Yuvanidhi Application: ರಾಜ್ಯ ಸರ್ಕಾರದ ಪ್ರಮುಖ ಐದು ಯೋಜನೆಗಳಲ್ಲಿ ಒಂದಾದ ‘ಯುವನಿಧಿ’ ಯೋಜನೆಯನ್ನು 2023ರ ಡಿಸೆಂಬರ್, 26 ರಂದು ಚಾಲನೆ ನೀಡಲಾಗಿದ್ದು. ಈ ಯೋಜನೆಯಡಿ ನಿರುದ್ಯೋಗಿ ಯುವಕ, ಯುವತಿಯರಿಗೆ ಪ್ರತಿ ತಿಂಗಳು 3,000 ಮತ್ತು 1,500 ರೂ. ಖಾತೆಗೆ ಜಮಾ ಮಾಡಲಾಗುತ್ತದೆ. ಈ ಭತ್ಯೆಯನ್ನು ಪಡೆಯಲು ಫಲಾನುಭವಿಗಳು ಈ ಕೆಲಸ ಮಾಡುವುದು ಕಡ್ಡಾಯ.
ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಮಹತ್ತರ ಖಾತರಿ ಯೋಜನೆಯಾದ ‘ಯುವನಿಧಿ’ ಯೋಜನೆಯನ್ನು ಕರ್ನಾಟಕ ರಾಜ್ಯ ಸರ್ಕಾರ ಪದವಿ ಮತ್ತು ಡಿಪ್ಲೋಮಾ ಪದವಿಯನ್ನು 2022-23 ಮತ್ತು 2023-24 ನೇ ಸಾಲಿನಲ್ಲಿ ಉತ್ತೀರ್ಣರಾದ ಕರ್ನಾಟಕ ನಿರುದ್ಯೊಗಿ ಯುವತಿಯರಿಗೆ ಭತ್ಯೆಯನ್ನು ನೀಡುವ ಯೋಜನೆಯಾಗಿದೆ.
ಅಭ್ಯರ್ಥಿಗಳು ಯಾವುದೇ ಪದವಿ, ಡಿಪ್ಲೋಮಾ, ಸ್ನಾತಕೋತ್ತರ ಪದವಿ ಉತ್ತೀರ್ಣರಾಗಿ ಸರ್ಕಾರಿ, ಖಾಸಗಿ, ಸ್ವಯಂ ಉದ್ಯೋಗ ಇಲ್ಲದೆ ಮತ್ತು ಉನ್ನತ ಶಿಕ್ಷಣವನ್ನು ಮುಂದುವರೆಸದೆ ಇರುವ ವಿದ್ಯಾರ್ಥಿಗಳು ಕರ್ನಾಟಕ ಒನ್, ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಲ್ಲಿ ‘ಸೇವಾಸಿಂಧು’ ಪೋರ್ಟಲ್ https://sevasindhugs.karnataka.gov.in ಭೇಟಿ ನೀಡಿ ಉಚಿತವಾಗಿ ಆನ್‌ಲೈನ್ ಮೂಲಕ ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಬಹುದು.
Yuvanidhi Application ನಿರುದ್ಯೋಗ ಭತ್ಯೆ:
ಈ ಯೋಜನೆಯಡಿ ಅರ್ಜಿ ಸಲ್ಲಿಸುವ ಎಲ್ಲಾ ಪದವೀಧರರಿಗೆ, ಸ್ನಾತಕೋತ್ತರ ಪದವಿ, ಬಿಎಡ್ ಪದವೀಧರರಿಗೆ ಪ್ರತಿ ತಿಂಗಳು 3000 ರೂ. ಹಾಗೂ ಡಿಪ್ಲೋಮಾ ಪಾಸಾದವರಿಗೆ ಪ್ರತಿ ತಿಂಗಳು 1500 ರೂ. ನಿರುದ್ಯೋಗ ಭತ್ಯೆಯನ್ನು ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ 2 ವರ್ಷದವರೆಗೆ ನೀಡಲಾಗುತ್ತದೆ.
YuvanidhiSelf DeclarationNovember: ಈಗಾಗಲೇ ಯುವನಿಧಿ ಯೋಜನೆಯಡಿ ಅರ್ಜಿ ಸಲ್ಲಿಸಿ ಅರ್ಹರಾದ ಎಲ್ಲಾ ನಿರುದ್ಯೋಗಿ ಯುವಕ, ಯುವತಿಯರು ಪ್ರತಿ ತಿಂಗಳು 25 ನೇ ದಿನಾಂಕದೊಳಗೆ ಉನ್ನತ ಶಿಕ್ಷಣವನ್ನು ಮುಂದುವರೆಸದಿರುವ ಕುರಿತು ಮತ್ತು ಯಾವುದೇ ಉದ್ಯೋಗ ಹೊಂದಿಲ್ಲದಿರುವ ಕುರಿತು ‘ಸೇವಾಸಿಂಧು’ ಪೋರ್ಟಲ್ https://sevasindhugs.karnataka.gov.in ಗೆ ಭೇಟಿ ನೀಡಿ ಕಡ್ಡಾಯವಾಗಿ ಸ್ವಯಂ ಘೋಷಣೆ (yuvanidhi self monthly declaration) ನೀಡಿದರೆ ಮಾತ್ರ ಮುಂದಿನ ತಿಂಗಳ ನಿರುದ್ಯೋಗ ಭತ್ಯೆ ನೀಡಲಾಗುತ್ತದೆ. ಎಂದು ಜಿಲ್ಲಾ ಉದ್ಯೋಗಾಧಿಕಾರಿ ರೇಖಾ ಗಣಪತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೇಕಾದ ದಾಖಲೆ:
ಎಸ್‌ಎಸ್‌ಎಲ್ಸಿ, ಪಿಯುಸಿ, ಪದವಿ ಅಥವಾ ಡಿಪ್ಲೋಮಾ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಬ್ಯಾಂಕ್ ಖಾತೆ ಸಂಖ್ಯೆ, ಮೊಬೈಲ್ ನಂಬರ್.
ಹೆಚ್ಚಿನ ಮಾಹಿತಿಗಾಗಿ:
ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ ಇವರನ್ನು ಕಚೇರಿ ವೇಳೆಯಲ್ಲಿ ಸಹಾಯವಾಣಿ ಸಂಖ್ಯೆ 8005999918, 8123312319, 8296020826 ಗೆ ಕರೆ ಮಾಡಿ ಮಾಹಿತಿ ಪಡೆಯಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಅವರು ತಿಳಿಸಿದ್ದಾರೆ.
ಕೃಷಿ ಇಲಾಖೆಯಿಂದ ಶೇ 90% ಸಹಾಯಧನದಲ್ಲಿ ಮಿನಿ ಟ್ರ್ಯಾಕ್ಟರ್ ಮತ್ತು ಕೃಷಿ ಉಪಕರಣ ಪಡೆಯಲು ಅರ್ಜಿ ಆಹ್ವಾನ
ಗ್ರಾಮೀಣ ಪ್ರದೇಶದ ಕುಶಲಕರ್ಮಿಗಳಿಗೆ ಉಚಿತ ಟೂಲ್‌ಕಿಟ್ ಪಡೆಯಲು ಅರ್ಜಿ ಆಹ್ವಾನ