ್ಜಿ ಸಲ್ಲಿಸುವರು 10ನೇ ತರಗತಿ ಪಾಸಾಗಿರಬೇಕು. ಮತ್ತು ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸುವರು ದ್ವೀತಿಯ ಪಿಯುಸಿ ಪಾಸಾಗಿರಬೇಕು.
ಪಿಎಂ ಕಿಸಾನ್ ಫಲಾನುಭವಿಗಳಿಗೆ ಸಂತಸದ ಸುದ್ದಿ
ವಯೋಮಿತಿ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 19 ವರ್ಷ ಪೂರೈಸಿರಬೇಕು. ಮತ್ತು ಗರಿಷ್ಟ 35 ವರ್ಷ ಮೀರತಕ್ಕದ್ದಲ್ಲ. ವಿಕಲಚೇತನರಿಗೆ 10 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಆಯ್ಕೆ ಪ್ರಕ್ರಿಯೆ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಾರ್ಯಕರ್ತೆ ಮತ್ತು ಸಹಾಯಕಿಯರು ಹುದ್ದೆಗಳನ್ನು ಅಭ್ಯರ್ಥಿಗಳ ಅಂಕಪಟ್ಟಿ ಆಧರಿಸಿ ಮತ್ತು ದಾಖಲೆಗಳ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಾಖಲಾತಿಗಳು:
- ಅರ್ಜಿ ನಿಗದಿತ ನಮೂನೆಯಲ್ಲಿ (ಆನ್‌ಲೈನ್)
- ಜನ್ಮ ಪ್ರಮಾಣ ಪತ್ರ
- ಜನ್ಮ ದಿನಾಂಕ ಇರುವ SSLC ಅಂಕಪಟ್ಟಿ
- SSLC, PUC ವಿದ್ಯಾರ್ಹತೆಯ ಅಂಕಪಟ್ಟಿ
- ವಾಸಸ್ಥಳ ದೃಢೀಕರಣ ಪತ್ರ (ರವಾಸಿ)
- ಅರ್ಜಿದಾರರ ಜಾತಿ ಪ್ರಮಾಣ ಪತ್ರ
- ಆಧಾರ್ ಕಾರ್ಡ್/ರೇಷನ್ ಕಾರ್ಡ್/ಮತದಾರರ ಗುರುತಿನ ಚೀಟಿ
- ವಿಕಲಚೇತನರು, ವಿಧವೆಯರು, ಅಂಗವಿಕಲ, ಯೋಜನಾ ನಿರಾಶ್ರಿತರು, ಲಿಂಗತ್ವ ಅಲ್ಪಸಂಖ್ಯಾತರು ಸಂಬಂಧಿತ ಪ್ರಮಾಣ ಪತ್ರ.
- ಎಲ್ಲಾ ದಾಖಲೆಗಳಿಗೆ ದೃಢೀಕರಣ (attested) ಮಾಡಿಸಿ ಸಲ್ಲಿಸಬೇಕು.
PUC ಯಿಂದ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗೆ ಪ್ರತಿ ತಿಂಗಳು 3200 ಸ್ಕಾಲರ್ಶಿಪ್
ಪ್ರಮುಖ ದಿನಾಂಕಗಳು:
ಬೆಳಗಾವಿ ಜಿಲ್ಲಾ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಹುದ್ದೆಗಳಿಗೆ ಹುದ್ದೆಗಳಿಗೆ ಕೊನೆಯ ದಿನಾಂಕ ಆಗಸ್ಟ್ 04, 2024
ಬೆಳಗಾವಿ ಗ್ರಾಮೀಣ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಹುದ್ದೆಗಳಿಗೆ ಕೊನೆಯ ದಿನಾಂಕ: ಆಗಸ್ಟ್ 08, 2024
Department of Women and Child Development Recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ಬೆಂಗಳೂರು ಮೆಟ್ರೋ ಹೊಸ ನೇಮಕಾತಿ 2024